ಬೆಂಗಳೂರು : ನಟ ಪುನೀತ್ ರಾಜ್ ಕುಮಾರ್ ಇಂದು ನಮ್ಮನ್ನೆಲ್ಲ ಬಿಟ್ಟು ಬಾರದ ಲೋಕಕ್ಕೆ ಪಯಣಸಿದ್ದಾರೆ. ಅಪ್ಪು ನಿಧನದಿಂದಾಗಿ ಕರ್ನಾಟಕ ಸ್ತಬ್ಧಗೊಂಡಿದೆ. ಕನ್ನಡ ಸಿನಿಮಾ ಅಭಿಮಾನಿಗಳು ಆಘಾತಕ್ಕೆ ಒಳಗಾಗಿದ್ದಾರೆ.
ಹೃದಯಾಘಾತದಿಂದಾಗಿ ಪುನೀತ್ ರಾಜ್ ಕುಮಾರ್ ಬೆಂಗಳೂರಿನ ವಿಕ್ರಂ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.
ಕನ್ನಡದಲ್ಲಿ 30ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿರುವ ಅಪ್ಪು, ಕೇವಲ ನಟನೆಗೆ ಸೀಮಿತವಾಗಿರದೇ ಸಮಾಜಮುಖಿ ಕಾರ್ಯಕ್ರಮಗಳಲ್ಲೂ ಭಾಗಿಯಾಗಿದ್ದರು.
ವೃದ್ಧ ಜೀವಗಳನ್ನು ಕಾಪಾಡುವ ಅನಾಥಾಶ್ರಮ ರಕ್ಷಿಸುವ ಅರಸನಾಗಿ ನಿಜ ಜೀವನದಲ್ಲಿ ಅಪ್ಪು ರಾಜಕುಮಾರನಾಗಿಯೇ ಮೆರೆದಿದ್ದವರು.
ಸಾವಿರಾರು ವಿದ್ಯಾರ್ಥಿಗಳಿಗೆ ಉಚಿತ ಶಿಕ್ಷಣ, ವೃದ್ಧರ ಮತ್ತು ಅನಾಥರ ಪೋಷಣೆ ಜತೆಗೆ ಹೆಣ್ಣು ಮಕ್ಕಳಿಗೆ ಶಿಕ್ಷಣ ಧಾರೆ ಎರೆದಿದ್ದರು.
ಅನೇಕ ಅನಾಥ ಮಕ್ಕಳನ್ನು ಪೋಷಣೆ ಮಾಡುತ್ತಿದ್ದರು. ಅನೇಕ ವೃದ್ಧಾಶ್ರಮಗಳನ್ನು , ಗೋ ಶಾಲೆಗಳನ್ನು ಪೋಷಣೆ ಮಾಡುತ್ತಿದ್ದರು.
ಪುನೀತ್ ರಾಜ್ ಕುಮಾರ್ ಸುಮಾರು 26 ಕ್ಕಿಂತಲೂ ಹೆಚ್ಚು ಅನಾಥಾಶ್ರಮ, 19 ಗೋಶಾಲೆ, 16 ವೃದ್ಧಾಶ್ರಮಗಳನ್ನು ಪೋಷಣೆ ಮಾಡುತ್ತಿದ್ದರು. ಸುಮಾರು 45 ಕ್ಕೂ ಹೆಚ್ಚು ಶಾಲಾ ಮಕ್ಕಳನ್ನು ಓದಿಸುತ್ತಿದ್ದರು.
ಪುನೀತ್ ಮಾಡಿರುವ ಸೇವೆ, ಮೆರೆರೆಯುತ್ತಿದ್ದ ಹೃದಯ ಶ್ರೀಮಂತಿಕೆ ಇದೀಗ ಸಾರ್ವಜನಿಕ ವಲಯದಲ್ಲಿ ಚರ್ಚೆಗೆ ನಾಂದಿ ಹಾಡಿದೆ.