ಬೆಂಗಳೂರು: ಬೆಂಗಳೂರು : ಪುನೀತ್ ರಾಜ್ ಕುಮಾರ್ ಅವರು ನಮ್ಮನ್ನ ಅಗಲಿದ್ದಾರೆ ಎನ್ನುವ ಕಹಿ ಸತ್ಯವನ್ನ ಅವರ ಕುಟುಂಬದವರು , ಅಭಿಮಾನಿಗಳು , ಇಡೀ ಕರುನಾಡಿನ ಜನರಿಗೆ ಅರಗಿಸಿಕೊಳ್ಳಲು ಆಗುತ್ತಿಲ್ಲ.. ಇನ್ನೂ ಸಿನಿಮಾರಂಗದ ತಾರೆಯರು ಕೂಡ ಅಪ್ಪು ನೆನೆದು ಭಾವುಕರಾಗುತ್ತಾ ಅಪ್ಪು ನೆನಪನ್ನು ಸ್ಮರಿಸುತ್ತಿದ್ದಾರೆ.. ಸೋಷಿಯಲ್ ಮೀಡಿಯಾಗಳಲ್ಲಿ ಪೋಸ್ಟ್ ಗಳನ್ನ ಹಾಕುತ್ತಿದ್ದಾರೆ..
ಅಪ್ಪು ಅಂತಿಮ ದರ್ಶನದ ವೇಳೆ ತಾರೆಯರೂ ಕಣ್ಣೀರಿಟ್ಟಿದ್ದರು. ಯಶ್ , ಕಿಚ್ಚ ಸುದೀಪ್ ಇಂದ ಹಿಡಿದು ಪ್ರತಿಯೊಬ್ಬರು ಅಂತಿಮ ಕ್ರಿಯೆ ವೇಳೆ ಕಣ್ಣೀರು ಹಾಕಿದ್ದರು.. ಇದೀಗ ಪುನೀತ್ ರಾಜ್ ಕುಮಾರ್ ಅಗಲಿಕೆಯ ದುಃಖವನ್ನು ಸ್ಯಾಂಡಲ್ವುಡ್ ನಟಿ ರಾಧಿಕಾ ಪಂಡಿತ್ 12 ದಿನಗಳ ನಂತರ ಸೋಶಿಯಲ್ ಮೀಡಿಯಾದಲ್ಲಿ ತೋಡಿಕೊಂಡಿದ್ದಾರೆ. ಆದ್ರೆ ಕೆಲವರು ಈ ಪೋಸ್ಟ್ ಗೆ ನಕಾರತ್ಮಕ ಪ್ರಶ್ನೆಗಳನ್ನ ಕೇಳಿದ್ದಾರೆ..
ರಾಧಕಾ ಪಂಡಿತ್ ಅವರು , “ಅಪ್ಪು ಸರ್ ನೀವು ಇನ್ನು ಮುಂದೆ ಇಲ್ಲ ಎಂಬುದನ್ನು ಇನ್ನೂ ನಮ್ಮ ಮನಸ್ಸು ಒಪ್ಪಿಕೊಳ್ಳುತ್ತಿಲ್ಲ. ಇದು ನಂಬಲಾಗದ ವಿಷಯವಾಗಿದೆ. ನೀವು ಇಲ್ಲದ ಇಂಡಸ್ಟ್ರಿ ಬರಡಾಗಿದೆ. ನಿಮ್ಮೊಂದಿಗೆ ಕೆಲಸ ಮಾಡುವ ಅವಕಾಶ ನೀಡಿದ್ದಕ್ಕಾಗಿ ಧನ್ಯವಾದಗಳು. ನಿಮ್ಮನ್ನು ತುಂಬಾ ಮಿಸ್ ಮಾಡಿಕೊಳ್ಳುತ್ತಿದ್ದೇವೆ ಎಂದು ಬರೆದುಕೊಂಡು ಅಪ್ಪು ಜೊತೆಗೆ ಇರುವ ಕೆಲವು ಫೋಟೋವನ್ನು ಶೇರ್ ಮಾಡಿ ಬೇಸರ ವ್ಯಕ್ತಪಡಿಸಿದ್ದರು”. ಆದ್ರೆ ಕೆಲ ನೆಟ್ಟಿಗರು ಇದಕ್ಕೆ ಪ್ರತಿಕ್ರಿಯಿಸಿ ನೀವು ಯಾಕೆ ಅಪ್ಪು ಅಂತಿಮ ದರ್ಶನ ಮಾಡಲು ಬಂದಿಲ್ಲ ಎಂದು ಪ್ರಶ್ನಿಸಿದ್ದರು. ಇದಕ್ಕೆ ರಾಧಿಕಾ ಪಂಡಿತ್ ಮತ್ತೊಂದ್ ಪೋಸ್ಟ್ ಹಾಕಿ ಖಡಕ್ ಆಗಿ ಉತ್ತರಿಸಿದ್ದಾರೆ.
“ಜೀವನದಲ್ಲಿ ಆದಷ್ಟು ಒಬ್ಬರ ಮೇಲೆ ಕೋಪ ಇದ್ದರು ಪ್ರೀತಿ ಹಂಚಿ, ತಾಳ್ಮೆಯಿರಲಿ. ನಾನು ಅಂತಿಮ ದರ್ಶನ ಪಡೆದೆನೋ ಇಲ್ವೋ ಎಂಬುದು ಅವರ ಕುಟುಂಬಕ್ಕೆ ತಿಳಿದಿದೆ, ನಮಗೆ ತಿಳಿದಿದೆ. ಕ್ಯಾಮೆರಾ ಮುಂದೆ ಬಂದು ಮಾತನಾಡುವ ಶಕ್ತಿ ನನಗಿರಲಿಲ್ಲ. ಕ್ಯಾಮೆರಾ ಮುಂದೆ ಬಂದು ಮಾತನಾಡದೆ ಇರುವುದು ದೊಡ್ಡ ತಪ್ಪು ಎಂದು ನಾನು ಭಾವಿಸಲಿರಲಿಲ್ಲ. ಅವರ ಮೇಲಿರುವ ಪ್ರೀತಿಗೆ ನೀವು ಹೀಗೆ ಮಾತನಾಡುತ್ತಿರುವುದು ಸಹಜ. ಅಪ್ಪು ಸರ್ ಅಗಲಿಕೆ ಅವರ ಕುಟುಂಬಕ್ಕೆ ಮತ್ತು ಅಭಿಮಾನಿಗಳಾದ ನಿಮಗೆ ಎಷ್ಟು ನೋವು ನೀಡುತ್ತಿದೆಯೋ, ಅಷ್ಟೇ ನೋವು ನನಗೂ ನಮ್ಮ ಕುಟುಂಬಕ್ಕೂ ಆಗಿದೆ. ನಮ್ಮೆಲ್ಲರ ನೆಚ್ಚಿನ ಅಪ್ಪು ಸರ್ ಅಗಲಿಕೆ ಎಂದೆಂದಿಗೂ ನಮ್ನನ್ನು ಕಾಡುತ್ತಲೇ ಇರುತ್ತದೆ” ಎಂದು ಹೇಳಿದ್ದಾರೆ ರಾಧಿಕಾ ಪಂಡಿತ್.
ಅಂದ್ಹಾಗೆ ರಾಧಿಕಾ ಪಂಡಿತ್ ಪುನೀತ್ ರಾಜ್ ಕುಮಾರ್ ಅವರ ಜೊತೆ ನಟಿಸಿದ್ದ “ಹುಡುಗರು” , “ದೊಡ್ಮನೆ ಹುಡುಗ” ಸಿನಿಮಾಗಳು ಸೂಪರ್ ಹಿಟ್ ಆಗಿದ್ದವು..