ನವೆಂಬರ್ 15 ಕ್ಕೆ “ಯಾರಿಗೆ ಬೇಕು ಈ ಲೋಕ”ದ ಫಸ್ಟ್ ಲುಕ್ ಪೋಸ್ಟರ್ ರಿಲೀಸ್ …! ಪುನೀತ್ ಗೆ ಅರ್ಪಣೆ
ಬೆಂಗಳೂರು : ಸ್ಯಾಂಡಲ್ ವುಡ್ ಸಿನಿಮಾ “ಯಾರಿಗೆ ಬೇಕು ಈ ಲೋಕ”ದ ಫಸ್ಟ್ ಲುಕ್ ಪೋಸ್ಟರ್ ಅನ್ನು ನವೆಂಬರ್ 15 ಕ್ಕೆ ಸಿನಿಮಾ ತಂಡ ರಿಲೀಸ್ ಮಾಡ್ತಿದೆ.. ಈ ಪೋಸ್ಟರ್ ಅನ್ನು ಸಿನಿಮಾತಂಡ ಇತ್ತೀಚೆಗಷ್ಟೇ ನಮ್ಮನ್ನೆಲ್ಲಾ ಅಗಲಿದ ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರಿಗೆ ಅರ್ಪಿಸಿದೆ..
ಆರ್ಯವರ್ಧನ್ ನಾಯಕರಾಗಿ ಅಭಿನಯಿಸುತ್ತಿರುವ “ಯಾರಿಗೆ ಬೇಕು ಈ ಲೋಕ” ಚಿತ್ರದ ಫಸ್ಟ್ ಲುಕ್ ಪೋಸ್ಟರ್ ನವೆಂಬರ್ 15 ರಂದು ಬಿಡುಗಡೆಯಾಗಲಿದೆ. ಆರ್ಯವರ್ಧನ್ ಅವರಿಗೆ ನಾಯಕಿಯರಾಗಿ ಪ್ರಿಯಾಂಕ ರಿವಾರಿ, ಪಾವನಿ ಹಾಗೂ ವರ್ಷ ನಟಿಸುತ್ತಿದ್ದಾರೆ.
ಇನ್ನೂ ಈ ಸಿನಿಮಾದಲ್ಲಿ ಹಿರಿಯ ನಟ ವಿನೋದ್ ಕುಮಾರ್, ರಚ ರವಿ, ರಾಮು (ಜ್ಯೂನಿಯರ್ ರಾಜಕುಮಾರ್), ಶೋಭನ್ ಅಕ್ಷರ್ ಸೇರಿದಂತೆ ದೊಡ್ಡ ತಾರಾಬಳಗವಿದೆ. ಎಂ.ರಮೇಶ್ ಹಾಗೂ ಗೋಪಿ ಜಂಟಿಯಾಗಿ ನಿರ್ದೇಶಿಸುತ್ತಿರುವ ಈ ಚಿತ್ರವನ್ನು ಬಿ.ಶ್ರೀನಿವಾಸ ರಾವ್ ಹಾಗೂ ರೋಶಿನಿ ನೌಡಿಯಲ್ ನಿರ್ಮಿಸುತ್ತಿದ್ದಾರೆ.
ಮಹಿತ್ ನಾರಾಯಣ್ ಅವರ ಸಂಗೀತ ಚಿತ್ರಕ್ಕಿದೆ.. ಚಿತ್ರಕ್ಕೆ ಶ್ರೀ ವಸಂತ್ ಅವರ ಹಿನ್ನೆಲೆ ಸಂಗೀತವಿದೆ. ಎ.ಕೆ.ಆನಂದ್ ಛಾಯಾಗ್ರಹಣ, ಶ್ರೀನಿವಾಸ್ ಪಿ ಬಾಬು ಸಂಕಲನ ಹಾಗೂ ಅಲ್ಟಿಮೆಟ್ ಶಿವು ಸಾಹಸ ನಿರ್ದೇಶನ ಸಿನಿಮಾಗಿದೆ.