ಬಿಹಾರ : ಬಿಹಾರದ ಲಖಿಸರೈ ಜಿಲ್ಲೆಯಲ್ಲಿ ಎಲ್‌ಪಿಜಿ ಸಿಲಿಂಡರ್ ತುಂಬಿದ ಟ್ರಕ್‌ಗೆ ಎಸ್‌ಯುವಿ ಡಿಕ್ಕಿ ಹೊಡೆದು ಕನಿಷ್ಠ ಆರು ಜನರು ಸಾವನ್ನಪ್ಪಿದ್ದಾರೆ ಮತ್ತು ನಾಲ್ವರು ಗಾಯಗೊಂಡಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ. ಸಿಕಂದರಾ-ಶೇಖ್‌ಪುರ ರಾಜ್ಯ ಹೆದ್ದಾರಿಯಲ್ಲಿ ಈ ದುರ್ಘಟನೆ ನಡೆದಿದೆ.
ವರದಿಗಳ ಪ್ರಕಾರ, ಅಪಘಾತದಲ್ಲಿ ಸಾವನ್ನಪ್ಪಿದ ಆರು ಜನರಲ್ಲಿ ಐವರು ದಿವಂಗತ ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರ ಸಂಬಂಧಿಕರಾಗಿದ್ದಾರೆ..
ಎಸ್‌ಯುವಿ ಪ್ರಯಾಣಿಕರು ಶವಸಂಸ್ಕಾರದಿಂದ ಹಿಂತಿರುಗುತ್ತಿದ್ದರು ಮತ್ತು ಮೃತರು ಜಮುಯಿ ಜಿಲ್ಲೆಯ ನೌದಿಹಾ ಗ್ರಾಮದ ನಿವಾಸಿಗಳು ಎಂದು ಹಿರಿಯ ಪೊಲೀಸ್ ಅಧಿಕಾರಿ ತಿಳಿಸಿದ್ದಾರೆ.
ಮಂಗಳವಾರ ಮುಂಜಾನೆ ಪಿಪಾರಾ ಗ್ರಾಮದ ಬಳಿ ಎಸ್‌ಯುವಿ ಚಾಲಕನು ತನ್ನ ವಾಹನದ ಮೇಲೆ ನಿಯಂತ್ರಣ ಕಳೆದುಕೊಂಡು ವಿರುದ್ಧ ದಿಕ್ಕಿನಿಂದ ಬರುತ್ತಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಾಗ ಅಪಘಾತ ಸಂಭವಿಸಿದೆ.
ಘಟನೆಯಲ್ಲಿ ಚಾಲಕ ಸೇರಿದಂತೆ ಆರು ಮಂದಿ ಸಾವನ್ನಪ್ಪಿದ್ದಾರೆ ಎಂದು ಪೊಲೀಸ್ ವರಿಷ್ಠಾಧಿಕಾರಿ ಸುಶೀಲ್ ಕುಮಾರ್ ತಿಳಿಸಿದ್ದಾರೆ.
ವಾಹನದಲ್ಲಿದ್ದ ನಾಲ್ವರು ಗಂಭೀರವಾಗಿ ಗಾಯಗೊಂಡಿದ್ದು, ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ಕೂಡ ತಿಳಿಸಿದ್ದಾರೆ.
ಪ್ರಕರಣ ದಾಖಲಿಸಿಕೊಂಡು ಮುಂದಿನ ತನಿಖೆ ನಡೆಸಲಾಗುತ್ತಿದೆ ಎಂದು ಎಸ್ಪಿ ತಿಳಿಸಿದ್ದಾರೆ. ವರದಿಗಳ ಪ್ರಕಾರ, ವಾಹನದಲ್ಲಿ ಒಟ್ಟು 10 ಜನರಿದ್ದರು.