ಬೆಂಗಳೂರು: ಅಪ್ಪು ನಿಧನದ ನಂತರ ಮೈಸೂರಿನ ಶಕ್ತಿಧಾಮದ ಮಕ್ಕಳ ಜವಾಬ್ದಾರಿಯನ್ನ ಹೊರಲು ತಮಿಳು ನಟ ವಿಶಾಲ್ ಸಿದ್ಧರಾಗಿದ್ದಾರೆ. ಇಂದು ದಿ. ನಟ ಪುನೀತ್ ರಾಜ್‍ಕುಮಾರ್ ಮನೆಗೆ ಆಗಮಿಸಿದ ವಿಶಾಲ್ ಪುನೀತ್ ಪತ್ನಿ ಅಶ್ವಿನಿ ಬಳಿ ಈ ಬಗ್ಗೆ ಮನವಿ ಮಾಡಿಕೊಂಡರು.
ನಿನ್ನೆ ಶಿವರಾಜ್ ಕುಮಾರ್ ಜೊತೆ ಮಾತನಾಡಿದ್ದ ವಿಶಾಲ್ ಇಂದು ಪುನೀತ್ ಮನೆಗೆ ಆಗಮಿಸಿ ಶಕ್ತಿಧಾಮದ ಮಕ್ಕಳ ಜವಾಬ್ದಾರಿ ಬಗ್ಗೆ ಅಶ್ವಿನಿ ಜೊತೆ ಪ್ರಸ್ತಾಪ ಮಾಡಿ ಅನುಮತಿ ಕೇಳಿದರು. ಕೆಲವೇ ದಿನಗಳಲ್ಲಿ ಈ ಬಗ್ಗೆ ತಿಳಿಸುವುದಾಗಿ ಅಶ್ವಿನಿ ಭರವಸೆ ನೀಡಿದರು ಎನ್ನಲಾಗಿದೆ.
1,800 ವಿದ್ಯಾರ್ಥಿಗಳ ಜವಾಬ್ದಾರಿ ಬಗ್ಗೆ ವಿಶಾಲ್, ಅಶ್ವಿನಿ ಅವರೊಂದಿಗೆ ಮಾತುಕತೆ ನಡೆಸಿದ ಬಳಿಕ ಶಿವಣ್ಣ ಬಳಿಯೂ ಈ ಬಗ್ಗೆ ಚರ್ಚೆ ನಡೆಸಿದರು.