ಮುಂಬೈ : ಕಂಗನಾ ರಣಾವತ್ ಗೆ ವಿವಾದಗಳು ಹೊಸದಲ್ಲ.. ಸದಾ ಒಂದಲ್ಲಾ ಒಂದು ವಿಚಾರವಾಗಿ , ಒಬ್ಬರಲ್ಲ ಒಬ್ಬರು ಸ್ಟಾರ್ ಗಳ ಬಗ್ಗೆ ಮಾತಾನಾಡ್ತಾ , ವಿವಾದಗಳನ್ನ ಮೈ ಮೇಲೆ ಎಳೆದುಕೊಳ್ತಲೇ ಇರುತ್ತಾರೆ.. ಅಂತೆಯೇ ಇತ್ತೀಚೆಗೆ ಸ್ವಾತಂತ್ರ್ಯ ಹೋರಾಟದ ಬಗ್ಗೆ ನೀಡಿದ್ದ ಹೇಳಿಕೆ ಸಿಕ್ಕಾಪಟ್ಟೆ ಟೀಕೆಗೆ ಗುರಿಯಾಗಿದೆ.. ಹಲವರು ಕಂಗನಾ ವಿರುದ್ಧ ಆಕ್ರೋಶ ಹೊರಹಾಕ್ತಾಯಿದ್ದಾರೆ.
ಈ ನಡುವೆ ಕಂಗನಾ ತಮ್ಮ ವಿವಾದಾತ್ಮಕ ಹೇಳಿಕೆಗಳನ್ನ ಮುಂದುವರೆಸಿದ್ದಾರೆ.. 1947ರಲ್ಲಿ ಭಾರತಕ್ಕೆ ಬ್ರಿಟಿಷರಿಂದ ಸಿಕ್ಕಿದ್ದು ಸ್ವಾತಂತ್ರ್ಯವಲ್ಲ ಭಿಕ್ಷೆ ಎಂದು ಹೇಳಿ ವಿವಾದಕ್ಕೆ ಗುರಿಯಾಗಿದ್ದ ಬಾಲಿವುಡ್ ನಟಿ ಕಂಗನಾ ರಣಾವತ್ ಇದೀಗ ಮಹಾತ್ಮ ಗಾಂಧೀಜಿ ಅವರ ಅಹಿಂಸಾ ಮಂತ್ರವನ್ನೇ ಲೇವಡಿ ಮಾಡಿದ್ದಾರೆ. ಹೌದು ಸುಭಾಷ್ ಚಂದ್ರ ಬೋಸ್, ಭಗತ್ ಸಿಂಗ್ ಅವರಿಗೆ ಗಾಂಧೀಜಿ ಅವರಿಂದ ಬೆಂಬಲವೇ ಸಿಗಲಿಲ್ಲ. ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸು ಎಂಬ ಗಾಂಧೀಜಿ ಅವರ ಮಂತ್ರ ಅನುಸರಿಸಿದರೆ ನಿಮಗೆ ಸ್ವಾತಂತ್ರ್ಯ ಸಿಗುವುದಿಲ್ಲ. ಭಿಕ್ಷೆ ಮಾತ್ರ ಸಿಗುತ್ತದೆ ಎಂದು ಇನ್ಸ್ಟಾಗ್ರಾಂನಲ್ಲಿ ಪೋಸ್ಟ್ ಹಾಕಿದ್ದಾರೆ.
ನಿಮ್ಮ ನಾಯಕರನ್ನು ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ ಎಂಬ ಕ್ಯಾಪ್ಷನ್ ಕೊಟ್ಟಿದ್ದಾರೆ. ನೇತಾಜಿಯನ್ನು ಹಸ್ತಾಂತರಿಸಲು ಗಾಂಧಿ ಮತ್ತು ಇತರರ ಸಮ್ಮಿತಿ ಎಂಬ ಶೀರ್ಷಿಕೆಯ ಹಳೆಯ ಪತ್ರಿಕೆಯೊಂದರ ವರದಿಯ ತುಣಕನ್ನು ಇನ್ಸ್ಟಾಗ್ರಾಂನಲ್ಲಿ ಮಂಗಳವಾರ ಹಂಚಿಕೊಂಡಿದ್ದಾರೆ. ಜವಾಹರಲಾಲ್ ನೆಹರು ಮತ್ತು ಮೊಹಮ್ಮದ್ ಅಲಿ ಜಿನ್ನಾ ಅವರೊಂದಿಗೆ ಗಾಂಧಿಯವರು ಬ್ರಿಟಿಷ್ ನ್ಯಾಯಾಧೀಶರೊಂದಿಗೆ ಒಪ್ಪಂದಕ್ಕೆ ಬಂದಿದ್ದಾರೆ. ಬೋಸ್ ಒಂದು ವೇಳೆ ಭಾರತ ಪ್ರವೇಶಿಸಿದರೆ ಅವರನ್ನು ಹಸ್ತಾಂತರಿಸಲು ಅವರು ಒಪ್ಪಿದ್ದಾರೆ ಎಂದು ಆ ವರದಿಯಲ್ಲಿ ಉಲ್ಲೇಖಿಸಲಾಗಿದೆ.
ನೀವು ಗಾಂಧಿ ಮತ್ತು ನೇತಾಜಿಯನ್ನು ಒಟ್ಟಿಗೆ ಅಭಿಮಾನಿಸಲು ಸಾಧ್ಯವಿಲ್ಲ. ನಿರ್ಧರಿಸಿ ಆಯ್ಕೆ ಮಾಡಿಕೊಳ್ಳಿ. ವಿರೋಧಿಗಳನ್ನು ಎದುರಿಸಲಾಗದ ಹೋರಾಡುವ ಬಿಸಿ ರಕ್ತವಿಲ್ಲದವರು ಆದರೆ ಅಧಿಕಾರ ದಾಹಿಗಳಾಗಿದ್ದ ಕುತಂತ್ರಿಗಳು ಸ್ವಾತಂತ್ರ್ಯಕ್ಕಾಗಿ ಹೋರಾಡಿದವರನ್ನು ತಮ್ಮ ಯಜಮಾನರಿಗೆ ಹಸ್ತಾಂತರಿಸಿದರು ಎಂದು ಪೋಸ್ಟ್ನಲ್ಲಿ ಹೇಳಿದ್ದಾರೆ.
ಇನ್ನೂ ಭಗತ್ ಸಿಂಗ್ರನ್ನು ಗಲ್ಲಿಗೇರಿಸಬೇಕೆಂದು ಗಾಂಧೀಜಿ ಬಯಸಿದ್ದನ್ನು ಸೂಚಿಸುವ ಪುರಾವೆಗಳಿವೆ ಎಂದು ಅವರು ಕೂಡ ಹೇಳಿದ್ದಾರೆ. ಯಾರಾದರೂ ಒಂದು ಕೆನ್ನೆಗೆ ಹೊಡೆದರೆ ಇನ್ನೊಂದು ಕೆನ್ನೆ ತೋರಿಸಿ ಎಂದು ನಮಗೆ ಕಲಿಸಿದವರ ಪ್ರಕಾರ ಮತ್ತೊಂದು ಕೆನ್ನೆ ತೋರಿಸಿದರೆ ಸ್ವಾತಂತ್ರ್ಯ ಸಿಗುವುದಿಲ್ಲ. ಭಿಕ್ಷೆ ಮಾತ್ರ ಸಿಗುತ್ತದೆ. ನಿಮ್ಮ ನಾಯಕರನ್ನು ಬುದ್ಧಿವಂತಿಕೆಯಿಂದ ಆರಿಸಿಕೊಳ್ಳಿ. ಜನರು ತಮ್ಮ ಇತಿಹಾಸ ಮತ್ತು ಅವರ ನಾಯಕರನ್ನು ಅರಿತುಕೊಳ್ಳುವ ಸಮಯ ಬಂದಿದೆ ಎಂದು ಕಂಗನಾ ಪೋಸ್ಟ್ನಲ್ಲಿ ತಿಳಿಸಿದ್ದಾರೆ. ಕಂಗನಾ ಪೋಸ್ಟ್ ಗೆ ಅನೇಕರು ವಿರೋಧ ವ್ಯಕ್ತಪಡಿಸಿ ಆಕ್ರೋಶ ಹೊರಹಾಕಿದ್ರು ಅವರ ಬೆಂಬಲಕ್ಕೆ ಅನೇಕರು ನಿಂತಿದ್ದಾರೆ..