ಸಿಎಂ ಬೊಮ್ಮಾಯಿ ಅವರಿಗೆ ಸದಾ ಆಭಾರಿ : ಅಶ್ವಿನಿ ಪುನೀತ್ ರಾಜ್ ಕುಮಾರ್
ಬೆಂಗಳೂರು : ಅಪ್ಪು ನಮ್ಮನ್ನೆಲ್ಲ ಅಗಲಿ ಒಂದು ತಿಂಗಳೇ ಕಳೆದ್ರೂ ಕೂಡ ಆ ನೋವು ಇನ್ನೂ ಮಾಸಿಲ್ಲ.. ಈ ನಡುವೆ ಅಪ್ಪು ಕನಸಿನ ಗಂಧದ ಗುಡಿ ಸಾಕ್ಷ್ಯಚಿತ್ರದ ಟೈಟಲ್ ಟೀಸರ್ ಅನ್ನ ನಿನ್ನೆ ಬಿಡುಗಡೆ ಮಾಡಲಾಗಿದೆ. ಈ ಹಿನ್ನೆಲೆಯಲ್ಲಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಧನ್ಯವಾದಗಳನ್ನು ಅರ್ಪಿಸಿದ್ದಾರೆ.
ಟೀಸರ್ ಬಿಡುಗಡೆ ಕುರಿತು ಸಿಎಂ ನಿನ್ನೆ ಟ್ವೀಟ್ ಮಾಡಿದ್ದರು, ಈ ಟ್ವೀಟ್ ಗೆ ಅಶ್ವಿನಿ ಅವರು ರಿಟ್ವೀಟ್ ಮಾಡಿ, ಈ ಗಂಧದಗುಡಿ ಸಾಕ್ಷ್ಯ ಚಿತ್ರವನ್ನು ನಾಡಿನ ಪ್ರತಿಯೊಬ್ಬರಿಗೂ ತಲುಪಿಸಬೇಕಾದ ಜವಾಬ್ದಾರಿ ನಮ್ಮೆಲ್ಲರದ್ದು. ಈ ನಿಟ್ಟಿನಲ್ಲಿ ನೀವು ನೀಡುತ್ತಿರುವ ಸಹಕಾರ ಮತ್ತು ಪ್ರೋತ್ಸಾಹಕ್ಕೆ ನಾವು ಸದಾ ಆಭಾರಿ ಎಂದು ಹೇಳಿದ್ದಾರೆ.
ಬೊಮ್ಮಾಯಿ ಅವರು ಈ ಬಗ್ಗೆ ಟ್ವೀಟ್ ನಲ್ಲಿ , ಪ್ರಾಕೃತಿಕ ಸಂಪತ್ತು ರಕ್ಷಿಸುವ ನಿಟ್ಟಿನಲ್ಲಿ ಜನರಿಗೆ ಈ ಚಿತ್ರ ಪ್ರೇರಣೆಯಾಗಲಿ . ನಮ್ಮೆಲ್ಲರ ಪ್ರೀತಿಯ ಅಪ್ಪು ದಿ. ಪುನೀತ್ ರಾಜಕುಮಾರ್ ಅಭಿನಯದ ಪಿ.ಆರ್.ಕೆ ಪ್ರೊಡಕ್ಷನ್ ನಿರ್ಮಿಸಿರುವ ‘ಗಂಧದ ಗುಡಿ’ ಒಂದು ಅದ್ಭುತ ಕಲಾಕೃತಿ. ನಾಡಿನ ಪ್ರಾಕೃತಿಕ ಶ್ರೀಮಂತಿಕೆ, ಜೀವಸಂಕುಲ, ಬುಡಕಟ್ಟು ಜನರ ಸಂಸ್ಕೃತಿಗಳನ್ನು ಪರಿಚಯಿಸುವ ಮೂಲಕ, ವಿಶಿಷ್ಟ ರೀತಿಯಲ್ಲಿ ಕಥೆಯೊಂದನ್ನು ಹೇಳುತ್ತಿದೆ.
ಈ ಅದ್ಭುತ ದೃಶ್ಯಕಾವ್ಯದ ಸಂದೇಶ ಎಲ್ಲರಿಗೂ ತಲುಪಬೇಕು. ಪ್ರತಿ ಭಾರತೀಯ, ಅದರಲ್ಲೂ ವಿಶೇಷವಾಗಿ ಪ್ರತಿಯೊಬ್ಬ ಕನ್ನಡಿಗ ಕರುನಾಡಿನ ಈ ಕಥಾನಕವನ್ನು ನೋಡುವಂತಾಗಲಿ. ನಮ್ಮ ಅರಣ್ಯ, ನಮ್ಮ ಪರಿಸರ, ವೈವಿಧ್ಯಮಯ ಪ್ರಾಕೃತಿಕ ಸಂಪತ್ತನ್ನು ರಕ್ಷಿಸುವ ನಿಟ್ಟಿನಲ್ಲಿ ಈ ಚಿತ್ರ ಪ್ರೇರಣೆ ನೀಡಲಿ ಎಂದು ಹಾರೈಸುವುದಾಗಿ ತಿಳಿಸಿದ್ದರು.
ಪತ್ನಿ ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರು ಟೀಸರ್ ಬಿಡುಗಡೆಗೊಳಿಸಿದರು. ಕಣ್ಮನ ಸೆಳೆಯುವ ಪ್ರಕೃತಿ ಸಂಪತ್ತು, ಪ್ರಾಣಿ ಸಂಪತ್ತನ್ನ ಟೀಸರ್ ನಲ್ಲಿ ತೋರಿಸಿಲಾಗಿದೆ. ಖ್ಯಾತ ವೈಲ್ಡ್ ಲೈಪ್ ಫೋಟೋಗ್ರಾಫ್ರ್ ಅಮೋಘ ವರ್ಷ ಈ ಚಿತ್ರವನ್ನ ನಿರ್ದೇಶನ ಮಾಡಿದ್ದಾರೆ.
ವಿಶೇಷವೆಂದರೆ ಕೊನೆಯಲ್ಲಿ ಡಾ. ರಾಜ್‍ಕುಮಾರ್ ಧ್ವನಿಯಲ್ಲಿ ಅರಣ್ಯವನ್ನು ಉಳಿಸು, ಪ್ರಾಣಿಗಳನ್ನು ಉಳಿಸು ಎಂಬ ಸಂದೇಶ ಸಾರಲಾಗಿದೆ.
ಟೀಸರ್ ನಲ್ಲಿ ದಟ್ಟಕಾಡಿನ ನಡುವೆ ಪುನೀತ್ ಪ್ರಯಾಣಿಸುವುದನ್ನು ಕಾಣಬಹುದಾಗಿದೆ. ಆನೆ, ಹುಲಿ, ಹಾವು ಸೇರಿದಂತೆ ಸುಂದರವಾದ ಪ್ರಕೃತಿ ಸೌಂದರ್ಯದ ದೃಶ್ಯಗಳನ್ನು ಅದ್ಭುತವಾಗಿ ಸೆರೆ ಹಿಡಿಯಲಾಗಿದೆ.
ಈ ಹಿಂದೆ ರಾಜ್ ಕುಮಾರ್ ಮತ್ತು ಶಿವ ರಾಜ್ ಕುಮಾರ್ ಇಬ್ಬರು ಗಂಧದಗುಡಿ ಹೆಸರಿನ ಟೈಟಲ್ನಲ್ಲಿ ಚಿತ್ರ ನಿರ್ಮಿಸಿದ್ದವು ಎರಡು ಚಿತ್ರಗಳು ಸೂಪರ್ ಹಿಟ್ ಆಗಿದ್ದವು ಗ ಪುನೀತ್ ರಾಜ್ ಕುಮಾರ್ ಅವರು ಮತ್ತೊಮ್ಮೆ ಗಂಧದಗುಡಿ ಟೈಟಲ್ ನಲ್ಲಿ ಕರ್ನಾಟಕದ ಪ್ರಾಣಿ ಜಗತ್ತನ್ನ ಸಿನಿ ಪ್ರೇಮಿಗಳಿಗೆ ಪರಿಚಯಿಸಲಿದ್ದಾರೆ.