ಗಾನಕೋಗಿಲೆ 92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಕೋವಿಡ್ ದೃಢಪಟ್ಟ ಹಿನ್ನೆಲೆ ಅವರನ್ನಾಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಮುಂದುವರೆಸಲಾಗಿದೆ.. ಮತ್ತೊಂದೆಡೆ ಅಭಿಮಾನಿಗಳು ಆತಂಕದಲ್ಲಿದ್ದಾರೆ.
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.. ಆದ್ರೆ ವೈದ್ಯರು ಆತಂಕ ವ್ಯಕ್ತಪಡಿಸಿದ್ದು ಅವರ ಆರೋಗ್ಯದಲ್ಲಿ ಚೇತರಿಕೆ ಕಂಡುಬಂದಿಲ್ಲ ಎಂದು ತಿಳಿಸಿದ್ದಾರೆ. ಲತಾ ಮಂಗೇಶ್ಕರ್ ಆಸ್ಪತ್ರೆಗೆ ದಾಖಲಾಗಿ ಸುಮಾರು 12 ದಿನಗಳಾಗಿದ್ದು , ಆರಂಭದಿಂದಲೇ ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ಕೊಡಿಸಲಾಗ್ತಿದೆ.
ಇನ್ನೂ ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯ ಡಾ. ಪ್ರತಿತ್ ಸಂದನಿ ಅವರು , ಇನ್ನೂವರೆಗೂ ಅವರ ಆರೋಗ್ಯದಲ್ಲಿ ಚೇತರಿಕೆ ಕಾಣುತ್ತಿಲ್ಲ. ಹೀಗಾಗಿ ಐಸಿಯುನಲ್ಲಿಯೇ ಚಿಕಿತ್ಸೆ ಮುಂದುವರೆಸಲಾಗ್ತಿದೆ ಎಂದು ತಿಳಿಸಿದ್ದಾರೆ.
ಲತಾ ಮಂಗೇಶ್ಕರ್ ಅವರಿಗೆ ಉಸಿರಾಟದ ಸಮಸ್ಯೆ ಕೂಡ ಇದೆ. ಇದರ ಜೊತೆಗೇ ಕೊರೊನಾ ಸೋಂಕು ತಗುಲಿದೆ. ಅಲ್ಲದೇ ಇನ್ನೂ 10-12 ದಿನಗಳ ಕಾಲ ಲತಾ ಮಂಗೇಶ್ಕರ್ ಅವರಿಗೆ ಐಸಿಯುವಿನಲ್ಲಿ ಚಿಕಿತ್ಸೆ ಮುಂದುವರೆಸಬೇಕಾಗಬಹುದು ಎಂದು ತಿಳಿಸಿರುವ ವೈದ್ಯರು , ಅವರು ಗುಣಮುಖರಾಗಲಿ ಎಂದು ದೇವರನ್ನ ಪ್ರಾರ್ಥಿಸಿ ಎಂದೂ ಹೇಳಿದ್ಧಾರೆ.
ಲತಾ ಮಂಗೇಶ್ಕರ್ ಸುಮಾರು 70 ವರ್ಷಗಳ ಕಾಲ 30 ಸಾವಿರಕ್ಕೂ ಹೆಚ್ಚು ಹಾಡುಗಳಿಗೆ ಧ್ವನಿ ನೀಡಿದ್ದಾರೆ. ಲತಾ ಮಂಗೇಶ್ಕರ್ ಅವರಿ ಮೂರು ರಾಷ್ಟ್ರ ಪ್ರಶಸ್ತಿ, ದಾದಾ ಸಾಹೇಬ್ ಪ್ರಶಸ್ತಿ, ಪದ್ಮ ಭೂಷಣ, ಪದ್ಮ ವಿಭೂಷಣ, ಭಾರತ ರತ್ನ ಸೇರಿದಂತೆ ಹಲವು ಪ್ರಶಸ್ತಿಗಳು ಒಲಿದಿವೆ.