ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರ
ಮುಂಬೈ : ಖ್ಯಾತ ಗಾಯಕಿ , ಗಾನಕೋಗಿಲೆ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ವೈದ್ಯರು ತಿಳಿಸಿದ್ದಾರೆ. 92 ವರ್ಷದ ಲತಾ ಮಂಗೇಶ್ಕರ್ ಅವರಿಗೆ ಕೆಲ ದಿನಗಳ ಹಿಂದೆ ಕೋವಿಡ್ ಪಾಸಿಟಿವ್ ಬಂದಿತ್ತು..
ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಯಲ್ಲಿ ಲತಾ ಮಂಗೇಶ್ಕರ್ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆಸಲಾಗಿದೆ.. ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ. ಅವರನ್ನು ವೆಂಟಿಲೇಟರ್ ಸಹಾಯದಲ್ಲಿಡಲಾಗಿದೆ. ಅವರನ್ನು ತೀವ್ರ ನಿಗಾ ಘಟಕದಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ ಎಂದು ಲತಾ ಮಂಗೇಶ್ಕರ್ ಅವರಿಗೆ ಚಿಕಿತ್ಸೆ ನೀಡುತ್ತಿರುವ ವೈದ್ಯರ ತಂಡದ ಮುಖ್ಯಸ್ಥ ಪ್ರತೀಕ್ ಸಂಧಾನಿ ತಿಳಿಸಿದ್ದಾರೆ.
ಅಮದ್ಹಾಗೆ ಕಳೆದೆರೆಡು ದಿನಗಳ ಹಿಂದಷ್ಟೆ ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಮಾಧ್ಯಮದವರಿಗೆ ಮಾಹಿತಿ ನೀಡಿದ್ದ ವೈದ್ಯ ಪ್ರತೀಕ್ ಸಂಧಾನಿ ಅವರು ಲತಾ ಮಂಗೇಶ್ಕರ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ. ಅವರಿಗೆ ನೀಡಲಾಗಿದ್ದ ವೆಂಟಿಲೇಟರ್ ನೆರವನ್ನು ತೆಗೆಯಲಾಗಿದೆ , ಜೊತೆಗೆ ಅವರಿಗೆ ಕೋವಿಡ್ ಹಾಗೂ ನ್ಯುಮೋನಿಯಾ ಸಹ ವಾಸಿಯಾಗಿದೆ ಎಂದಿದ್ದರು. ಆದರೆ ಇದಿಗ ಅವರೇ ಲತಾ ಮಂಗೇಶ್ಕರ್ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎಂದು ತಿಳಿಸಿದ್ದಾರೆ.
ಕೋವಿಡ್ ಸೋಂಕಿನಿಂದಾಗಿ ಜನವರಿ 08 ರಂದು ಲತಾ ಮಂಗೇಶ್ಕರ್ ಅವರು ಮುಂಬೈನ ಬ್ರೀಚ್ ಕ್ಯಾಂಡಿ ಆಸ್ಪತ್ರೆಗೆ ದಾಖಲಾಗಿದ್ದರು. ಮೊದಲ ದಿನದಿಂದಲೂ ಅವರನ್ನು ಐಸಿಯುನಲ್ಲಿಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಮತ್ತೊಂದೆಡೆ ಲತಾ ಮಂಗೇಶ್ಕರ್ ಅವರ ಆರೋಗ್ಯದ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ನಾನಾ ಸುಳ್ಳು ಸುದ್ದಿಗಳು ಹರಿದಾಡಿದ್ದವು.