ಬೆಂಗಳೂರು : ಅನಾರೋಗ್ಯದಿಂದಾಗಿ ಕೆಲ ದಿನಗಳಿಂದ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿರುವ ಹಿರಿಯ ನಟ ರಾಜೇಶ್ ಅವರ ಆರೋಗ್ಯದಲ್ಲಿ ಚೇತರಿಕೆ ಕಂಡು ಬಂದಿದೆ ಎನ್ನಲಾಗಿದೆ.
ವಯೋಸಹಜ ಕಾಯಿಲೆಯಿಂದ ಬಳುತ್ತಿರುವ ರಾಜೇಶ್ ಅವರು ಉಸಿರಾಟದ ತೊಂದರೆಯಿಂದ ಬಳಲ್ತಿದ್ದರು… ಇತ್ತೀಚೆಗೆ ಅವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿತ್ತು… ಆದ್ರೀಗ ಅವರ ಆರೊಗ್ಯ ಸ್ಥಿತಿ ಬಗ್ಗೆ ವೈದ್ಯರು ಮಾಹಿತಿ ನೀಡಿದ್ದು , ರಾಜೇಶ್ ಅವರ ಆರೋಗ್ಯದಲ್ಲಿ ಇಂದು ಚೇತರಿಕೆ ಕಂಡಿದೆ. ಅವರು ಚಿಕಿತ್ಸೆಗೆ ಸ್ಪಂದಿಸುತ್ತಿದ್ದಾರೆ ಎಂದು ಹೇಳಿದ್ದಾರೆ.
82 ವರ್ಷದ ರಾಜೇಶ್ ಅವರು ಕಿಡ್ನಿ ವೈಫಲ್ಯ ಸೇರಿದಂತೆ ಬಹು ಅಂಗಾಂಗ ವೈಫಲ್ಯಗಳಿಂದ ಬಳಲುತ್ತಿದ್ದಾರೆ… ಕಸ್ತೂರಿ ಬಾ ನಗರದ ನ್ಯೂ ಜನಪ್ರಿಯ ಆಸ್ಪತ್ರೆಯಲ್ಲಿ ಅವರಿಗೆ ಐಸಿಯುನಲ್ಲಿ ಚಿಕಿತ್ಸೆ ಮುಂದುವರೆದಿದೆ.