‘ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್’ ಟ್ರೇಲರ್ ರಿಲೀಸ್.. ಹೊಸಬರಿಗೆ ವಸಿಷ್ಠ ಸಿಂಹ ಸಾಥ್
‘ರಾಧಾ ಸರ್ಚಿಂಗ್ ರಮಣ ಮಿಸ್ಸಿಂಗ್’ ಸಿನಿಮಾದ ಟ್ರೇಲರ್ನ್ನು ಭಾಸ್ಕರ್ ರಾವ್ ಹಾಗೂ ನಟ ವಸಿಷ್ಠ ಸಿಂಹ ನಿನ್ನೆ ಬಿಡುಗಡೆ ಮಾಡಿದ್ದಾರೆ.
ಪ್ರೀತಿ, ಸಸ್ಪೆನ್ಸ್, ಆಕ್ಷನ್ ಒಳಗೊಂಡ ಟ್ರೇಲರ್ ಯೂಟ್ಯೂಬ್ ನಲ್ಲಿ ಸೌಂಡ್ ಮಾಡುತ್ತಿದೆ.
ಮೈಸೂರು ಮೂಲದವರಾದ ಅಮೇರಿಕನ್ ಪ್ರಜೆ ಯಶಸ್ವಿ ಶಂಕರ್ ನಿರ್ಮಾಣ ಮಾಡಿರುವ ರಾಧ ಸರ್ಚಿಂಗ್ ರಮಣ ಮಿಸ್ಸಿಂಗ್ ಸಿನಿಮಾದ ಮೂಲಕ ರಾಘವ್ ಹೀರೋ ಆಗಿ ಸ್ಯಾಂಡಲ್ ವುಡ್ ಗೆ ಎಂಟ್ರಿ ಕೊಟ್ಟಿದ್ದಾರೆ.
ಎಂ ಎನ್ ಶ್ರೀಕಾಂತ್ ನಿರ್ದೇಶಕ ಮಾಡಿರುವ ಈ ಚಿತ್ರದಲ್ಲಿ ಸಂಜನಾ ಬುರ್ಲಿ ನಾಯಕಿಯಾಗಿ ಕಾಣಿಸಿಕೊಂಡಿದ್ದಾರೆ. ಇದೊಂದು ಸಸ್ಪೆನ್ಸ್ ಥ್ರಿಲ್ಲರ್ ಸಿನಿಮಾವಾಗಿದೆ.
ರಾಘವ್ ಕಾಲೇಜ್ ಹುಡುಗನ ಪಾತ್ರ ಮಾಡಿದ್ದಾರೆ. ಈ ಸಿನಿಮಾದ ಪಾತ್ರಕ್ಕಾಗಿ ಸಾಕಷ್ಟು ತಯಾರಿ ಮಾಡಿಕೊಂಡಿದ್ದಾರೆ. ಆಕ್ಟಿಂಗ್, ಡ್ಯಾನ್ಸ್ ಕಲಿತಿದ್ದಾರೆ.
ತಿಂಗಳುಗಳ ಕಾಲ ಜಿಮ್ ನಲ್ಲಿ ವರ್ಕೌಟ್ ಮಾಡಿದ್ದಾರೆ. ಸಸ್ಪೆನ್ಸ್ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಸಿನಿಮಾಗೆ ವಿಶ್ವಜಿತ್ ರಾವ್ ಛಾಯಾಗ್ರಾಹಕರಾಗಿದ್ದಾರೆ. Radha Search Ramana Missing kannada film Trailer Release