ಇಹಲೋಕ ತ್ಯಜಿಸಿದ ‘ಕಲಾ ತಪಸ್ವಿ’ ರಾಜೇಶ್…
ಕನ್ನಡ ಚಿತ್ರರಂಗದ ಹಿರಿಯ ನಟ ಕಲಾ ತಪಸ್ವಿ ರಾಜೇಶ್ ಅವರು ಅನಾರೋಗ್ಯದಿಂದಾಗಿ ಇಂದು ನಿಧನರಾಗಿದ್ದಾರೆ. ಉಸಿರಾಟದ ಸಮಸ್ಯೆ ವಯೋಸಹಜ ಕಾಯಿಲೆಗಳಿಂದ ಬಳತ್ತಿದ್ದ ಅವರನ್ನ ಫೆಬ್ರವರಿ 9 ರಂದು ಬೆಂಗಳೂರಿನ ಖಾಸಗಿ ಅಸ್ಪತ್ರೆಗೆ ದಾಖಲಿಸಲಾಗಿತ್ತು. 82 ವರ್ಷದ ರಾಜೇಶ್ ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದಾರೆ. ರಾಜೇಶ್ ಅವರ ಅಗಲಿಕೆBreaking – ಇಹಲೋಕ ತ್ಯಜಿಸಿದ ‘ಕಲಾ ತಪಸ್ವಿ’ ರಾಜೇಶ್…ಗೆ ಚಿತ್ರರಂಗ ಕಂಬನಿ ಮಿಡಿಯುತ್ತಿದೆ.
ಸದ್ಯ ವಿದ್ಯಾರಣ್ಯಪುರದಲ್ಲಿರುವ ಮನೆಯಲ್ಲಿ ಕುಟುಂಬಸ್ಥರು ಅಂತಿಮ ದರ್ಶನ ಪಡೆದುಕೊಳ್ಳುತ್ತಿದ್ದಾರೆ. ಸಾರ್ವಜನಿಕರಿಗೆ ಹಿರಿಯ ನಟ ರಾಜೇಶ್ ಅಂತಿಮ ದರ್ಶನವನ್ನ ರವೀಂದ್ರ ಕಲಾ ಕ್ಷೇತ್ರದಲ್ಲಿ ಆಯೋಜನೆ ಮಾಡುವುದಾಗಿ ಅವರ ಅಳಿಯ ಅರ್ಜುನ್ ಸರ್ಜಾ ತಿಳಿಸಿದ್ದಾರೆ. kannada senior actor kalaa tapaswi rajesh passes away
ಕನ್ನಡ ರಂಗಭೂಮಿಯಿಂದ ನಟನಾ ಲೋಕಕ್ಕೆ ಕಾಲಿಟ್ಟ 150 ಹೆಚ್ಚು ಸಿನಿಮಾಗಳಲ್ಲಿ ನಾಯಕ ಪ್ರಧಾನ ಪಾತ್ರದಲ್ಲಿ ನಟಿಸಿದ್ದಾರೆ. ಶಾಲೆ ಓದುವಾಗಲೆ ನಾಟಕಗಳಲ್ಲಿ ಅಭಿನಯಿಸುತ್ತಿದ್ದ ಅವರು ವೀರ ಸಂಕಲ್ಪ ಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪರಿಚಯವಾದವರು.
ರಾಜ್ ಕುಮಾರ್ ಉದಯ್ ಕುಮಾರ್ ಕಲ್ಯಾಣ್ ಕುಮಾರ್ ಸಮಕಾಲಿನರಾದ ಇವರು ಚಿತ್ರರಂಗಕ್ಕೆ ತಮ್ಮದೇ ಆದ ಕೊಡುಗೆ ನೀಡಿದ್ದಾರೆ.ಬೆಂಗಳೂರಿನಲ್ಲಿ ಜನಿಸಿದ ಇವರ ಮೂಲ ಹೆಸರು ಮುನಿ ಚೌಡಪ್ಪ. ನಾಟಕಗಳಲ್ಲಿ ಅಭಿನಯಿಸುವಾಗ ವಿದ್ಯಾಸಾಗರ್ ಎಂಬ ಹೆಸರಿನಿಂದ ಗುರುತಿಸಿಕೊಂಡಿದ್ದರು. 1960ರ ದಶಕದಲ್ಲಿ ಅವರು ಚಿತ್ರರಂಗಕ್ಕೆ ಕಾಲಿಟ್ಟ ಇವರನ್ನ ಚಿತ್ರರಂಗದಲ್ಲಿ’ ‘ಕಲಾತಪಸ್ವಿ’ ರಾಜೇಶ್ ಎಂದೇ ಕರೆಯುತ್ತಾರೆ. ನೂರಾರು ಸಿನಿಮಾಗಳಲ್ಲಿ ನಟಿಸಿ ಜನಮನ ಗೆದ್ದಿದ್ದಾರೆ.
1968 ರಲ್ಲಿ ತೆರೆಕಂಡ ನಮ್ಮ ಊರು ಚಿತ್ರ ರಾಜೇಶ್ ಅವರಿಗೆ ಹೆಸರು ತಂದು ಕೊಟ್ಟಿತು. ‘ಕಪ್ಪು ಬಿಳುಪು’, ‘ಬೃಂದಾವನ’, ‘ಬೋರೆ ಗೌಡ ಬೆಂಗಳೂರಿಗೆ ಬಂದ ದೇವರದುಡ್ಡು’, ‘ಕಲಿಯುಗ’, ‘ಪಿತಾಮಹ’ ‘ಸೊಸೆ ತಂದ ಸೌಭಾಗ್ಯ ಸೇರಿಂತೆ ಹಲವು ಸಿನಿಮಾಗಳಲ್ಲಿ ಗಮನಾರ್ಹ ಪಾತ್ರ ನಿರ್ವಹಿಸಿದ್ದಾರೆ.
ನಟ ರಾಜೇಶ್ ಅವರ ಪುತ್ರಿ ಆಶಾ ರಾಣಿ ಕೂಡ ಚಿತ್ರರಂಗದಲ್ಲಿ ಯಶಸ್ಸು ಕಂಡವರು. ಆಶಾ ರಾಣಿ ಅವರನ್ನು ನಟ ಅರ್ಜುನ್ ಸರ್ಜಾ 1988ರಲ್ಲಿ ಮದುವೆ ಆದರು.
ಫೆ.25ರಂದು ಬಿಡುಗಡೆ ಆಗಲಿರುವ ‘ಓಲ್ಡ್ ಮಾಂಕ್’ ಸಿನಿಮಾದಲ್ಲಿ ಅವರೊಂದು ಅತಿಥಿ ಪಾತ್ರದಲ್ಲಿ ನಟಿಸಿದ್ದರು. ಆ ಚಿತ್ರ ಬಿಡುಗಡೆಯಾಗುವ ಮುನ್ನವೇ ಸಾವನ್ನಪ್ಪಿರುವುದು ನೋವಿನ ಸಂಗತಿ…