ಬೆಂಗಳೂರಿನ ಈ ಪ್ರಮುಖ ರಸ್ತೆಗೆ ನಟ ಪುನೀತ್ ರಾಜ್ ಕುಮಾರ್ ಹೆಸರು.
ಬೆಂಗಳೂರಿನ ಪ್ರಮುಖ ರಸ್ತೆಯೊಂದಕ್ಕೆ ನಟ ಪುನೀತ್ ರಾಜ್ ಕುಮಾರ್ ಅವರ ಹೆಸರಿಡಬೇಕು. ಈ ಮೂಲಕ ಅಪ್ಪು ಅವರ ಹೆಸರು ಚಿರಸ್ಥಾಯಿಯಾಗುವಂತೆ ನೋಡಿಕೊಳ್ಳಬೇಕು ಎನ್ನುವ ಅಭಿಮಾನಿಗಳ ಆಸೆ ಕೊನೆಗೂ ಫಲಿಸಿದೆ. ಪುನೀತ್ ರಾಜ್ಕುಮಾರ್ ರಸ್ತೆ ನಾಮಕರಣಕ್ಕೆ ಬಿ ಬಿ ಬಿ ಎಂ ಪಿ ಅಧಿಕೃತ ಅನುಮತಿ ನೀಡಿದೆ.
ಬಿಬಿಎಂಪಿ ಆಡಳಿತಾಧಿಕಾರಿ ರಾಕೇಶ್ ಸಿಂಗ್ 12 ಕಿ.ಮೀ. ಉದ್ದದ ವರ್ತುಲ ರಸ್ತೆಗೆ (outer ring road ) ಪುನೀತ್ ರಾಜ್ಕುಮಾರ್ ರಸ್ತೆ ಎಂದು ನಾಮಕಾರಣ ಮಾಡುವ ಬಗ್ಗೆ ನಿರ್ಣಯ ತೆಗೆದುಕೊಂಡಿದೆ ಎಂದು ತಿಳಿದುಬಂದಿದೆ. Actor Puneet Rajkumar road
ಬೆಂಗಳೂರು – ಮೈಸೂರು ರಸ್ತೆಯ ನಾಯಂಡನ ಹಳ್ಳಿ ಜಂಕ್ಷನ್ನಿಂದ ಬನ್ನೇರುಘಟ್ಟ ರಸ್ತೆಯ ವೆಗಾಸಿಟಿ ಮಾಲ್ ವರೆಗಿನ ಸುಮಾರು 12 ಕಿ.ಮೀ ಉದ್ದದ ರಸ್ತೆಗೆ ಪುನೀತ್ ರಾಜ್ ಕುಮಾರ್ ಹೆಸರನ್ನ ಅನುಮೋದಿಸಿದೆ..
ನಾಯಂಡಳ್ಳಿ ಜಂಕ್ಷನ್ ನಿಂದ ಹೊಸಕೆರೆ ಹಳ್ಳಿ ರಸ್ತೆ ದೇವೇಗೌಡ ಪೆಟ್ರೋಲ್ ಬಂಕ್ – ಕದಿರೇನ ಹಳ್ಳಿ ಪಾರ್ಕ್ – ಸಾರಕ್ಕಿ ಸಿಗ್ನಲ್ – ಜೆ.ಪಿ.ನಗರವನ್ನು ಸಂಪರ್ಕಿಸುವ ರಸ್ತೆಗೆ ಪುನೀತ್ ರಾಜ್ಕುಮಾರ್ ರಸ್ತೆ ಎಂದಾಗಲಿದೆ.