ಚೇತನ್ ಗೆ ಜಾಮೀನು ಮಂಜೂರು ಆದ್ರೂ … ಬಿಡುಗಡೆ ಭಾಗ್ಯವಿಲ್ಲ..
ನ್ಯಾಯಾಂಗ ನಿಂದನೆ ಆರೊಪಡಿ ನ್ಯಾಯಾಂಗ ಬಂಧನಕ್ಕೆ ಒಳಗಾಗಿರುವ ನಟ , ಸಾಮಾಜಿಕ ಹೋರಾಟಗಾರ ನಟ ಚೇತನ್ ಅವರಿಗೆ ಇದೀಗ ಷರತ್ತು ಬದ್ಧ ಜಾಮೀನು ಮಂಜೂರಾಗಿದೆ.. ಆದ್ರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ.. ಬೆಂಗಳೂರಿನ 8ನೇ ಜೆಎಂಎಫ್ಸಿ ನ್ಯಾಯಾಲಯದಿಂದ ಜಾಮೀನು ಮಂಜೂರು ಆದರೂ ನಟ ಚೇತನ್ ಗೆ ಎರಡು ದಿನಗಳ ಕಾಲ ಬಿಡುಗಡೆ ಭಾಗ್ಯ ಇಲ್ಲ. ಸಮಯಕ್ಕೆ ಸರಿಯಾಗಿ ಶ್ಯೂರಿಟಿ ಒದಗಿಸೋದಕ್ಕೆ ಸಾಧ್ಯವಾಗದ ಕಾರಣ ಚೇತನ್ ಗೆ ಜಾಮೀನು ಸಿಕ್ಕರೂ ಬಿಡುಗಡೆ ಭಾಗ್ಯ ಸಿಕ್ಕಿಲ್ಲ..
ಇನ್ನೂ ಚೇತನ್ ಜೈಲಿನಿಂದ ಹೊರಗಡೆ ಬರಲು ಇನ್ನೂ ಎರಡು ದಿನವಾಗುತ್ತದೆ. ಯಾಕೆಂದರೆ ಎರಡು ದಿನ ಕೋರ್ಟ್ ರಜೆ ಇದ್ದು, ಸೋಮವಾರ ಬಿಡುಗಡೆಯಾಗುವ ಸಾಧ್ಯತೆಯಿದೆ. ಸಾಮಾಜಿಕ ಜಾಲತಾಣದಲ್ಲಿ ಪ್ರಚೋದನಾಕಾರಿ ಬರಹ ಪ್ರಕಟಿಸಿದ ಆರೋಪದಡಿ ಚೇತನ್, ಶೇಷಾದ್ರಿಪುರಂ ಪೊಲೀಸರಿಂದ ಅರೆಸ್ಟ್ ಆಗಿದ್ದರು. ನಂತರ ಅವರಿಗೆ 14 ದಿನಗಳ ಕಾಲ ನ್ಯಾಯಾಂಗಬಂಧನ ವಿಧಿಸಿ ಕೋರ್ಟ್ ಆದೇಶಿಸಿತ್ತು.
ನಾಲ್ಕು ದಿನಗಳಿಂದ ಚೇತನ್ ಪರಪ್ಪನ ಅಗ್ರಹಾರ ಜೈಲಿನಲ್ಲಿದ್ದಾರೆ. ಇಂದಿಗೆ ಐದನೇ ದಿನ. ಚೇತನ್ ಅವರಿಗೆ ಜಾಮೀನಿಗಾಗಿ ಚೇತನ್ ಕುಟುಂಬ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿತ್ತು. ಕೋರ್ಟ್ ವಿಚಾರಣೆಗಳಿಗೆ ಹಾಜರಾಗಬೇಕು ಎಂಬ ಷರತ್ತನ್ನು ವಿಧಿಸಿ ನ್ಯಾಯಾಲಯವು ಜಾಮೀನು ಮಂಜೂರು ಮಾಡಿತ್ತು..