Puneeth Rajkumar | 15 ದೇಶಗಳಲ್ಲಿ ‘ಜೇಮ್ಸ್’ ರಿಲೀಸ್..!!
15 ದೇಶಗಳಲ್ಲಿ ‘ಜೇಮ್ಸ್’ ಸಿನಿಮಾ ರಿಲೀಸ್
ಪುನೀತ್ ರಾಜ್ ಕುಮಾರ್ ನಟನೆಯ ಚಿತ್ರ
ಐದು ಭಾಷೆಗಳಲ್ಲಿ ರಿಲೀಸ್ ಆಗಲಿರುವ ಚಿತ್ರ
ಮಾರ್ಚ್ 17 ಕ್ಕೆ ಅಪ್ಪು ಜೇಮ್ಸ್ ಸಿನಿಮಾ ರಿಲೀಸ್
ಜರ್ಮನಿ, ನೆದರ್ಲೆಂಡ್ಸ್, ಆಸ್ಟ್ರೇಲಿಯಾದಲ್ಲಿ ಚಿತ್ರ ರಿಲೀಸ್
ಕರುನಾಡಿನ ರಾಜ ರತ್ನ, ಪವರ್ ಸ್ಟಾರ್ ಪುನೀತ್ ರಾಜ್ ಕುಮಾರ್ ಅವರ ಕೊನೆಯ ಚಿತ್ರ ಜೇಮ್ಸ್ ಒಂದಾಲ್ಲ ಒಂದು ವಿಚಾರಕ್ಕೆ ಸುದ್ದಿ ಮಾಡುತ್ತಲೇ ಇದೆ. ಚೇತನ್ ನಿರ್ದೇಶನದ ಈ ಸಿನಿಮಾ ಐದು ಭಾಷೆಗಳಲ್ಲಿ ಮಾರ್ಚ್ 17ಕ್ಕೆ ವಿಶ್ವದಾದ್ಯಂತ ರಿಲೀಸ್ ಆಗಲಿದೆ.
ಈಗ ಹೊಸ ಸುದ್ದಿ ಏನಂದ್ರೆ, ಪುನೀತ್ ರ ಜೇಮ್ಸ್ ಬರೋಬ್ಬರಿ 15 ದೇಶಗಳಲ್ಲಿ ಏಕಕಾಲದಲ್ಲಿ ರಿಲೀಸ್ ಆಗಲಿದೆಯಂತೆ. ಜರ್ಮನಿ, ನೆದರ್ಲೆಂಡ್ಸ್, ಆಸ್ಟ್ರೇಲಿಯಾ, ಪೋಲ್ಯಾಂಡ್, ಭಾರತ ಸೇರಿದಂತೆ ಒಟ್ಟು 15 ದೇಶಗಳಲ್ಲಿ ಜೇಮ್ಸ್ ರಿಲೀಸ್ ಆಗ್ತಿದೆ. ಈ ಕುರಿತು ಚಿತ್ರತಂಡ ಮಾಹಿತಿ ಹಂಚಿಕೊಂಡಿದೆ.
ಇದಲ್ಲದೇ ಜೇಮ್ಸ್ ಸಿನಿಮಾಗಾಗಿ ಅಪ್ಪು ಅಭಿಮಾನಿಗಳು ಕಾತರದಿಂದ ಕಾಯುತ್ತಿದ್ದಾರೆ. ಈಗಾಗಲೇ ರಿಲೀಸ್ ಆಗಿರುವ ಟೀಸರ್ ಸಿನಿಮಾ ಮೇಲಿನ ನಿರೀಕ್ಷೆಗಳನ್ನು ಹೆಚ್ಚಿಸಿದೆ. ಈ ಸಿನಿಮಾದ ಪ್ರಿ ರಿಲೀಸ್ ಕಾರ್ಯಕ್ರಮವೂ ಅದ್ಧೂರಿಯಾಗಿ ನಡೆಯಲಿದೆ.
ಈ ಸಿನಿಮಾದಲ್ಲಿ ಶಿವಣ್ಣ, ರಾಘವೇಂದ್ರ ರಾಜ್ ಕುಮಾರ್ ಕೂಡ ಅಭಿನಯಿಸಿದ್ದಾರೆ. ಅಪ್ಪು ಪಾತ್ರಕ್ಕೆ ಶಿವಣ್ಣ ಧ್ವನಿ ನೀಡಿದ್ದಾರೆ.
James Cinema releasing in 15 countries