RRR ಪ್ರೇ ರಿಲೀಸ್ ಕಾರ್ಯಕ್ರಮ ಬೆಂಗಳೂರಲ್ಲಿ ನಡೆಯಲ್ಲ..!!!
RRR ಹೊಸ ರಿಲೀಸ್ ಡೇಟ್ ನಂತೆಯೇ ಮಾರ್ಚ್ 25 ಕ್ಕೆ ಸಿನಿಮಾ ರಿಲೀಸ್ ಆಗಲಿದೆ. ಇಡೀ ಚಿತ್ರಪ್ರೇಮಿಗಳು ತ್ರಿಬಲ್ ಸಿನಿಮಾಗಾಗಿ ಕಾದು ಕುಳಿತಿದ್ದಾರೆ. ಈ ಸಿನಿಮಾದ ಪ್ರೀ ರಿಲೀಸ್ ಈವೆಂಟ್ ಗಳನ್ನ ಅದ್ಧೂರಿಯಾಗಿ ನಡೆಸುವ ಪ್ಲಾನ್ ನಲ್ಲಿ ಸಿನಿಮಾತಂಡವಿದೆ.. ಬೆಂಗಳೂರಿನಲ್ಲಿಯೂ ಕೆವಿಎನ್ ಸಹಯೋಗದೊಂದಿಗೆ ಸಿನಿಮಾದ ಪ್ರೀ ರಿಲೀಸ್ ಇವೆಂಟ್ ಆಯೋಜಿಸಲಾಗಿತ್ತು. ಅಷ್ಟಲ್ಲೇ ಕೊರೊನಾ ಕಾರಣಕ್ಕೆ ಸಿನಿಮಾದ ಬಿಡುಗಡೆ ಮುಂದೂಡಲಾಯ್ತು.. ಕಾರ್ಯಕ್ರಮ ರದ್ದಾಗಿತ್ತು. ಇದೀಗ ಮತ್ತೆ ಕರ್ನಾಟಕದಲ್ಲಿ ಪ್ರೀ ರಿಲೀಸ್ ಈವೆಂಟ್ ಮಾಡಲು ಚಿತ್ರತಂಡ ಸಜ್ಜಾಗಿದೆ. ಆದರೆ ಈ ಬಾರಿ ಬೆಂಗಳೂರಿನ ಬದಲಿಗೆ ಚಿಕ್ಕಬಳ್ಳಾಪುರದಲ್ಲಿ ಪ್ರೀ ರಿಲೀಸ್ ಈವೆಂಟ್ ಕಾರ್ಯಕ್ರಮವನ್ನ ಹಮ್ಮಿಕೊಂಡಡಿದೆ..
ಅಂದ್ಹಾಗೆ ಚಿಕ್ಕಬಳ್ಳಾಪುರವು ತೆಲುಗು ರಾಜ್ಯಕ್ಕೆ ಗಡಿಯಾಗಿದೆ. ಚಿಕ್ಕಬಳ್ಳಾಪುರದ ಸುತ್ತ ಮುತ್ತ ಶಿಡ್ಲಘಟ್ಟ, ಗೌರಿಬಿದನೂರು, ಚಿಂತಾಮಣಿ, ದೇವನಹಳ್ಳಿ, ಬಾಗೇಪಲ್ಲಿ, ಗುಡಿಬಂಡೆ, ಕೋಲಾರ ಈ ಭಾಗಗಳಲ್ಲಿ ತೆಲುಗು ಪ್ರಭಾವ ಹೆಚ್ಚಿದೆ. ತೆಲುಗು ಮಾತನಾಡುವ ಜಜನರು ಹೆಚ್ಚಿದ್ದಾರೆ.. ಇದನ್ನೇ ಗಮನದಲ್ಲಿಟ್ಟುಕೊಂಡು ಸಿನಿಮಾ ತಂಡ ಅಲ್ಲಿ ಪ್ರೀ ಈವೆಂಟ್ ನಡೆಸಲು ನಿರ್ಧಾರ ಮಾಡಿರಬಹುದು. ಮಾರ್ಚ್ 20 ರಂದು ಪ್ರೀ ರಿಲೀಸ್ ಕಾರ್ಯಕ್ರಮ ನಡೆಯುವ ಸಾಧ್ಯತೆ ಇದೆ.
ಈ ಚಿತ್ರಕ್ಕೆ ರಾಜಮೌಳಿ ನಿರ್ದೇಶನ ಮಾಡಿದ್ದು, ರಾಮ್ ಚರಣ್ ಮತ್ತು ಜ್ಯೂ. ಎನ್ಟಿಆರ್ ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ. ನಟಿ ಆಲಿಯಾ ಭಟ್ ಈ ಸಿನಿಮಾ ಮೂಲಕ ಇದೇ ಮೊದಲ ಬಾರಿಗೆ ದಕ್ಷಿಣ ಭಾರತಕ್ಕೆ ಕಾಲಿಟ್ಟಿದ್ದಾರೆ. ಅಜಯ್ ದೇವಗನ್ ಒಂದು ಪ್ರಮುಖ ಪಾತ್ರದಲ್ಲಿ ನಟಿಸಿದ್ದಾರೆ. ಕನ್ನಡ, ತಮಿಳು, ತೆಲುಗು ಹಿಂದಿ ಹಾಗೂ ಮಾಲಯಾಳಂ ಭಾಷೆಯಲ್ಲಿ ರಿಲೀಸ್ ಆಗ್ತಿರುವ ತ್ರಿಬಲ್ ಆರ್ ಸಿನಿಮಾವನ್ನು ಕರ್ನಾಟಕದಲ್ಲಿ ಕೆವಿಎನ್ ಪ್ರೊಡಕ್ಷನ್ಸ್ ವಿತರಣೆ ಮಾಡುತ್ತಿದೆ.