Chetan Ahimsa : ಜಾಮೀನಿನ ಮೇಏಲೆ ರೀಲೀಸ್ ಆದ ಚೇತನ್ : ಪ್ರಶ್ನೆ ಮಾಡುವುದನ್ನ ನಿಲ್ಲಿಸುವುದಿಲ್ಲ ಎಂದು ಸ್ಪಷ್ಟನೆ
ನ್ಯಾಯಾಂಗ ನಿಂದನೆ ಆರೋಪದಡಿ ಜೈಲು ಸೇರಿದ್ದ ನಟ ಚೇತನ್ ಅಹಿಂಸಾ ಅವರು ಇದೀಗ ಜಾಮೀನಿನ ಮೇಲೆ ಬಿಡುಗಡೆಯಾಗಿದ್ದಾರೆ.. ಹಾಗೆ ನೋಡಿದ್ರೆ 25 ತಾರೀಕೆನಂದೇ ಚೇತನ್ ಅವರಿಗೆ ನ್ಯಾಯಾಲಯವು ಷರತ್ತುಬದ್ಧ ಜಾಮೀನು ಮಂಜೂರು ಮಾಡಿತ್ತು.. ಆದ್ರೂ ಜಾಮೀನಿನ ಷರತ್ತುಗಳನ್ನು ಪೂರೈಸಲು ಸಾಧ್ಯವಾಗದೇ ಜೈಲಿನಲ್ಲಿಯೇ ಇದ್ದರು..
ಜೈಲಿನಿಂದ ಚೇತನ್ ಬಿಡುಗಡೆಯಾಗುತ್ತಿದ್ದಂತೆ ಅವರನ್ನ ಅಭಿಮಾನಿಗಳು ಅವರನ್ನ ಸಂಭ್ರಮದಿಂದ ಸ್ವಾಗತಿಸಿದ್ದಾರೆ. ಸೋಮವಾರ ಕಾನೂನು ಪ್ರಕ್ರಿಯೆ ಪೂರ್ಣಗೊಳಿಸಿದ ನಂತರವೇ ಚೇತನ್ ಜೈಲಿನಿಂದ ಬಿಡುಗಡೆಗೊಂಡಿದ್ದಾರೆ.
ಅಲ್ಲದೇ ಇದೇ ವೇಳೆ ಮಾತನಾಡಿರುವ ಅವರು ಯಾವುದೇ ಕಾರಣಕ್ಕೂ ಪ್ರಶ್ನೆ ಮಾಡುವುದನ್ನು ನಿಲ್ಲಿಸಲು ಸಾಧ್ಯವೇ ಇಲ್ಲ. ತಪ್ಪು ಕಂಡಲ್ಲಿ ಮಾತನಾಡುತ್ತೇನೆ. ಮತ್ತಷ್ಟು ಜನರಿಗೆ ತಲುಪಲು ಆ ಪ್ರಶ್ನೆಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕುವೆ. ಯಾವುದೇ ಕಾರಣಕ್ಕೂ ಟ್ವೀಟ್ ಮಾಡುವುದನ್ನು ನಿಲ್ಲಿಸುವುದಿಲ್ಲ ಎಂದಿದ್ದಾರೆ.
ಫೆಬ್ರವರಿ 22 ರಂದು ನ್ಯಾಯಾಂಗ ನಿಂದನೆ ಆರೋಪದ ಮೇರೆಗೆ ಚೇತನ್ ಅವರನ್ನ ಶೇಷಾದ್ರಿಪುರ ಪೊಲೀಸರು ಬಂಧಿಸಿದ್ದರು. ಬಳಿಕ ಅವರನ್ನು 14 ದಿನಗಳವರೆಗೆ ನ್ಯಾಯಾಂಗ ಬಂಧನಕ್ಕೆ ಒಪ್ಪಿಸಲಾಗಿತ್ತು. ಫೆಬ್ರವರಿ 25 ರಂದು ಚೇತನ್ ಗೆ 8ನೇ ಎಸಿಎಂಎಂ ನ್ಯಾಯಾಲಯ ಜಾಮೀನು ಮಂಜೂರು ಮಾಡಿ ಆದೇಶ ಹೊರಡಿಸಿತ್ತು.