ಮಾರ್ಚ್ 4 ಕ್ಕೆ “ಕನ್ನೇರಿ” ಸಿನಿಮಾ ರಿಲೀಸ್..!
ಕೊಡಗಿನಲ್ಲಿ ಸದ್ದು ಮಾಡಿದ್ದ ದಿಡ್ಡಳ್ಳಿ ಸಂತ್ರಸ್ತರ ಹೋರಾಟದ ಕಥೆಯನ್ನ ರಾಜ್ಯ ಜನರಿಗೆ ಹೇಳಲು ಇದೇ ಮಾರ್ಚ್ ನಾಲ್ಕರಂದು ಕನ್ನೇರಿ ಸಿನಿಮಾ ಥಿಯೇಟರ್ ಅಂಗಳಕ್ಕೆ ಬರಲಿದೆ.
ನೈಜ ಕಥೆಯಾಧಾರಿತ ಸಿನಿಮಾ ‘ಕನ್ನೇರಿ‘ ಗೆ ನೀನಾಸಂ ಮಂಜು ಆಕ್ಷನ್ ಕಟ್ ಹೇಳಿದ್ದಾರೆ. ಮಹಿಳಾ ಪ್ರಧಾನ ಸಿನಿಮಾ ಇದಾಗಿದ್ದು, ಈಗಾಗಲೇ ಪೋಸ್ಟರ್, ಟ್ರೇಲರ್, ಹಾಡುಗಳ ಮೂಲಕ ಪ್ರೇಕ್ಷಕರ ಗಮನ ಸೆಳೆದಿದೆ.
ಈ ಚಿತ್ರದ ಕಥೆಯ ಜವಾಬ್ದಾರಿಯನ್ನು ಕೋಟಿಗಾನಹಳ್ಳಿ ರಾಮಯ್ಯ ವಹಿಸಿಕೊಂಡಿದ್ದು, ಚಿತ್ರಕಥೆ ಹಾಗೂ ನಿರ್ದೇಶನದ ಸಾರಥ್ಯವನ್ನು ನೀಸಾಸಂ ಮಂಜು ವಹಿಸಿಕೊಂಡಿದ್ದಾರೆ.
ಚಿತ್ರದ ತಾರಾಗಣದಲ್ಲಿ ಅನಿತಾ ಭಟ್, ಅರುಣ್ ಸಾಗರ್, ಎಂ.ಕೆ.ಮಠ್, ಕರಿಸುಬ್ಬು ಒಳಗೊಂಡಂತೆ ಹಲವು ಪ್ರತಿಭಾನ್ವಿತರು ಪಾತ್ರಗಳಿಗೆ ಜೀವ ತುಂಬಿದ್ದಾರೆ.
ಗಣೇಶ್ ಹೆಗ್ಡೆ ಕ್ಯಾಮೆರಾ, ಮಣಿಕಾಂತ್ ಕದ್ರಿ ಸಂಗೀತವಿದೆ. ಚಿತ್ರಕ್ಕೆ ಪಿಪಿ ಹೆಬ್ಬಾರ್ ಮತ್ತು ಚಂದ್ರಶೇಖರ್ ಬಂಡವಾಳ ಹಾಕಿದ್ದಾರೆ. kannada-film-Kanneri-releasing-on-march-4th