ಉಪ್ಪಿ ನಟನೆಯ ಹೋಮ್ ಮಿನಿಸ್ಟರ್ ಬಿಡುಗಡೆಗೆ ಡೇಟ್ ಫಿಕ್ಸ್…
ರಿಯಲ್ ಸ್ಟಾರ್ ಉಪೇಂದ್ರ ಮತ್ತು ನಟಿ ವೇದಿಕಾ ಮೊದಲ ಬಾರಿಗೆ ಜೊತೆಯಾಗಿ ನಟಿಸಿರುವ, ‘ಹೋಮ್ ಮಿನಿಸ್ಟರ್’ ಸಿನಿಮಾ ಚಿತ್ರೀಕರಣವನ್ನ ಮುಗಿಸಿಕೊಂಡಿದೆ. ಏಪ್ರಿಲ್ 1ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಚಿತ್ರ 350ಕ್ಕೂ ಅಧಿಕ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗುವುದಾಗಿ ಚಿತ್ರತಂಡ ತಿಳಿಸಿದೆ.
‘ಚಿತ್ರ ಬಿಡುಗಡೆ ದಿನಾಂಕವನ್ನ ಅನಾವರಣ ಗೊಳಿಸಿ ಮಾತನಾಡಿದ ಉಪೇಂದ್ರ ಇಲ್ಲಿನ ನಿರ್ಮಾಪಕರು ಬೇರೆ ಕಡೆ ಹೋಗಿ ಚಿತ್ರ ನಿರ್ಮಾಣ ಮಾಡುತ್ತಾರೆ. ಆದರೆ ತೆಲುಗಿನ ನಿರ್ಮಾಪಕರು ಕನ್ನಡದ ಮೇಲಿನ ಅಭಿಮಾನದಿಂದ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಇನ್ನೂ ನೂರು ಜನ ತೆಲುಗಿನ ನಿರ್ಮಾಪಕರು ಬಂದು ಕನ್ನಡ ಚಿತ್ರ ನಿರ್ಮಾಣ ಮಾಡಬೇಕು’ ಎಂದು ತೆಲುಗಿನ ನಿರ್ಮಾಪಕ ಪೂರ್ಣಚಂದ್ರ ನಾಯ್ಡು ಹಾಗೂ ಶ್ರೀಕಾಂತ್ ವೀರಮಾಚನೆನಿ ಅವರನ್ನ ಹೊಗಳಿದರು.
ಸುಜಯ್ ಕೆ ಶ್ರೀಹರಿ ನಿರ್ದೇಶನದ ಹೋಮ್ ಮಿನಿಸ್ಟರ್ ಗೆ ಜಿಬ್ರಾನ್ ಸಂಗೀತ ನೀಡಿದ್ದಾರೆ. ಕುಂಟುನಿ ಎಸ್ ಕುಮಾರ್ ಪೊಟೋಗ್ರಫಿ ಕೈ ಚಳಕವಿದೆ. ನಟಿ ವೇದಿಕಾ, ಮಾತನಾಡಿ ಚಿತ್ರ ಚೆನ್ನಾಗಿ ಮೂಡಿ ಬಂದಿದೆ. ನಾನಿಲ್ಲಿ ಜರ್ನಲಿಸ್ಟ್ ಆಗಿ ಕಾಣಿಸಿಕೊಂಡಿದ್ದೇನೆ ಎಂದು ತಿಳಿಸಿದರು. ಸುಮನ್ ರಂಗನಾಥ್, ತಾನ್ಯ ಹೋಪ್, ಸಾಧುಕೋಕಿಲ, ಅವಿನಾಶ್, ಮಾಳವಿಕ ಅವಿನಾಶ್, ತಿಲಕರು, ಲಾಸ್ಯ, ಸುಧಾ ಬೆಳವಾಡಿ, ಶ್ರೀನಿವಾಸ ಮೂರ್ತಿ, ವಿಜಯ್ ಚಂಡೂರ್, ಬೇಬಿ ಆದ್ಯ ಮುಂತಾದವರು ಈ ಚಿತ್ರದ ತಾರಾಬಳಗದಲ್ಲಿದ್ದಾರೆ.
Date fix for release of uppendra Acted Home Minister film.