Tollywood : ಚಿರಂಜೀವಿ ಹೊಸ ಸಿನಿಮಾದಲ್ಲಿ ಶ್ರುತಿ ಹಾಸನ್
ಸದ್ಯ ಸಲಾರ್ ಸಿನಿಮಾದಲ್ಲಿ ಬ್ಯುಸಿಯಿರುವ ಬಹುಭಾಷಾ ನಟಿ , ಕಮಲ್ ಹಾಸನ್ ಪುತ್ರಿ ಶ್ರುತಿ ಹಾಸನ್ ಮುಂದೆ ಚಿರಂಜೀವಿ ಅವರ ಹೊಸ ಸಿನಿಮಾಗೆ ನಾಯಕಿಯಾಗಿ ಆಯ್ಕೆಯಾಗಿದ್ದಾರೆ.
ಈ ಮೂಲಕ ಕೆಲ ದಿನಗಳಿಂದ ಚಿರಂಜೀವಿ ಅವರ ಹೊಸ ಚಿತ್ರಕ್ಕೆ ನಾಯಕಿ ಯಾರು ಎಂಬ ಅಭಿಮಾನಿಗಳ ಕುತೂಹಲಕ್ಕೆ ತೆರೆ ಬಿದ್ದಿದೆ.
ಶ್ರುತಿ ಈ ಸಿನಿಮಾದಲ್ಲಿ ವಿಭಿನ್ನ ಪಾತ್ರ ಮಾಡಲಿದ್ದಾರೆ. ವಿಭಿನ್ನವಾಗಿ ಕಾಣಿಸಿಕೊಳ್ಳಲಿದ್ದಾರೆ ಎನ್ನಲಾಗ್ತಿದೆ. ಸಿನಿಮಾಗೆ ಕೆಎಸ್ ರವೀಂದ್ರ ಈ ಚಿತ್ರಕ್ಕೆ ಆಕ್ಷನ್ ಕಟ್ ಹೇಳುತ್ತಿದ್ದು, ಮೈತ್ರಿ ಮೂವಿ ಮೇಕರ್ಸ್ ಬ್ಯಾನರ್ ನಲ್ಲಿ ಚಿತ್ರ ಮೂಡಿ ಬರಲಿದೆ.
ಚಿರಂಜೀವಿ ಅವರ 154ನೇ ಸಿನಿಮಾ ಇದಾಗಿದ್ದು, ಮಹಿಳಾ ದಿನಚರಣೆಯ ದಿನದಂದೇ ಶ್ರುತಿ ಅವರನ್ನು ಚಿತ್ರತಂಡಕ್ಕೆ ಬರಮಾರಿಕೊಂಡಿದೆ ಸಿನಿಮಾತಂಡ..