James ಮಾರ್ನಿಂಗ್ ಶೋ : 200 ಪ್ರದರ್ಶನಗಳ ಟಿಕೆಟ್ ಸೋಲ್ಡ್ ಔಟ್
ಕರ್ನಾಟಕದಲ್ಲಿ ಅಪ್ಪು ಅಭಿಮಾನಿಗಳು ಮಾರ್ಚ್ 17 ರಿಂದ ಜಾತ್ರೆ ಶುರುಮಾಡಲಿದ್ದಾರೆ. ಅಪ್ಪು ಹುಟ್ಟುಹಬ್ಬ ಒಂದೆಡೆಯಾದ್ರೆ , ಅವರ ಅಭಿನಯದ ಕೊನೆಯ ಸಿನಿಮಾ ಜೇಮ್ಸ್ ಪ್ಯಾನ್ ಇಂಡಿಯಾ ಲೆವೆಲ್ ನಲ್ಲಿ ರಿಲೀಸ್ ಆಗಿ ಧೂಳೆಬ್ಬಿಸಲಿದೆ. ವಿಶ್ವಾದ್ಯಂತ 15 ಕ್ಕೂ ಹೆಚ್ಚು ದೇಶಗಳಲ್ಲಿ Puneeth Rajkumar ಅವರ James ಸಿನಿಮಾ ರಿಲೀಸ್ ಆಗ್ತಿದೆ.. ಅಂದ್ಹಾಗೆ ಈ ಸಿನಿಮಾ ಕನ್ನಡ , ತಮಿಳು , ತೆಲುಗು , ಮಲಯಾಳಂ , ಹಿಂದಿಯಲ್ಲಿ ರಿಲೀಸ್ ಆಗಲಿದೆ.. ಅದ್ಧೂರಿಯಾಗಿಯೇ ಸಿನಿಮಾ ರಿಲೀಸ್ ಮಾಡಲು ಚಿತ್ರತಂಡ ಪ್ಲಾನ್ ಮಾಡಿಕೊಂಡಿದೆ.. ರಿಲೀಸ್ ಗೂ ಮುನ್ನವೇ ಹೊಸ ದಾಖಲೆ ಮಾಡಿದೆ.. ಒಂದೇ ಸಿನಿಮಾ ಮಂದಿರದಲ್ಲೇ 5000 ಟಿಕೆಟ್ ಸೋಲ್ಡ್ ಔಟ್ ಆಗಿದೆ..
ಈ ನಡುವೆ ಮತ್ತೊಂದು ಹೊಸ ದಾಖಲೆ ಜೇಮ್ಸ್ ಹೆಸರಿಗೆ ಸೇರಿಕೊಂಡಿದೆ. ವರದಿಗಳ ಪ್ರಕಾರ ಮಾ.17 ರಂದು ಬೆಳಗ್ಗೆ 6 ಗಂಟೆಗೆ 200 ಶೋಗಳು ಜೆಮ್ಸ್ ಗಾಗಿ ಮೀಸಲಿಟ್ಟಿವೆ. ಅಷ್ಟೂ ಶೋಗಳ ಟಿಕೇಟ್ ಸೋಲ್ಡೌಟ್ ಆಗಿದೆ ಎನ್ನಲಾಗಿದೆ.
ಹೌದು.. ಬುಕ್ ಮೈ ಶೋ ಆಪ್ ನಲ್ಲಿ ಬೆಳಗ್ಗೆ 6 ಗಂಟೆಯಿಂದ ಪ್ರದರ್ಶನಕ್ಕೆ ಟಿಕೆಟ್ ಬುಕ್ ಮಾಡಬಹುದು.. ಮಲ್ಟಿಪ್ಲೆಕ್ಸ್ ಚಿತ್ರಮಂದಿರಗಳ ಬಹುತೇಕ ಸ್ಕ್ರೀನ್ ಗಳನ್ನು ಜೇಮ್ಸ್ ಪ್ರದರ್ಶನಕ್ಕಾಗಿಯೇ ಮೀಸಲಿಡಲಾಗಿದೆ..
ಪುನೀತ್ ರಾಜ್ ಕುಮಾರ್ ಅವರ ಕೊನೆಯ ಸಿನಿಮಾ ಇದಾಗಿದ್ದರಿಂದ, ಅವರಿಗೆ ಗೌರವ ಸಲ್ಲಿಸುವುದಕ್ಕಾಗಿಯೇ ಆ ವಾರ ಯಾವ ಭಾರೀ ಬಜೆಟ್ ಚಿತ್ರಗಳು ಬಿಡುಗಡೆ ಆಗುತ್ತಿಲ್ಲ. ಹಾಗಾಗಿ ರಾಜ್ಯ ಶೇ.80ರಷ್ಟು ಚಿತ್ರಮಂದಿರಗಳಲ್ಲಿ ಜೇಮ್ಸ್ ತೆರೆ ಕಾಣುತ್ತಿದೆ.