Allu Arjun : ಸಂಜಯ್ ಲೀಲಾ ಬನ್ಸಾಲಿ ಜೊತೆ ಬಾಲಿವುಡ್ ಸಿನಿಮಾದಲ್ಲಿ ಅಲ್ಲು…!!!
ಕಳೆದ ವರ್ಷ ಡಿಸೆಂಬರ್ 17 ರಂದು ಬಿಡುಗಡೆಯಾದ ಪುಷ್ಪ ( Pushpa ) ಸಿನಿಮಾಗೆ ಆರಂಭದಲ್ಲಿ ಮಿಶ್ರ ಪ್ರತಿಕ್ರಿಯೆ ವ್ಯಕ್ತವಾದರೂ, ದಿನ ಕಳೆದಂತೆ ಪುಷ್ಪ ಮೇನಿಯಾ ಜೋರಾಯ್ತು. ಸಿನಿಮಾ ಬ್ಲಾಕ್ ಬಸ್ಟರ್ ಹಿಟ್ ಆಗಿ 400 ಕೋಟಿ ಕಲೆಕ್ಷನ್ ಕ್ಲಬ್ ಗೆ ಸೇರಿತು.
ಮುಖ್ಯವಾಗಿ ಬಾಲಿವುಡ್ ನಲ್ಲಿ 100 ಕೋಟಿ ರೂಪಾಯಿ ಕಲೆಕ್ಷನ್ ಮಾಡಿ ಬಿ ಟೌನ್ ನಲ್ಲಿ ಭಾರಿ ಸದ್ದು ಮಾಡಿತ್ತು. ಇದೀಗ ಸಿನಿಮಾದ ಸೀಕ್ವೆಲ್ ಪುಷ್ಪ 2 ಶೂಟಿಂಗ್ ನಲ್ಲಿ ತಂಡ ಬ್ಯುಸಿಯಾಗಿದೆ..
ಈ ಸಿನಿಮಾ ಮೂಲಕ ಅಲ್ಲು ಅರ್ಜುನ್ ಫೇಮ್ , ಕ್ರೇಜ್ ಬಾಲಿವುಡ್ ನಲ್ಲಿ ಮತ್ತಷ್ಟು ಹೆಚ್ಚಾಗಿದೆ.. ಇದೀಗ ಅಲ್ಲು ಅರ್ಜುನ್ ಬಾಲಿವುಡ್ ನ ಖ್ಯಾತ ನಿರ್ದೇಶಕರ ಜೊತೆಗೆ ಸಿನಿಮಾ ಮಾತು ಕಥೆಯನ್ನೂ ಮುಗಿಸಿದ್ದಾರೆ ಎನ್ನಲಾಗಿದೆ. ಇಂತಹದೊಂದು ಬಿಸಿ ಬಿಸಿ ಚರ್ಚೆ ಈಗ ಟಾಲಿವುಡ್ ಅಂಗಳದಲ್ಲಿ ನಡೆಯುತ್ತಿದೆ..
ಈ ನ್ಯೂಸ್ ಸೆನ್ಷೇಷನಲ್ ರೂಪ ಪಡೆಯೋದಕ್ಕೆ ಕಾರಣವೂ ಇದೆ.. ಅಲ್ಲು ಅರ್ಜುನ್ ಬಾಲಿವುಡ್ ಸ್ಟಾರ್ ನಿರ್ದೇಶಕ ಸಂಜಯ್ ಲೀಲಾ ಬನ್ಸಾಲಿ ಅವರ ಕಚೇರಿಯಲ್ಲಿ ಅಲ್ಲಿ ಕಾಣಿಸಿಕೊಂಡಿದ್ದಾರೆ. ಹಾಗಾಗಿ ಅಲ್ಲು ಅರ್ಜುನ್, ಸಂಜಯ್ ಲೀಲಾ ಬನ್ಸಾಲಿ ಸಿನಿಮಾದಲ್ಲಿ ಅಭಿನಯಿಸಲಿದ್ದಾರೆ ಎನ್ನುವ ವದಂತಿ ಹಬ್ಬಿದೆ.. ಈ ಚಿತ್ರಕ್ಕೆ ಬಾಲಿವುಡ್ನ ದೊಡ್ಡ ನಿರ್ಮಾಣ ಸಂಸ್ಥೆ ಬಂಡವಾಳ ಹೂಡಲಿದೆ ಎನ್ನಲಾಗ್ತಿದೆ.