Upendra : ‘ಹುಷಾರ್’…!!! ಮತ್ತೆ ಮೈಕ್ ಹಿಡಿದಿದ್ದಾರೆ ಉಪೇಂದ್ರ..!!
ಸ್ಯಾಂಡಲ್ ವುಡ್ ನ ಬುದ್ದಿವಂತ , ಸ್ಟಾರ್ ನಟ ಉಪೇಂದ್ರ ಅವರು ನಿರ್ದೇಶನ , ನಟನೆ ಜೊತೆಗೆ ಒಳ್ಳೆ ಗಾಯಕರೂ ಕೂಡ ಅನ್ನೋ ವಿಚಾರ ಎಲ್ಲರಿಗೂ ಗೊತ್ತಿರೋದೆ.. ಇದೀಗ ಅವರು ಮತ್ತೊಮ್ಮೆ ಮೈಕ್ ಹಿಡಿದು ಹಾಡಲು ಹೊರಟಿದ್ದು ಅಭಿಮಾನಿಗಳು ಕಾತರರಾಗಿದ್ದಾರೆ..
ಉಪೇಂದ್ರ ಅವರು ʼಹುಷಾರ್ʼ ಚಿತ್ರದ ಹಾಡೊಂದಕ್ಕೆ ಧ್ವನಿಯಾಗಿದ್ದಾರೆ. ಸತೀಶ್ ರಾಜ್ ಬರೆದಿರುವ ನೀ ನೋಡೋಕೆ ಸಿಕ್ಸ್ ಟೀನ್ ಸ್ವೀಟಿ. ಬಿಟ್ಕೊಳೆ ಒಂದ್ ನೈಂಟಿ ಎಂಬ ಹಾಡನ್ನು ಇತ್ತೀಚಿಗೆ ಸಾಧುಕೋಕಿಲ ಅವರ ಸ್ಟುಡಿಯೋದಲ್ಲಿ ಉಪೇಂದ್ರ ಹಾಡಿದ್ದಾರೆ.
ಸತೀಶ್ ರಾಜ್ ಮೂವೀ ಮೇಕರ್ಸ್ ಲಾಂಛನದಲ್ಲಿ ಸತೀಶ್ ರಾಜ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ನಮ್ಮ ಜೀವನದಲ್ಲಿ ಕೆಲವು ಅನಿರೀಕ್ಷಿತ ತಿರುವುಗಳು ಬರುತ್ತದೆ. ಅದಕ್ಕೆ ಯಾರೂ ಹೊಣೆಗಾರರಲ್ಲ. ನಾವು ಎಚ್ಚರಿಕೆಯಿಂದ ಇರಬೇಕು ಎನ್ನುವುದು ಈ ಸಿನಿಮಾದ ಕಥೆಯ ಸಾರಾಂಶವಾಗಿದೆ.
ಎರಡು ಹಾಡುಗಳಿರುವ ಈ ಚಿತ್ರಕ್ಕೆ ಎ.ಟಿ.ರವೀಶ್ ಹಾಗೂ ನಾಗು ಸಂಗೀತ ನೀಡಿದ್ದಾರೆ. ರೆಮೋ ಹಾಗೂ ಉಪೇಂದ್ರ ಒಂದೊಂದು ಹಾಡನ್ನು ಹಾಡಿದ್ದಾರೆ. ನವೀನ್ ಮತ್ತು ನಾಗರಾಜ್ ಛಾಯಾಗ್ರಹಣ, ಜೆ.ಜೆ.ಶರ್ಮ ಸಂಕಲನ, ಚಂದ್ರು ಬಂಡೆ, ಜಾಗ್ವರ್ ಸಣ್ಣಪ್ಪ ಸಾಹಸ ನಿರ್ದೇಶನ ಹಾಗೂ ಸ್ಟಾರ್ ನಾಗಿ ನೃತ್ಯ ನಿರ್ದೇಶನ ಈ ಚಿತ್ರಕ್ಕಿದೆ.
ಸಿದ್ದೇಶ್ ನಾಯಕನಾಗಿ ನಟಿಸಿರುವ ಈ ಚಿತ್ರದ ನಾಯಕಿ ಪ್ರಿಯದರ್ಶಿನಿ. ವಿನೋದ್, ರಚನಾ ಮಲ್ನಾಡ್, ಲಯ ಕೋಕಿಲ, ಡಿಂಗ್ರಿ ನಾಗರಾಜ್, ಪುಷ್ಪಸ್ವಾಮಿ ಮುಂತಾದವರು ಚಿತ್ರದ ತಾರಾಬಳಗದಲ್ಲಿದ್ದಾರೆ. ಸತೀಶ್ ರಾಜ್ ಪ್ರಮುಖ ಪಾತ್ರದಲ್ಲಿ ಕಾಣಿಸಿಕೊಂಡಿದ್ದಾರೆ.