‘The Kashmir Files’ ಬಾಕ್ಸ್ ಆಫೀಸ್ ಕಲೆಕ್ಷನ್ 11 ನೇ ದಿನ..!!!
ವಿವೇಕ್ ಅಗ್ನಿಹೋತ್ರಿ ಅವರ ನಿರ್ದೇಶನದ ‘ದಿ ಕಾಶ್ಮೀರ್ ಫೈಲ್ಸ್’ 179 ಕೋಟಿ ರೂ. ಗೂ ಅಧಿಕ ಕಲೆಕ್ಷನ್ ಮಾಡುವ ಮೂಲಕ ಅಕ್ಷಯ್ ಕುಮಾರ್ ನಟನೆಯ ಸೂರ್ಯವಂಶಿ ದಾಖಲೆ ಮುರಿದಿದೆ..
ವಿವೇಕ್ ಅಗ್ನಿಹೋತ್ರಿ ಅವರ ದಿ ಕಾಶ್ಮೀರ್ ಫೈಲ್ಸ್ ಸಿನಿಮಾ ದೇಶದ್ಯಾಂತ ಸಂಚಲನ ಸೃಷ್ಟಿ ಮಾಡಿದೆ. ಚಿತ್ರವು ಬಾಕ್ಸ್ ಆಫೀಸ್ನಲ್ಲಿ ಅದ್ಭುತ ಪ್ರತಿಕ್ರಿಯೆಯನ್ನು ದಾಖಲಿಸಿದೆ. ಮಾರ್ಚ್ 11 ರಂದು ಬಿಡುಗಡೆಯಾದ ಈ ಚಿತ್ರ ಸೋಮವಾರ ಭರ್ಜರಿ ಬ್ಯುಸಿನೆಸ್ ಮಾಡಿ 14 ಕೋಟಿ ಗಳಿಸಿದೆ. ಕಾಶ್ಮೀರ್ ಫೈಲ್ಸ್ ನಲ್ಲಿ ಅನುಪಮ್ ಖೇರ್, ದರ್ಶನ್ ಕುಮಾರ್, ಮಿಥುನ್ ಚಕ್ರವರ್ತಿ , ಪಲ್ಲವಿ ಜೋಶಿ ಸೇರಿದಂತೆ ಹಲವರ ತಾರಾಬಳಗವಿದೆ..
The Kashmir Files ಸಿನಿಮಾದಲ್ಲಿ ದಶಕಗಳ ಹಿಂದೆ ಕಾಶ್ಮೀರದಲ್ಲಿ ಪಂಡಿತರ ಮೇಲೆ ನಡೆದ ದೌರ್ಜನ್ಯದ ಬಗ್ಗೆ ತೋರಿಸಲಾಗಿದೆ. ಕೆಲವರು ಈ ಸಿನಿಮಾವನ್ನ ‘ಪ್ರೊಪಾಗಾಂಡಾ’ ಸಿನಿಮಾ ಎಂದು ಕರೆದಿದ್ದಾರೆ. ಸಿನಿಮಾ ಬಗ್ಗೆ ಅನೇಕಕರು ಮೆಚ್ಚುಗೆ ವ್ಯಕ್ತಪಡಿಸುತ್ತಿದ್ದಾರೆ.. ಸೋಷಿಯಲ್ ಮೀಡಿಯಾದಲ್ಲಿ ಇದೇ ಸಿನಿಮಾದ ಚರ್ಚೆ ಜೋರಾಗಿದೆ.
ವಿವೇಕ್ ಅಗ್ನಿಹೋತ್ರಿ ಈ ಸಿನಿಮಾ ನಿರ್ದೇಶನ ಮಾಡಿದ್ದಾರೆ. ಸಿನಿಮಾದಲ್ಲಿ ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ದರ್ಶನ್ ಕುಮಾರ್, ಪಲ್ಲವಿ ಜೋಶಿ ಸೇರಿದಂತೆ ಹಲವರು ನಟಿಸಿದ್ದಾರೆ. ‘ದಿ ಕಾಶ್ಮೀರ್ ಫೈಲ್ಸ್’ ಚಿತ್ರವು 1980 ಮತ್ತು 90 ರ ದಶಕದಲ್ಲಿ ಕಾಶ್ಮೀರದಲ್ಲಿ ಹಿಂದೂಗಳು ಮತ್ತು ಕಾಶ್ಮೀರಿ ಪಂಡಿತರ ಹತ್ಯಾಕಾಂಡವನ್ನು ಆಧರಿಸಿದೆ.
ಈ ಚಿತ್ರವನ್ನು ಜೀ ಸ್ಟುಡಿಯೋಸ್ ಮತ್ತು ತೆಲುಗು ನಿರ್ಮಾಪಕ ಅಭಿಷೇಕ್ ಅಗರ್ವಾಲ್ ಸಹ-ನಿರ್ಮಾಣ ಮಾಡಿದ್ದಾರೆ.
ಮಾರ್ಚ್ 11 ರಂದು ದೇಶಾದ್ಯಂತ ಬಿಡುಗಡೆಯಾದ ಈ ಮೂವಿ ಭರ್ಜರಿ ಯಶಸ್ಸು ಕಾಣುತ್ತಿದೆ. ಅಷ್ಟೇ ಅಲ್ಲ ಕಲೆಕ್ಷನ್ ಗಳ ಮಳೆಯೂ ಸುರಿಯುತ್ತಿದೆ.
ಪ್ರಧಾನಿ ನರೇಂದ್ರ ಮೋದಿ ಕೂಡ ಚಿತ್ರ ನೋಡಿ ಚಿತ್ರತಂಡವನ್ನು ಶ್ಲಾಘಿಸಿದ್ದಾರೆ.
ಪ್ರಧಾನಿ ಮಾತ್ರವಲ್ಲ ಚಿತ್ರರಂಗದ ದಿಗ್ಗಜರು, ಹಲವು ಗಣ್ಯರು ಈ ಸಿನಿಮಾವನ್ನು ಹಾಡಿ ಹೊಗಳುತ್ತಿದ್ದಾರೆ