ಸಿನಿಮಾ ರಂಗಕ್ಕೆ ಗುಡ್ ಬೈ ಹೇಳ್ತಾರಾ ಸಹಜ ಸುಂದರಿ ಸಾಯಿ ಪಲ್ಲವಿ
ಸೌತ್ ಸಿನಿಮಾ ಇಂಡಡಸ್ಟ್ರಿಯಲ್ಲಿ ಲೇಡಿ ಪವರ್ ಸ್ಟಾರ್ , ಸಹಜ ಸುಂದರಿ , ರೌಡಿ ಬೇಬಿ ಸಾಯಿ ಪಲ್ಲವಿಗೆ ದೊಡ್ಡ ಫ್ಯಾಂಡಮ್ ಇದೆ… ಸಾಯಿ ಪಲ್ಲವಿಗೆ ಎಷ್ಟು ದೊಡ್ಡ ಅಭಿಮಾನಿಗಳ ಬಳಗವಿದೆ ಅನ್ನೋದಕ್ಕೆ ಒಂದು ಸಣ್ಣ ಝಳಕ್ ಇತ್ತೀಚೆಗೆ ರಷ್ಮಿಕಾ ಮಂದಣ್ಣ ಸಿನಿಮಾ ಆಡವಾಳ್ಳು ಮೀಕು ಜೋಹಾರ್ಲು ಕಾರ್ಯಕ್ರಮದಲ್ಲೇ ಸಿಕ್ಕಿತ್ತು.. ಅಲ್ಲದೇ ಇಂಡಸ್ಟ್ರಿಗೆ ಸಾಯಿ ಪಲ್ಲವಿ ಯಾಕೆ ಲೇಡಿ ಪವರ್ ಸ್ಟಾರ್ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿತ್ತು.. ಕಾರ್ಯಕ್ರಮ ರಶ್ಮಿಕಾ ಸಿನಿಮಾದೇ ಆದ್ರೂ ಅಲ್ಲಿದ್ದವರೆಲ್ಲಾ ನಾನ್ ಸ್ಟಾಪ್ ಚಪ್ಪಾಳೆ ಸಿಡಿಸಿದ್ದು ಸಾಯಿ ಪಲ್ಲವಿಗೆ..
ಪ್ರೇಮಂ ಸಿನಿಮಾ ಮೂಲಕ ಇಂಡಸ್ಟ್ರತಿಗೆ ಪಾದಾರ್ಪಣೆ ಮಾಡಿದ ಡ್ಯಾನ್ಸಿಂಗ್ ಕ್ವೀನ್ , ತಮ್ಮ ನ್ಯಾಚುರಲ್ ಅದಾ ಮೂಲಕ ಅಭಿಮಾನಿಗಳನ್ನ ‘ಫಿದಾ’ ಆಗುವಂತೆ ಮಾಡಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ..
ಇಷ್ಟೆಲ್ಲಾ ಹೆಸರು ಮಾಡಿ , ಯಶಸ್ಸು ಗಳಿಸಿರುವ ಸಾಯಿ ಪಲ್ಲವಿ ಇದೀಗ ಇಂಟಸ್ಟ್ರಿಯಿಂದ ಹೊರನಡೆಯುತ್ತಿದ್ದಾರೆ ಎಂಬ ಸುದ್ದಿ ಹರಿದಾಡ್ತಿದ್ದು , ಅಭಿಮಾನಿಗಳನ್ನ ಆತಂಕಕ್ಕೀಡು ಮಾಡಿದೆ..
ಹೌದು..! ಕೊನೆದಾಗಿ ಸಾಯಿ ಪಲ್ಲವಿ ‘ಶ್ಯಾಮ್ ಸಿಂಗ ರಾಯ್’ ಸಿನಿಮಾದಲ್ಲಿ ಕಾಣಿಸಿಕೊಂಡಿದ್ರು.. ಈ ಸಿನಿಮಾ ಒಂದ್ ರೇಂಜ್ ಗೆ ಹಿಟ್ ಆಗಿತ್ತು.. ಆದ್ರೆ ಈ ಸಿನಿಮಾ ನಂತರ ಸಾಯಿ ಪಲ್ಲವಿ ಯಾವುದೇ ತೆಲುಗು , ತಮಿಳು ಅಥವ ಮಲಯಾಳಂ ಸಿನಿಮಾಗಳನ್ನ ಒಪ್ಪುತ್ತಿಲ್ಲ ಎಂದು ಚರ್ಚೆಯಾಗ್ತಿದೆ..
ಹೀಗಾಗಿಯೇ ಸಿನಿಮಾ ಇಂಡಸ್ಟ್ರಿಗೆ ಗುಡ್ ಬೈ ಹೇಳಲಿದ್ದಾರಾ ಅನ್ನೋ ವದಂತಿ ಸಿಕ್ಕಾಪಟ್ಟೆ ಸದ್ದು ಮಾಡ್ತಿದೆ..