ಜೀ5 ಒಟಿಟಿಯಲ್ಲಿ ವಲಿಮೈ ಹವಾ..!! ನಿಮಿಷದಲ್ಲಿ 100 ಮಿಲಿಯನ್ಸ್ ಸ್ಟ್ರೀಮಿಂಗ್
ತಮಿಳಿನ ಖ್ಯಾತ ನಟ ಥಲಾ ಅಜಿತ್ ನಟನೆಯ ವಲಿಮೈ ಸಿನಿಮಾ ಪ್ರತಿಷ್ಠಿತ ಒಟಿಟಿ ಜೀ5ನಲ್ಲಿ ಭರ್ಜರಿ ಓಪನಿಂಗ್ ಪಡೆದುಕೊಂಡಿದೆ. ಒಂದೇ ನಿಮಿಷದಲ್ಲಿ ಬರೋಬ್ಬರಿ 100 ಮಿಲಿಯನ್ಸ್ ಸ್ಟ್ರೀಮಿಂಗ್ ಪಡೆದುಕೊಂಡಿದೆ. ನಾಲ್ಕು ಭಾಷೆಯಲ್ಲಿ ಜೀ5ನಲ್ಲಿ ರಿಲೀಸ್ ಆಗಿರುವ ವಲಿಮೈ ಸಿನಿಮಾ ನೋಡಲು ಪ್ರೇಕ್ಷಕರು ಮುಗಿಬಿದ್ದಿದ್ದಾರೆ. ಡಿಲೀಟ್ ಆದ ದೃಶ್ಯ ಬಿಡುಗಡೆ ವಲಿಮೈ ಸಿನಿಮಾದಲ್ಲಿ ಡಿಲೀಟ್ ಮಾಡಲಾದ ಒಂದಷ್ಟು ದೃಶ್ಯಗಳನ್ನು ಜೀ5ನಲ್ಲಿ ಬಿಡುಗಡೆ ಮಾಡಲಾಗಿದೆ.
RRR ಅಲ್ಲ Kille R R R..!!!! – ಅಲ್ಲು ಅರ್ಜುನ್
ಕನ್ನಡ, ತಮಿಳು, ತೆಲುಗು ಹಾಗೂ ಹಿಂದಿ ಭಾಷೆಯಲ್ಲಿ ಡಿಲೀಟ್ ಆದ ಸೀನ್ಸ್ ಗಳು ರಿಲೀಸ್ ಆಗಿವೆ. ಜೀ5ನಲ್ಲಿ ನಾಲ್ಕು ಭಾಷೆಯಲ್ಲಿ ರಿಲೀಸ್ ಆಗಿರುವ ವಲಿಮೈ ಪ್ರಮೋಷನ್ ಗೆ ಚಿತ್ರತಂಡ ಭರ್ಜರಿ ಪ್ಲ್ಯಾನ್ ಮಾಡಿತ್ತು. ಬರೋಬ್ಬರಿ ಹತ್ತು ಸಾವಿರ ಚದರ ಅಡಿಯಲ್ಲಿ ವಲಿಮೈ ಸಿನಿಮಾದ ಪೋಸ್ಟರ್ ವೊಂದನ್ನು ಜೀ 5ಬಿಡುಗಡೆ ಮಾಡಿ ಚಿತ್ರರಸಿರಕನ್ನು ಅಟ್ರ್ಯಾಕ್ಟ್ ಮಾಡಿದೆ. ಭಾರತೀಯ ಸಿನಿಮಾ ಇಂಡಸ್ಟ್ರೀಯಲ್ಲಿ ಈವರೆಗೆ ಇಷ್ಟು ದೊಡ್ಡ ಮಟ್ಟದ ಪೋಸ್ಟರ್ ಅನ್ನು ಯಾರು ಬಿಡುಗಡೆ ಮಾಡಿಲ್ಲ ಎನ್ನುವುದು ವಿಶೇಷ.
ಕಿಚ್ಚ ಸುದೀಪ್ ಅವರು ಡ್ಯಾನ್ಸ್ ಮಾಸ್ಟರ್ ಜಾನಿ ಅವರಿಗೆ ಭರ್ಜರಿ ಸರ್ಪ್ರೈಸ್ ಗಿಫ್ಟ್ ನೀಡಿದ್ದಾರೆ..
ವಲಿಮೈ ಸಿನಿಮಾ ಪ್ಯಾನ್ ಇಂಡಿಯಾ ಚಿತ್ರ.. ತಮಿಳು, ತೆಲುಗು, ಹಿಂದಿ, ಕನ್ನಡ ಹಾಗೂ ಮಲಯಾಳಂ ಭಾಷೆಯಲ್ಲಿ ಅದ್ಧೂರಿಯಾಗಿ ಫೆಬ್ರವರಿ 25ರಂದು ಬಿಡುಗಡೆಯಾಗಿತ್ತು. ಚಿತ್ರದಲ್ಲಿ ಅಜಿತ್ ಪೊಲೀಸ್ ಅಧಿಕಾರಿ ಪಾತ್ರ ಮಾಡಿದ್ದು, ಎಚ್. ವಿನೋದ್ ನಿರ್ದೇಶನ ಮಾಡಿದ್ದಾರೆ. ಅಜಿತ್ ಜೊತೆಗೆ ಹುಮಾ ಖುರೇಷಿ, ಕಾರ್ತಿಕೇಯ ಗುಮ್ಮಕೊಂಡ, ಕನ್ನಡದ ನಟ ಅಚ್ಯುತ್ ಕುಮಾರ್ ಮುಂತಾದವರು ಬಣ್ಣ ಹಚ್ಚಿದ್ದಾರೆ.