ನಟಿ ಮೇಲೆ ಹಲ್ಲೆ ಕಿರುಕುಳ : ಪಲ್ಸರ್ ಸುನಿಗೆ ಜಾಮೀನು ನಿರಾಕರಣೆ
ಕನ್ನಡ, ತಮಿಳು, ತೆಲುಗು ಮತ್ತು ಮಲಯಾಳಂ ಸಿನಿಮಾಗಳಲ್ಲಿ ನಟಿಸಿರುವ ನಟಿಯ ಮೇಲಿನ ಹಲ್ಲೆ ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿದ್ದ ಪಲ್ಸರ್ ಸುನಿಗೆ ಕೇರಳ ಹೈಕೋರ್ಟ್ ಜಾಮೀನು ನಿರಾಕರಿಸಿದೆ.. ಜಾಮೀನು ಅರ್ಜಿ ವಿಚಾರಣೆ ನಡೆಸಿರುವ ನ್ಯಾಯಾಲಯವು ಈ ಹಂತದಲ್ಲಿ ಜಾಮೀನು ನೀಡಲು ಸಾಧ್ಯವಿಲ್ಲ ಎಂದು ಸಾಮಾನ್ಯ ಜಾಮೀನು ಅರ್ಜಿಯನ್ನು ತಿರಸ್ಕರಿಸಿದೆ..
ಸಂತ್ರಸ್ತ ನಟಿಯನ್ನು 2017ರ ಫೆಬ್ರವರಿ 17ರ ರಾತ್ರಿ ಅಪಹರಿಸಿ ಎರಡು ಗಂಟೆಗಳ ಕಾಲ ಕಿರುಕುಳ ನೀಡಿದ್ದಾರೆ ಎಂದು ಆರೋಪಿಸಲಾಗಿದೆ. ಪ್ರಕರಣ ಸಂಬಂಧ 10 ಆರೋಪಿಗಳ ಪೈಕಿ ಪೊಲೀಸರು ಏಳು ಮಂದಿಯನ್ನು ಬಂಧಿಸಿದ್ದಾರೆ. ನಂತರ ನಮಟ ದಿಲೀಪ್ ಅವರನ್ನು ಬಂಧಿಸಿ ಜಾಮೀನಿನ ಮೇಲೆ ಬಿಡುಗಡೆ ಮಾಡಲಾಗಿದೆ..