Puneeth Rajkumar
ನಿನ್ನೆ ರಾಜ್ಯಕ್ಕೆ ಭೇಟಿ ನೀಡಿದ್ದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು
ಪುನೀತ್ ರಾಜ್ ಕುಮಾರ್ ಅವರ ನಿವಾಸಕ್ಕೆ ಭೇಟಿ ನೀಡಿ ಅಪ್ಪುಗೆ ನಮನ ಸಲ್ಲಿಸಿದ್ದಾರೆ.
ಪುನೀತ್ ನಿವಾಸಕ್ಕೆ ಭೇಟಿ ಕೊಟ್ಟು ಅಶ್ವಿನಿ ಪುನೀತ್ ರಾಜ್ ಕುಮಾರ್ ಅವರಿಗೆ ಸಾಂತ್ವಾನ ಹೇಳಿದ್ದಾರೆ..
ಲಿಂಗೈಕ್ಯರಾಗಿರುವ ಡಾ.ಶಿವಕುಮಾರ ಸ್ವಾಮೀಜಿಗಳ 115ನೇ ಜನ್ಮದಿನೋತ್ಸವದ ಹಿನ್ನೆಲೆ ರಾಹುಲ್ ಗಾಂಧಿ ಅವರು ಸಿದ್ದಗಂಗಾಮಠಕ್ಕೆ ತೆರಳಿ ಗದ್ದುಗೆ ದರ್ಶನ ಪಡೆದರು. ಆನಂತರ ರಾತ್ರಿ ಬೆಂಗಳೂರಿಗೆ ಪಾವಸ್ಸಾದ ಅವರು ಪುನೀತ್ ರಾಜ್ಕುಮಾರ್ ನಿವಾಸಕ್ಕೆ ಭೇಟಿ ಕೊಟ್ಟಿದ್ದರು..
ಕನ್ನಡದ ಖ್ಯಾತ ನಟರಾಗಿದ್ದ ಶ್ರೀ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು ಅವರ ಪತ್ನಿ @ashwinipuneet ಮತ್ತು ಕುಟುಂಬವನ್ನು ಭೇಟಿ ಮಾಡಿ ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ.
ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ. pic.twitter.com/YPgFZGOZsM
— Rahul Gandhi (@RahulGandhi) March 31, 2022
ರಾಹುಲ್ ಗಾಂಧಿ ಭೇಟಿ ಹಿನ್ನೆಲೆ ಅಪ್ಪು ನಿವಾಸದ ಬಳಿ ಬಿಗಿ ಬಂದೋಬಸ್ತ್ ಮಾಡಲಾಗಿತ್ತು.. ರಾಹುಲ್ ಗಾಂಧಿ ಅವರಿಗೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸಹ ಸಾಥ್ ಕೊಟ್ಟಿದ್ದರು.
ಭೇಟಿ ಬಳಿಕ ಟ್ವಿಟ್ಟರ್ ನಲ್ಲಿ ಕನ್ನಡದಲ್ಲೇ ಟ್ವೀಟ್ ಮಾಡಿದ ರಾಹುಲ್ ಗಾಂಧಿ ಅವರು , “ಕನ್ನಡದ ಖ್ಯಾತ ನಟರಾಗಿದ್ದ ಪುನೀತ್ ರಾಜಕುಮಾರ್ ಅವರ ನಿವಾಸದಲ್ಲಿ ಇಂದು(ಗುರುವಾರ) ಅವರ ಪತ್ನಿ ಅಶ್ವಿನಿ ಮತ್ತು ಕುಟುಂಬವನ್ನು ಭೇಟಿ ಮಾಡಿದೆ. ಪುನೀತ್ ಅವರ ಅಗಲಿಕೆಗೆ ನನ್ನ ಸಂತಾಪಗಳನ್ನು ಸೂಚಿಸಿದೆ. ಅತ್ಯಂತ ಕಡಿಮೆ ವಯಸ್ಸಿನಲ್ಲೇ ಪುನೀತ್ ಅವರು ಕೋಟ್ಯಂತರ ಕನ್ನಡಿಗರ ಮನೆ ಮನಗಳಿಗೆ ಎಂದೂ ಮರೆಯಲಾಗದಂತಹ ನೆನಪಿನ ಬುತ್ತಿಯನ್ನ ನೀಡಿದ್ದಾರೆ” ಎಂದು ತಿಳಿಸಿದ್ದಾರೆ..