Allu Arjun : ಅದ್ದೂರಿಯಾಗಿ ಹುಟ್ಟು ಹಬ್ಬವನ್ನು ಆಚರಿಸಿಕೊಂಡ ನಟ ಅಲ್ಲು ಅರ್ಜುನ್
ಐಕಾನ್ ಸ್ಟಾರ್ ಎಂದೇ ಖ್ಯಾತಿ ಹೊಂದಿರುವ ನಟ ಅಲ್ಲು ಅರ್ಜುನ್ ತಮ್ಮ ಹತ್ತಿರದ 50 ಜನ ಸ್ನೇಹಿತರೊಂದಿಗೆ ಸೆರ್ಬಿಯಾದ ಬೆಲ್‌ಗ್ರೇಡ್‌ನಲ್ಲಿ ಹುಟ್ಟುಹಬ್ಬವನ್ನು ಆಚರಿಸಿಕೊಂಡರು. ಪುಷ್ಪ ಚಿತ್ರದ ಮೂಲಕ ಯಶಸ್ಸಿನ ದೊಡ್ಡ ಅಲೆಯನ್ನೇ ಎಬ್ಬಿಸಿರುವ ಇವರು ಎಲ್ಲೆಡೆ ಬಹುದೊಡ್ಡ ಸಂಖ್ಯೆಯಲ್ಲಿ ಅಭಿಮಾನಿಗಳನ್ನು ಹೊಂದಿದ್ದಾರೆ. ಇದೀಗ ಅವರ ಹುಟ್ಟು ಹಬ್ಬದ ಸಂಭ್ರಮಾಚರಣೆಯ ಫೋಟೋಗಳು ಸಾಮಾಜಿಕ ಮಾಧ್ಯಮದಲ್ಲಿ ದೊಡ್ಡ ಪ್ರವಾಹವನ್ನೇ ಸೃಷ್ಠಿಸಿದೆ.
ಪ್ರತಿ ನಗರದಲ್ಲಿನ ವಿವಿಧ ಅಭಿಮಾನಿ ಸಂಘಗಳು ಐಕಾನ್ ಸ್ಟಾರ್ ಅವರ ಹುಟ್ಟುಹಬ್ಬವನ್ನು ಅದ್ಧೂರಿಯಾಗಿ ಆಚರಿಸುತ್ತಿದೆ. ಅವರ ಹುಟ್ಟುಹಬ್ಬದ 100 ದಿನಗಳ ಮುಂಚೆಯೇ ಆಚರಣೆಗಳು ಪ್ರಾರಂಭವಾಗಿದ್ದವು. ಹಲವೆಡೆ ಅಭಿಮಾನಿಗಳು ಆಹಾರವನ್ನು ವಿತರಿಸಿವುದರ ಜೊತೆಗೆ ಅನಾಥಾಶ್ರಮಗಳು ಮತ್ತು ವೃದ್ಧಾಶ್ರಮಗಳಿಗೆ ಭೇಟಿ ನೀಡಿ ತಮ್ಮದೇ ಆದ ರೀತಿಯಲ್ಲಿ ಕೊಡುಗೆಯನ್ನು ನೀಡಿದರು. ಅಲ್ಲದೇ ಕೆಲವು ಕಡೆಗಳಲ್ಲಿ ಅಭಿಮಾನಿಗಳು ಸಸಿಗಳನ್ನು ನೆಡುವುದರ ಮೂಲಕ ತಮ್ಮ ನೆಚ್ಚಿನ ನಟನ ಜನ್ಮದಿನವನ್ನು ಆಚರಿಸಿದರು. ಹೀಗೆ ಐಕಾನ್ ಸ್ಟಾರ್ ಅಲ್ಲು ಅರ್ಜುನ್ ಅವರ ಅಭಿಮಾನಿಗಳು ನಟನ ಹೆಸರಿನಲ್ಲಿ ಅನೇಕ ಸಾಮಾಜಿಕ ಕಾಯ೯ಕ್ರಮಗಳನ್ನು ಮಾಡಿ ಎಲ್ಲೆಡೆಯಿಂದ ಮೆಚ್ಚುಗೆ ಪಡೆಯುತ್ತಿದ್ದಾರೆ.
ಚಿತ್ರರಂಗದ ಅನೇಕ ಸೆಲೆಬ್ರಿಟಿಗಳು ಸಹ ಸ್ಟಾರ್ ನಟನಿಗೆ ಸಾಮಾಜಿಕ ಮಾಧ್ಯಮದ ಮೂಲಕ ಜನ್ಮದಿನದ ಶುಭಾಶಯಗಳನ್ನು ಕೋರಿದ್ದಾರೆ.