ಶಕ್ತಿಧಾಮಕ್ಕೆ 5 ಕೋಟಿ ನೆರವು ಘೋಷಿಸಿದ ಸಿಎಂ ಬಸವರಾಜ ಬೊಮ್ಮಾಯಿ
ಮೈಸೂರು : ಮೈಸೂರು ಊಟಿ ರಸ್ತೆಯಲ್ಲಿರುವ ಶಕ್ತಿಧಾಮದಲ್ಲಿ ಇನ್ಫೋಸಿಸ್ ಫೌಂಡೇಶನ್ ಬ್ಲಾಕ್ ಕಟ್ಟಡ ಲೋಕಾರ್ಪಣೆ ಹಾಗೂ ಶಕ್ತಿಧಾಮ ವಿದ್ಯಾಶಾಲಾ ಶಂಕುಸ್ಥಾಪನೆ ಸಮಾರಂಭದಲ್ಲಿ ಸಿಎಂ ಬಸವರಾಜ ಬೊಮ್ಮಾಯಿ , ಶಿವರಾಜ್ ಕುಮಾರ , ಕುಟುಂಬದವರು , ಸುತ್ತೂರು ಶ್ರೀಗಳು , ಸಂಸದ ಪ್ರತಾಪ್ ಸಿಂಹ ಸೇರಿದಂತೆ ಅನೇಕರು ಭಾಗಿಯಾಗಿದ್ದರು..
ಭೋಜನಾ ಶಾಲೆ ಉದ್ಘಾಟಿಸಿದ ಬಸವರಾಜ ಬೊಮ್ಮಾಯಿ ಅವರು ಬಳಿನ ಈ ಬಗ್ಗೆ ಮಾತನಾಡುತ್ತಾ ಶಕ್ತಿಧಾಮಕ್ಕೆ 5 ಕೋಟಿ ನೆರವು ಘೋಷಣೆ ಮಾಡಿದ್ದಾರೆ..
ಮಹಿಳೆಯರ ಪುನರ್ವಸತಿ ಮತ್ತು ಅಭಿವೃದ್ಧಿಗೆ ಶ್ರಮಿಸುತ್ತಿರುವ ಮೈಸೂರಿನ ಶಕ್ತಿಧಾಮಕ್ಕೆ 5 ಕೋಟಿ ರೂ. ನೆರವು ನೀಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ಘೋಷಿಸಿದರು.
KGF verse ….. ಏನಿದು..?? ಡಿಜಿಟಲ್ ದುನಿಯಾದಲ್ಲಿ ರಾಕಿ ಭಾಯ್ ಪ್ರಪಂಚ…!!!
ಅಲ್ಲದೇ ಪ್ರತಿಯೊಬ್ಬರು ಸಮಾಜದ ನೋವಿಗೆ ಚಿಕಿತ್ಸೆ ನೀಡುವ ಕೆಲಸ ಮಾಡಬೇಕು. ಶೋಷಿತರು, ದುರ್ಬಲರನ್ನು ಸಮಾಜ ಮತ್ತು ಸರ್ಕಾರ ಕೈ ಹಿಡಿದು ನಿಲ್ಲಿಸಬೇಕು. ಪ್ರೀತಿ ವಿಶ್ವಾಸವನ್ನು ಸಮಾಜಕ್ಕೆ ಕೊಟ್ಟರೇ ಅದೇ ಪ್ರೀತಿ ಗೌರವ ನಮಗೆ ಸಿಗುತ್ತದೆ. ಈ ನಿಟ್ಟಿನಲ್ಲಿ ಪ್ರತಿಯೊಬ್ಬರು ಒಳ್ಳೆಯದನ್ನೇ ಮಾಡಬೇಕು. ಒಳ್ಳೆಯದನ್ನೇ ಯೋಚಿಸಬೇಕೆಂದು ಹೇಳಿದ್ರು..
ಕಾರ್ಯಕ್ರಮದಲ್ಲಿ ಪುನೀತ್ ರಾಜ್‌ಕುಮಾರ್ ಅವರ ಬಗ್ಗೆ ಮಾತನಾಡಿದ ಬೊಮ್ಮಾಯಿ, ಅಪ್ಪು ಸಾವಿರಾರು ಮಂದಿಗೆ ಸಹಾಯ ಮಾಡಿದ್ದರು ಅವರ ಆದರ್ಶವನ್ನು ನಾವು ಪಾಲನೆ ಮಾಡಬೇಕಿದೆ ಎಂದರು.