ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್
ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿದೆ.. ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿದೆ.
ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ ರಂ.ಆರ್. ಜೈಶಂಕರ್, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ.ಸತ್ಯನಾರಾಯಣ ಹಾಗೂ ಚಲನಚಿತ್ರ ರಂಗದಲ್ಲಿನ ಸೇವೆ ಪರಿಗಣಿಸಿ ನಟ ರವಿಚಂದ್ರನ್ ಅವರಿಗೆ ಬೆಂಗಳೂರು ನಗರ ವಿವಿ ಗೌರವ ಡಾಕ್ಟರೇಟ್ ಪ್ರದಾನ ಮಾಡಲಿದೆ.
ಬೆಂಗಳೂರು ನಗರ ವಿವಿಯ ಮೊದಲ ವರ್ಷದ ಘಟಿಕೋತ್ಸವ ಏಪ್ರಿಲ್ 11 ರಂದು ನಡೆಯಲಿದ್ದು, ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಭಾಗವಹಿಸಲಿದ್ದಾರೆ. ಈ ಬಾರಿ ಒಟ್ಟು 77 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗುತ್ತಿದೆ. 41768 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದ್ದು, ಇದರಲ್ಲಿ 29,240 ಪದವಿ ಮತ್ತು 12,528 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತಿದೆ.
ಸೋನಂ ಕಪೂರ್ ಮನೆಯಲ್ಲಿ ಕೋಟ್ಯಾಂತರ ಮೌಲ್ಯದ ಚಿನ್ನಾಭರಣ ಕಳವು..!!!