ನಟ ರವಿಚಂದ್ರನ್ ಅವರಿಗೆ ಗೌರವ ಡಾಕ್ಟರೇಟ್ ಪದವಿ ಪ್ರದಾನ
ಕ್ರೇಜಿಸ್ಟಾರ್ ರವಿಚಂದ್ರನ್ ಅವರಿಗೆ ಬೆಂಗಳೂರು ನಗರ ವಿಶ್ವವಿದ್ಯಾಲಯದ ಪ್ರಥಮ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಘೋಷಣೆ ಮಾಡಲಾಗಿತ್ತು..
ಇಂದು ಬೆಂಗಳೂರು ವಿಶ್ವವಿದ್ಯಾನಿಲಯದ ಚೊಚ್ಚಲ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ಪದವಿ ಸ್ವೀಕರಿಸಿದರು.
ಬೆಂಗಳೂರಿನ ಸೆಂಟ್ರಲ್ ಕಾಲೇಜಿನ ಜ್ಞಾನಜ್ಯೋತಿ ಸಭಾಂಗಣದಲ್ಲಿ ನಡೆದ ಕಾರ್ಯಕ್ರಮದಲ್ಲಿ ರಾಜ್ಯಪಾಲರಾದ ಥಾವರ್ ಚಂದ್ ಗೆಹ್ಲೋಟ್ ಅವರು ನಟ ರವಿಚಂದ್ರನ್ ಸೇರಿದಂತೆ ಮೂವರಿಗೆ ಗೌರವ ಡಾಕ್ಟರೇಟ್ ಪ್ರಧಾನ ಮಾಡಿದರು.
ಕ್ರೇಜಿಸ್ಟಾರ್ ವಿ. ರವಿಚಂದ್ರನ್ ಸೇರಿ ಮೂವರಿಗೆ ಗೌರವ ಡಾಕ್ಟರೇಟ್ ಘೋಷಿಸಲಾಗಿತ್ತು.. ಇನ್ನು 85ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟನಾಗಿ, ನಿರ್ದೇಶಕನಾಗಿ, ನಿರ್ಮಾಪಕನಾಗಿ, ನಟ ರವಿಚಂದ್ರನ್ ಚಿತ್ರರಂಗಕ್ಕೆ ನೀಡಿರುವ ಕೊಡುಗೆಯನ್ನ ಗುರುತಿಸಿ ಗೌರವ ಡಾಕ್ಟರೇಟ್ ಪದವಿ ನೀಡಲಾಗಿದೆ..
ಸಮಾಜ ಕ್ಷೇತ್ರದ ಅನುಪಮ ಸೇವೆಗಾಗಿ ರಂ.ಆರ್. ಜೈಶಂಕರ್, ವೈದ್ಯಕೀಯ ಕ್ಷೇತ್ರದ ಸಾಧನೆಗಾಗಿ ಡಾ.ಸತ್ಯನಾರಾಯಣ ಹಾಗೂ ಚಲನಚಿತ್ರ ರಂಗದಲ್ಲಿನ ಸೇವೆ ಪರಿಗಣಿಸಿ ನಟ ರವಿಚಂದ್ರನ್ ಅವರಿಗೆ ಬೆಂಗಳೂರು ನಗರ ವಿವಿ ಗೌರವ ಡಾಕ್ಟರೇಟ್ ನೀಡಲಾಗಿದೆ..
ಈ ಬಾರಿ ಒಟ್ಟು 77 ವಿದ್ಯಾರ್ಥಿಗಳಿಗೆ ಚಿನ್ನದ ಪದಕ ಪ್ರದಾನ ಮಾಡಲಾಗಿದೆ. 41768 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದೆ. ಇದರಲ್ಲಿ 29,240 ಪದವಿ ಮತ್ತು 12,528 ಸ್ನಾತಕೋತ್ತರ ಪದವಿ ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗಿದೆ..