ವರನಟ ಡಾ. ರಾಜ್ ಕುಮಾರ್ ಅವರ 16ನೇ ವರ್ಷದ ಪುಣ್ಯ ಸ್ಮರಣೆ
ಕೋಟ್ಯಂತರ ಅಭಿಮಾನಿಗಳ ಪಾಲಿನ ಅಣ್ಣಾವ್ರು ಕನ್ನಡಿಗರ ಹೃದಯಮಂದಿರದಲ್ಲಿ ಚಿರಸ್ಥಾಯಿಯಾಗಿರುವ ಕನ್ನಡಿಗರ ಹೆಮ್ಮೆ, ಕಲಾಸರಸ್ವತಿಯ ವರಪುತ್ರ, ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ ಪುರಸ್ಕೃತ, ಕರ್ನಾಟಕ ರತ್ನ ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆ….
ವರನಟ ಡಾಕ್ಟರ್ ರಾಜ್ ಕುಮಾರ್ ಅವರು ನಮ್ಮನ್ನೆಲ್ಲ ಅಗಲಿ 16 ವರ್ಷಗಳು ಕಳೆದಿವೆ.. ಇಂದು ಅಣ್ಣವ್ರ ಪುಣ್ಯಸ್ಮರಣೆ.. ಈ ಹಿನ್ನೆಲೆ ರಾಜ್ ಕುಮಾರ್ ಅವರ ಕುಟುಂಬಸ್ಥರು ಕಂಠೀರವ ಸ್ಟುಡಿಯೋಗೆ ಭೇಟಿ ನೀಡಿ ಅಣ್ಣಾವ್ರ ಸಮಾಧಿಗೆ ಪೂಜೆ ಸಲ್ಲಿಸಲಿದ್ದಾರೆ. ಪಾರ್ವತಮ್ಮ , ಪುನೀತ್ ರಾಜ್ ಕುಮಾರ್ ಅವರಿಗೂ ಪೂಜೆ ಸಲ್ಲಿಸಲಿದ್ದಾರೆ. ಇನ್ನೂ ಈ ಪುಣ್ಯ ಸ್ಮರಣೆಗೆ ಪುನೀತ್ ರಾಜ್‌ಕುಮಾರ್ ಇಲ್ಲದೇ ಇರುವ ನೋವು ಕುಟುಂಬಸ್ಥರು ಅಭಿಮಾನಿಗಳನ್ನ ಕಾಡುತ್ತಿದೆ.
ಇಂದು ಡಾ.ರಾಜ್ ಕುಟುಂಬ ಮತ್ತು ಅಭಿಮಾನಿಗಳು ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿರುವ ಅಣ್ಣಾವ್ರ ಸ್ಮಾರಕಕ್ಕೆ ಪೂಜೆ ಸಲ್ಲಿಸಿದ್ದಾರೆ.. ಅಭಿಮಾನಿಗಳು ಭೇಟಿ ನೀಡಿ ಅಣ್ಣವ್ರಿಗೆ ನಮನ ಸಲ್ಲಿಸುತ್ತಿದ್ದಾರೆ..
ಪ್ರತಿ ವರ್ಷದಂತೆ ಈ ವರ್ಷವೂ ಡಾ.ರಾಜ್ ಅವರ ಪುಣ್ಯಸ್ಮರಣೆಯೆಂದು ಅಭಿಮಾನಿಗಳು ನೇತ್ರದಾನ, ಅಂಗಾಂಗ ದಾನ, ಅನ್ನದಾನ ಮತ್ತು ರಕ್ತದಾನ ಶಿಬಿರಗಳನ್ನು ಆಯೋಜನೆ ಮಾಡಿದ್ದರು.
ನಟ ಶಿವರಾಜ್ ಕುಮಾರ್ ಮತ್ತು ಕುಟುಂಬ, ರಾಘವೇಂದ್ರ ರಾಜ್ ಕುಮಾರ್ ಮತ್ತು ಕುಟುಂಬ, ಅಶ್ವಿನಿ ಪುನೀತ್ ರಾಜ್ ಕುಮಾರ್, ಯುವರಾಜ್ ಕುಮಾರ್, ಡಾ.ರಾಜ್ ಹೆಣ್ಣು ಮಕ್ಕಳಾದ ಪೂರ್ಣಿಮಾ ಮತ್ತು ಕುಟುಂಬ ಸೇರಿದಂತೆ ಡಾ.ರಾಜ್ ಕುಟುಂಬದ ಎಲ್ಲ ಸದಸ್ಯರು ಬೆಳಗ್ಗೆ ಕಂಠೀರವ ಸ್ಟುಡಿಯೋ ಆಗಮಿಸಿ ಸಮಾಧಿಗೆ ಪೂಜೆ ಸಲ್ಲಿಸಿದರು. ನಂತರ ಅಭಿಮಾನಿಗಳಿಗೆ ಸಮಾಧಿ ದರ್ಶನಕ್ಕೆ ಅವಕಾಶ ಕಲ್ಪಿಸಲಾಯಿತು.
ಡಾ.ರಾಜ್ ಕುಮಾರ್ ಅವರ ಪುಣ್ಯಸ್ಮರಣೆ ಹಿನ್ನೆಲೆ ನಟರೂ ಆಗಿರುವ ರಾಜ್ಯದ ಕೃಷಿ ಸಚಿವರಾದ ಬಿ.ಸಿ.ಪಾಟೀಲರಿಂದು ಪುತ್ರಿ ನಟಿ ಸೃಷ್ಟಿಪಾಟೀಲ್ ಸಹಿತರಾಗಿ ಬೆಂಗಳೂರಿನ ಕಂಠೀರವ ಸ್ಟಯಡಿಯೋ ಬಳಿಯ ಡಾ.ರಾಜ್ ಕುಮಾರ್ ಸಮಾಧಿಗೆ ಪೂಜೆ ಸಲ್ಲಿಸಿ ನಮನ ಸಲ್ಲಿಸಿದರು.