ಯಕ್ಷಗಾನ ಭಾಗವತ ಪ್ರಸಾದ್ ಬಲಪ ವಿಧಿವಶ
ಯಕ್ಷಗಾನದ ಖ್ಯಾತ ಭಾಗವತರಾದ ಬಲಿಪ ಪ್ರಸಾದ್ ಅವರು ತಮ್ಮ 45 ನೇ ವಯಸ್ಸಿಗೆ ಇಹಲೋಕ ತ್ಯಜಿಸಿದ್ದಾರೆ.. ಅವರು ಹಲವು ವರ್ಷಗಳಿಂದ ಗಂಟಲಿನ ಕ್ಯಾನ್ಸರ್ ಗೆ ಒಳಗಾಗಿದ್ದರು.. ಇದೀಗ ಚಿಕಿತ್ಸೆ ಫಲಕಾರಿಯಾಗದೇ ಮಂಗಳೂರಿನ ಖಾಸಗಿ ಆಸ್ಪತ್ರೆ ಯಲ್ಲಿ ಕೊನೆಯುಸಿರೆಲೆದಿದ್ದಾರೆ.
ಮೂಡಬಿದಿರೆ ತಾಲೂಕಿನ ಮಾರೂರು ನಿವಾಸಿಯಾಗಿರುವ ಬಲಿಪ ಭಾಗವತರು ಕಟೀಲು ಮೇಳದ ಹಿರಿಯ ಭಾಗವತರಾಗಿದ್ದರು. ಯಕ್ಷಗಾನ ಬಲಿಪ ಭಾಗವತ ಪರಂಪರೆಯ ಮೇರು ಶಿಖರವಾಗಬೇಕಿದ್ದ ಪ್ರಸಾದ್ ಬಲಿಪರ ಅಗಲಿಕೆ ಇಡೀ ಯಕ್ಷ ಪ್ರೇಮಿಗಳಿಗೆ ಆಘಾತ ತಂದಿದೆ..