Nagachaitanya : ಎರಡನೇ ಮದುವೆಯಾಗಲಿದ್ದಾರಾ…??? ನಾಗಚೈತನ್ಯ
10 ವರ್ಷಗಳ ಕಾಲ ಪ್ರೀತಿಸಿ ಮದುವೆಯಾಗಿದ್ದ ಟಾಲಿವುಡ್ ನ ಸ್ಟಾರ್ ಕಪಲ್ ಸಮಂತಾ ನಾಗಚೈತನ್ಯ ಕೆಲ ತಿಂಗಳುಗಳ ಹಿಂದಷ್ಟೇ ಡಿವೋರ್ಸ್ ಪಡೆದಿದ್ದು ತಮ್ಮ ನಾಲ್ಕು ವರ್ಷಗಳ ದಾಂಪತ್ಯಕ್ಕೆ ಇತಿಶ್ರೀ ಹಾಡಿದ್ದಾರೆ..
ಇವರ ಡಿವೋರ್ಸ್ ಸುದ್ದಿಯಿಂದ ಅಭಿಮಾನಿಗಳು ಸಿಕ್ಕಾಪಟ್ಟೆ ಶಾಕ್ ಆಗಿದ್ದರು.. ಇವರಿಬ್ಬರೂ ಸಹ ಈ ವಿಚಾರವಾಗಿ ಮೌನವಾಗಿದ್ರೂ ನೆಟ್ಟಿಗರು ಸೈಲೆಂಟ್ ಇರಲ್ಲ.. ಈವರೆಗೂ ಇಬ್ಬರ ಅಭಿಮಾನಿಗಳೂ ಪರಸ್ಪರರನ್ನ ಟ್ರೋಲ್ ಮಾಡ್ತಾ ಬಂದಿದ್ದಾರೆ.. ಇಬ್ಬರೂ ಸದ್ಯ ಸಿನಿಮಾರಂಗದಲ್ಲಿ ಬ್ಯುಸಿಯಾಗಿದ್ದಾರೆ..
ಈ ಜೋಡಿ ಮತ್ತೆ ಒಂದಾಗಬೇಕೆಂಬ ಆಶಯ ಅಭಿಮಾನಿಗಳದ್ದು.. ಆದ್ರೆ ಆ ಆಸೆಗೆ ತಣ್ಣೀರು ಎರಚಿದೆ ಟಾಲಿವುಡ್ ಅಂಗಳದಲ್ಲಿ ಹರಿದಾಡ್ತಿರುವ ಒಂದು ಸುದ್ದಿ..
ನಾಗಚೈತನ್ಯ ಶೀಘ್ರದಲ್ಲೇ ಮತ್ತೊಮ್ಮೆ ಮದುವೆಯಾಗುತ್ತಿದ್ದಾರೆ ಎಂಬ ಗಾಸಿಪ್ ಎಲ್ಲಕಡೆ ಹಬ್ಬಿದ್ದು ದೊಡ್ಡ ಸಂಚಲನವನ್ನೇ ಸೃಷ್ಟಿ ಮಾಡಿದೆ..
ಈ ಮೊದಲು ನಾಗಚೈತನ್ಯ, ಸಮಂತಾ ಜೊತೆ ಮದುವೆಯಾಗುವುದಕ್ಕೂ ಮೊದಲು ನಟಿ ಶ್ರುತಿಹಾಸನ್ ಜೊತೆ ಡೇಟಿಂಗ್ ಮಾಡುತ್ತಿದ್ದರು. ಕೊನೆಗೆ ಈ ನಟ ಸಮಂತಾ ಅವರನ್ನು ಮದುವೆ ಮಾಡಿಕೊಂಡಿದ್ದರು.
ಇತ್ತೀಚೆಗೆ ನಾಗಚೈತನ್ಯ ಅವರು ‘ಮಜಿಲಿ’ ಸಹನಟಿ ದಿವ್ಯಾಂಶ ಕೌಸಿಕ್ ಅವರೊಂದಿಗೆ ರಿಲೇಷನ್‍ಶಿಪ್ ಹೊಂದಿದ್ದಾರೆ ಎಂಬ ವದಂತಿ ಕೇಳಿಬರುತ್ತಿದೆ.