Dileeep : ನಟಿ ಲೈಂಗಿಕ ಕಿರುಕುಳ ಪ್ರಕರಣ : ದಿಲೀಪ್ ಅರ್ಜಿ ತಿರಸ್ಕರಿಸಿದ ಕೇರಳ ಹೈಕೋರ್ಟ್
ನಟಿ ಲೈಂಗಿಕ ಕಿರುಕುಳದ ಪ್ರಕರಣದಲ್ಲಿ ಪ್ರಮುಖ ಆರೋಪಿಯಾಗಿರುವ ನಟ ದಿಲೀಪ್ ಕೊಲೆ ಸಂಚು ಆರೋಪ ಎದುರಿಸುತ್ತಿದ್ದಾರೆ.. ನಟಿ ಅತ್ಯಾಚಾರ ಪ್ರಕರಣದ ತನಿಖೆ ನಡೆಸಿದ ತನಿಖಾಧಿಕಾರಿ ಮತ್ತು ಇತರ ಹಿರಿಯ ಅಧಿಕಾರಿಗಳ ವಿರುದ್ಧ ಕ್ರಿಮಿನಲ್ ಪಿತೂರಿ ಮತ್ತು ಬೆದರಿಕೆಯೊಡ್ಡಿದ ಆರೋಪದ ಮೇಲೆ, ಜನವರಿಯಲ್ಲಿ ದಿಲೀಪ್ ಮತ್ತು ಇತರ ಐವರ ವಿರುದ್ಧ ಹೊಸದಾಗಿ ಎಫ್‌ಐಆರ್ ದಾಖಲಿಸಲಾಗಿತ್ತು. ಆ ಬಳಿಕ ಮತ್ತೆ ನಟ ದಿಲೀಪ್ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಸಿದ್ದರು.
ಈ ಎಫ್‌ಐಆರ್ ಅನ್ನು ರದ್ದು ಮಾಡಬೇಕು ಹಾಗೂ ಪ್ರಕರಣವನ್ನು ಸಿಬಿಐಗೆ ವಹಿಸಬೇಕು ಎಂದು ನಟ ದಿಲೀಪ್ ಕೇರಳ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ಅರ್ಜಿಯ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಜುನೈದ್ ರೆಹಮಾನ್ ಎಎ ದಿಲೀಪ್ ಸಲ್ಲಿಸಿದ್ದ ಅರ್ಜಿಯನ್ನು ನಿರಾಕರಿಸಿದ್ದಾರೆ. FIR ಕೈಬಿಡುವಂತೆ ಸೂಚಿಸಲಾಗುವುದಿಲ್ಲ ಹಾಗೂ ಪ್ರಕರಣವನ್ನು ಸಿಬಿಐಗೆ ಒಪ್ಪಿಸುವ ಅಗತ್ಯವೂ ಇಲ್ಲವೆಂದು ತೀರ್ಪು ನೀಡಿದ್ದಾರೆ. 2017 ರಲ್ಲಿ ನಟಿ ಗೆ ಲೈಂಗಿಕ ಕಿರುಕುಳ ನೀಡಿದ್ದ ಪ್ರಕರಣದ ಪ್ರಮುಖ ಆರೋಪಿ ಮಲಯಾಳಂ ಸ್ಟಾರ್ ನಟ ದಿಲೀಪ್..
KGF 2 : ಯಶ್ – ಕಿಚ್ಚನ ಫ್ಯಾನ್ ವಾರ್ ಗೆ ಕಾರಣವಾದ ವಿಡಿಯೋದ ಅಸಲಿಯತ್ತೇ ಬೇರೆ..!!
KGF 2 ಆರ್ಭಟದ ಎಫೆಕ್ಟ್… ಹೆಚ್ಚಾಯ್ತು ‘ಸಲಾರ್’ ಬಜೆಟ್..!!