Devadas Kapikad : ತುಳು ಸಿನಿಮಾರಂಗದ ಆಲ್ ರೌಂಡರ್ ದೇವದಾಸ್ ಕಾಪಿಕಾಡ್ ರಿಗೆ ಗೌರವ ಡಾಕ್ಟರೇಟ್
ತುಳು ಸಿನಿಮಾರಂಗದಲ್ಲಿ ಮಿಂಚಿರುವ ದೇವದಾಸ್ ಕಾಪಿಕಾಡ್ ಅವರಿಗೆ ಮಂಗಳೂರು ವಿಶ್ವ ವಿದ್ಯಾನಿಲಯ ಗೌರವ ಡಾಕ್ಟರೇಟ್ ಪ್ರಶಸ್ತಿ ನೀಡಿ ಗೌರವಿಸಿದೆ. ಮಂಗಳೂರು ವಿಶ್ವ ವಿದ್ಯಾನಿಲಯದ 40 ನೇ ಘಟಿಕೋತ್ಸವದ ಹಿನ್ನಲೆಯಲ್ಲಿ ದೇವದಾಸ್ ಕಾಪಿಕಾಡ್ ಸೇರಿದಂತೆ, ಧರ್ಮಸ್ಥಳ ಧರ್ಮಾಧಿಕಾರಿ ಡಾ.ಡಿ ವೀರೇಂದ್ರ ಹೆಗ್ಗಡೆಯವರ ಧರ್ಮಪತ್ನಿ ಹೇಮಾವತಿ ವಿ ಹೆಗ್ಗಡೆ ಮತ್ತು ಧರ್ಮದರ್ಶಿ ಹರಿಕೃಷ್ಣ ಪುನರೂರು ಅವರಿಗೂ ಮಂಗಳೂರು ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್ ನೀಡಿ ಗೌರವಿಸಿದೆ.
ಏಪ್ರಿಲ್ 23ರಂದು ಕೋಣಾಜೆಯಲ್ಲಿರುವ ಮಂಗಳೂರು ವಿಶ್ವವಿದ್ಯಾಲಯದಲ್ಲಿ ನಡೆಯುವ ಘಟಿಕೋತ್ಸವದಲ್ಲಿ ಗೌರವ ಡಾಕ್ಟರೇಟ್ ನೀಡಿ ಗೌರವಿಸಲಾಗುತ್ತದೆ. ತುಳು ರಂಗಭೂಮಿ, ತುಳು ಚಿತ್ರರಂಗದಲ್ಲಿ ಜನಪ್ರಿಯ ಕಲಾವಿದರಾದ ದೇವದಾಸ್ ಕಾಪಿಕಾಡ್ ಅವರು ನಾನಾ ವಿಭಾಗದಲ್ಲಿ ಗುರುತಿಸಸಿಕೊಂಡಿದ್ದಾರೆ.. ಇದಷ್ಟೇ ಅಲ್ಲದೇ ಬರಹಗಾರ, ನಿರ್ದೇಶಕ, ಕಥೆಗಾರ, ಗೀತ ರಚನೆಗಾರ, ಗಾಯಕ, ನಿರ್ಮಾಪಕ, ಹಾಸ್ಯನಟನಾಗಿಯೂ ದೇವದಾಸ್ ಕಾಪಿಕಾಡ್ ಗುರುತಿಸಿಕೊಂಡಿದ್ದಾರೆ.. 8000ಕ್ಕೂ ಅಧಿಕ ನಾಟಕ ಪ್ರದರ್ಶನ ನೀಡಿದ್ದಾರೆ..
ಕಳೆದ 30 ವರ್ಷಗಳಿಂದ ತುಳು ರಂಗಭೂಮಿಯಲ್ಲಿ ದೇವದಾಸ್ ಕಾಪಿಕಾಡ್ ಸಕ್ರೀಯರಾಗಿದ್ದಾರೆ. 1989ರಲ್ಲಿ ದೇವದಾಸ್ ಕಾಪಿಕಾಡ್ ನಲಗೆ ಬಲೇ ಚಾ ಪರ್ಕ ಎಂಬ ನಾಟಕದ ಮೂಲಕ ಅತಿ ಹೆಚ್ಚು ಜನಪ್ರಿಯತೆ ಗಳಿಸಿದರು..
Devadas kapikad honored by doctorate