ರಾಜ್ ಕುಮಾರ್ ಅವರ ಹುಟ್ಟುಹಬ್ಬ : ಅರ್ಥಪೂರ್ಣವಾಗಿ ಆಚರಿಸಿದ ಅಶ್ವಿನಿ ಪುನೀತ್ ರಾಜ್ ಕುಮಾರ್
ಇಂದು ವರನಟ ಡಾಕ್ಟರ್ ರಾಜ್ ಕುಮಾರ್ ಅವರ 94 ನೇ ಹುಟ್ಟುಹಹಬ್ಬ.. ರಾಜ್ಯಾದ್ಯಂತ ಅಭಿಮಾನಿಗಳು ಅರ್ಥಪೂರ್ಣವಾಗಿ ಹುಟ್ಟುಹಬ್ಬ ಆಚರಣೆ ಮಾಡ್ತಿದ್ದಾರೆ..
ಅಶ್ವಿನಿ ಪುನೀತ್ ರಾಜ್‌ಕುಮಾರ್ ಅವರು ಅರ್ಥಪೂರ್ಣವಾಗಿ ಡಾ ರಾಜ್ ಕುಮಾರ್ ಅವರ ಹುಟ್ಟುಹಬ್ಬವನ್ನು ಆಚರಿಸಿದ್ದಾರೆ.
ಶಾಲಾ ಮಕ್ಕಳಿಗೆ ಪುಸ್ತಕಗಳನ್ನು ವಿತರಿಸಿದ್ದಾರೆ. ಭಾರತಿನಗರ ಸಿಟಿಜನ್ ಫೋರಂವತಿಯಿಂದ ಈ ಕಾರ್ಯಕ್ರಮಗಳನ್ನು ಆಯೋಜನೆ ಮಾಡಲಾಗಿತ್ತು. ಸಾವಿರಾರು ಸಂಖ್ಯೆಯಲ್ಲಿ ಭಾಗಿಯಾಗಿದ್ದ ಎಲ್ಲಾ ಮಕ್ಕಳಿಗೂ ಅಶ್ವಿನಿ ಪುನೀತ್ ರಾಜ್‌ಕುಮಾರ್ ಪುಸ್ತಕಗಳನ್ನು ಹಂಚಿದ್ದಾರೆ. ಜೊತೆಗೆ ಎಲ್ಲಾ ಮಕ್ಕಳಿಗೆ ಸ್ವೀಟ್ ಹಂಚಿದ್ದಾರೆ.