ಮೋದಿ ಭೇಟಿಯಾಗಿ ರುದ್ರಾಕ್ಷಿ ಮಾಲೆ ನೀಡಿದ ನಟ ಅನುಪಮ್ ಖೇರ್..!!
The Kashmir Files ಸಿನಿಮಾ ಇತ್ತೀಚೆಗೆ ದೇಶಾದ್ಯಂತ ಸಂಚಲನವನ್ನೇ ಸೃಷ್ಟಿಸಿದ ಸಿನಿಮಾ ಅಂದ್ರೂ ತಪ್ಪಾಗೋದಿಲ್ಲ.. ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.. ದಿ ಕಾಶ್ಮೀರ್ ಫೈಲ್ಸ್ 300 ಕೋಟಿ ರೂ ಗಡಿ ದಾಟಿದೆ..
ಈ ಸಿನಿಮಾಗೆ ಹಾಗೂ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.. ಸಿನಿಮಾಗೆ ಪರ ಅಷ್ಟೇ ಅಲ್ದೇ ವಿರೋಧಿ ಅಲೆಯೂ ಎದ್ದಿದ್ದು , ರಾಜಕೀಯವಾಗಿ ಚರ್ಚಾ ವಿಚಾರವೂ ಆಗಿತ್ತು..
ಮಾರ್ಚ್ 11 ರಂದು ಬಿಡುಗಡೆಯಾದ ಈ ಸಿನಿಮಾಗೆ ದೇಶಾದ್ಯಂತ ಥಿಯೇಟರ್ ಗಳಲ್ಲಿ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.
ಈ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅನುಪಮ್ ಖೇರ್ ಅವರು ನಟಿಸಿದ್ದು , ಅವರ ಪಾತ್ರಕ್ಕೆ ಭಾರೀ ಮೆಚ್ಚುಗೆ ವ್ಯಕ್ತವಾಗ್ತಿದೆ… ಇದೀಗ ನಟ ಅನುಪಮ್ ಖೇರ್ ಅವರು ಪ್ರಧಾನಿ ನರೇಂದ್ರ ಮೋದಿ ಅವರನ್ನು ಶನಿವಾರ ಭೇಟಿಯಾಗಿ ತಮ್ಮ ತಾಯಿ ನೀಡಿದ್ದ ರುದ್ರಾಕ್ಷಿ ಮಾಲೆಯನ್ನು ನೀಡಿದ್ದಾರೆ. ಮೋದಿ ಅವರನ್ನು ಭೇಟಿ ಮಾಡಿದ ಅನುಪಮ್ ಖೇರ್ ಅವರು ಕೆಲವೊಂದು ಫೋಟೋಗಳನ್ನು ಅವರೊಂದಿಗೆ ಕ್ಲಿಕ್ಕಿಸಿಕೊಂಡು ತಮ್ಮ ಟ್ವಿಟ್ಟರ್ ಖಾತೆಯಲ್ಲಿ ಹಂಚಿಕೊಂಡಿದ್ದಾರೆ.
ಫೋಟೋ ಜೊತೆಗೆ ಗೌರವಾನ್ವಿತ ಪ್ರಧಾನಿ ನರೇಂದ್ರ ಮೋದಿಯವರೇ, ನಿಮ್ಮನ್ನು ಭೇಟಿಯಾಗಿ ತುಂಬಾ ಸಂತೋಷವಾಯಿತು. ದೇಶದ ಜನತೆಗಾಗಿ ನೀವು ಹಗಲಿರುಳು ಪಡುತ್ತಿರುವ ಶ್ರಮ ಸ್ಪೂರ್ತಿದಾಯಕವಾಗಿದೆ. ನಿಮ್ಮನ್ನು ರಕ್ಷಿಸಲು ನನ್ನ ತಾಯಿ ಕಳುಹಿಸಿದ ರುದ್ರಾಕ್ಷಿ ಮಾಲೆಯನ್ನು ನೀವು ಗೌರವದಿಂದ ಸ್ವೀಕರಿಸಿದ್ದನ್ನು ನಾನು ಎಂದಿಗೂ ನೆನಪಿಸಿಕೊಳ್ಳುತ್ತೇನೆ. ಜೈ ಹೋ. ಜೈ ಹಿಂದ್ ಎಂದು ಕ್ಯಾಪ್ಷನ್ನಲ್ಲಿ ಬರೆದುಕೊಂಡಿದ್ದಾರೆ.