ಬೇಬಿ ಬಂಪ್ ಫೋಟೋ ಶೂಟ್ ಮಾಡಿಸಿದ ಸಂಜನಾ..!!
ಸ್ಯಾಂಡಲ್ ವುಡ್ ನಟಿ ಸಂಜನಾ ಗಲ್ರಾನಿ ಸದ್ಯ ಗರ್ಭವತಿಯಾಗಿದ್ದು , ಸೋಷಿಯಲ್ ಮೀಡಿಯಾದಲ್ಲಿ ಸಿಕ್ಕಾಪಟ್ಟೆ ಆಕ್ಟೀವ್ ಆಗಿರುತ್ತಾರೆ.. ಫೋಟೋ ವಿಡಿಯೋಗಳನ್ನ ಹಂಚಿಕೊಳ್ತಾ ಇರುತ್ತಾರೆ.. ಡ್ರಗ್ ಲಿಂಕ್ ಕೇಸ್ ನಲ್ಲಿ ಜೈಲು ಸೇರಿ ಮೂರು ತಿಂಗಳ ನಂತರ ಜಾಮೀನಿನ ಮೇಲೆ ಹೊರಬಂದಿದ್ದ ಸಂಜನಾ ಸೋಷಿಯಲ್ ಮೀಡಿಯಾದಲ್ಲಿ ಆಕ್ಟೀವ್ ಆಗಿದ್ದಾರೆ.. ಅಂದ್ಹಾಗೆ ಸಂಜನಾ ತುಂಬು ಗರ್ಭಿಣಿಯಾಗಿದ್ದು ,, ಇತ್ತೀಚೆಗೆ ಸೀಮಂತ ಕಾರ್ಯಕ್ರಮ ನೆರವೇರಿದ ಫೋಟೋಗಳನ್ನ ಸೋಷಿಯಲ್ ಮೀಡಿಯಾದಲ್ಲಿ ಹಂಚಿಕೊಂದದ್ದರು..
ಈಗ ಬೇಬಿ ಬಂಪ್ ಫೋಟೋಶೂಟ್ ಮಾಡಿಸಿದ್ದಾರೆ. ಈ ಫೋಟೋಶೂಟ್ ಸಖತ್ ವೈರಲ್ ಆಗುತ್ತಿದೆ.
ಸಂಜನಾ ಗಲ್ರಾನಿ 9 ತಿಂಗಳ ತುಂಬು ಗರ್ಭೀಣಿಯಾಗಿದ್ದು, ಹೊಸ ಫೋಟೋಶೂಟ್ನಲ್ಲಿ ಮೆರುನ್ ಕಲರ್ ಡ್ರೇಸ್ನಲ್ಲಿ ಭಿನ್ನವಾಗಿ ಫೋಟೋಗೆ ಪೋಸ್ ಕೊಟ್ಟಿದ್ದಾರೆ. ತಲೆಗೆ ಹ್ಯಾಟ್ ಹಾಕಿಕೊಂಡು ಕಾಣಿಸಿಕೊಂಡಿದ್ದಾರೆ. ಜೀವನ ಎಷ್ಟು ವಿಭಿನ್ನ ಮತ್ತು ಕಷ್ಟಕರ ಎಂದು ಪೋಸ್ಟ್ ಗೆ ಬರೆದುಕೊಂಡಿದ್ದಾರೆ.
ಪೋಸ್ಟ್ ನಲ್ಲಿ ತಾವು 18ನೇ ವಯಸ್ಸಿಗೆ ಚಿತ್ರರಂಗಕ್ಕೆ ಬಂದಿರುವುದರ ಬಗ್ಗೆ ಹೇಳಿಕೊಂಡಿದ್ದಾರೆ. ಜೊತೆಗೆ ತನ್ನ ಫ್ಯಾಮಿಲಿ ಜೀವನವನ್ನ 35ನೇ ವರ್ಷಕ್ಕೆ ಶುರು ಮಾಡಿದ್ದೇನೆ. ಕಳೆದ 2 ವರ್ಷಗಳಿಂದ ಜೀವನದಲ್ಲಿ ಸಾಕಷ್ಟು ಕಷ್ಟ ಮತ್ತು ಸವಾಲುಗಳನ್ನು ಏದುರಿಸಿದ್ದೇನೆ. ಇದೀಗ 18 ಕೆ.ಜಿ ತೂಕ ಹೆಚ್ಚಾಗಿರುವುದರಿಂದ ಬೆನ್ನು ನೋವಿನ ಸಮಸ್ಯೆಯಿಂದ ಬಳಲುತ್ತಿದ್ದೇನೆ ಎಂದು ಬರೆದುಕೊಂಡಿದ್ದಾರೆ.
‘ಗಂಡ ಹೆಂಡತಿ’ ಚಿತ್ರದ ಮೂಲಕ ಸ್ಯಾಂಡಲ್ ವುಡ್ ಗೆ ಪಾದಾರ್ಪಣೆ ಮಾಡಿದ್ದ ಸಂಜನಾ ನಂತರ ಹಲವಾರು ಕನ್ನಡ ಸಿನಿಮಾಗಳಲ್ಲಿ ನಟಿಸಿದ್ದಾರೆ.. ಪರಭಾಷಾ ಚಿತ್ರಗಳಲ್ಲೂ ನಟಿಸಿದ್ದಾರೆ. ಕೆಲ ದಿನಗಳ ಹಿಂದೆಷ್ಟೇ ತಾವು ಗರ್ಭೀಣಿಯಾಗಿರುವ ವಿಚಾರವನ್ನ ಸೋಷಿಯಲ್ ಮೀಡಿಯಾ ಮೂಲಕ ಅಭಿಮಾನಿಗಳಿಗೆ ತಿಳಿಸಿದ್ದರು.