Zee5 ಒಟಿಟಿಗೆ ಸೆನ್ಸೇಷನಲ್ ಸಿನಿಮಾ The Kashmir Files …ಮೇ 13ಕ್ಕೆ ಡಿಜಿಟಲ್ ವರ್ಲ್ಡ್ ಕಾಶ್ಮೀರಿ ಫೈಲ್ಸ್ ಕಮಾಲ್…ಕನ್ನಡದಲ್ಲೂ ನೀವ್ ನೋಡಬಹುದು ಸಿನಿಮಾ
ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರತಿಷ್ಠಿತ ಜೀ5ಗೆ ಒಟಿಟಿ ಸಂಸ್ಥೆ ಲಗ್ಗೆ ಇಡಲು ಸಜ್ಜಾಗಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್ನ್ನು ಕೊಳ್ಳೆ ಹೊಡೆದಿತ್ತು. ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು. ಇಷ್ಟೆಲ್ಲಾ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಮೇ 13ಕ್ಕೆ ಜೀ5 ಒಟಿಟಿಯಲ್ಲಿ ಪ್ರಿಮಿಯರ್ ಆಗಲಿದೆ.
ವಿವೇಕ್ ಅಗ್ನಿಹೋತ್ರಿ ನಿರ್ದೇಶನದಲ್ಲಿ ಮೂಡಿ ಬಂದಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾದಲ್ಲಿ ಅತಿರಥ ಮಹಾರಥ ತಾರಬಳಗ ನಟಿಸಿದ್ದರು. ಅನುಪಮ್ ಖೇರ್, ಮಿಥುನ್ ಚಕ್ರವರ್ತಿ, ಪಲ್ಲವಿ ಜೋಶಿ ಮತ್ತು ದರ್ಶನ್ ಕುಮಾರ್ ಸಿನಿಮಾದಲ್ಲಿ ಪ್ರಮುಖ ಪಾತ್ರದಲ್ಲಿ ಅಮೋಘವಾಗಿ ಅಭಿನಯಿಸಿದ್ದರು. 1991ರ ಸಮಯದಲ್ಲಿ ಕಾಶ್ಮೀರದಲ್ಲಿ ನಡೆದ ಪಂಡಿತರ ಹತ್ಯೆ ಹಾಗೂ ವಲಸೆಯನ್ನು ಸಿನಿಮಾವನ್ನು ಕಟ್ಟಿಕೊಡಲಾಗಿತ್ತು. ಹೀಗಾಗಿ ಈ ಸಿನಿಮಾ ಬಗ್ಗೆ ವಿರೋಧವೂ ವ್ಯಕ್ತವಾಗಿತ್ತು. ವಿರೋಧ ನಡುವೆಯೂ ಕಾಶ್ಮೀರ್ ಫೈಲ್ಸ್ ಗೆಲುವಿನ ನಗೆ ಬೀರಿತ್ತು.
ಕನ್ನಡ ಸೇರಿದಂತೆ ನಾಲ್ಕು ಭಾಷೆಯಲ್ಲಿ ಕಾಶ್ಮೀರಿ ಫೈಲ್ಸ್
ಬಾಲಿವುಡ್ ನಲ್ಲಿ ತಯಾರಾಗಿದ್ದ ಈ ಸಿನಿಮಾ ಕೇವಲ ಹಿಂದಿ ಭಾಷೆಯಲ್ಲಿ ತೆರೆಗೆ ಬಂದಿತ್ತು. ಆದ್ರೇ ಜೀ 5 ಒಟಿಟಿಯಲ್ಲಿ ನಾಲ್ಕು ಭಾಷೆಗಳಲ್ಲಿ ತೆರೆಗೆ ಬರುತ್ತಿದೆ. ಹಿಂದಿ, ತಮಿಳು, ತೆಲುಗು ಮತ್ತು ಕನ್ನಡ ಭಾಷೆಯಲ್ಲಿ ಸಿನಿಮಾ ಒಟಿಟಿಯಲ್ಲಿ ಮೇ 13 ರಿಂದ ಪ್ರಸಾರ ಕಾಣುತ್ತಿದೆ. ಇಷ್ಟು ದಿನ ಬೆಳ್ಳಿಪರದೆ ಮೇಲೆ ಧೂಳ್ ಎಬ್ಬಿಸಿದ್ದ ಕಾಶ್ಮೀರಿ ಫೈಲ್ಸ್ ಸಿನಿಮಾ ಜೀ5 ಡಿಜಿಟಲ್ ವರ್ಲ್ಡ್ ನಲ್ಲಿ ಮಿಂಚಲಿದೆ.
The Kashmir Files realesing may 13th oon ott