ಹಲವು ದಿನಗಳಿಂದ ಅನಾರೋಗ್ಯಕ್ಕೆ ಒಳಗಾಗಿದ್ದ ಬಾಲಿವುಡ್ ನ ಖ್ಯಾತ ನಟ ಮಿಥುನ್ ಚಕ್ರವರ್ತಿ ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು.. ಇದೀಗ ಡಿಸ್ಚಾರ್ಜ್ ಆಗಿದ್ದಾರೆ..
72 ವರ್ಷದ ನಟ ಕೆಲ ದಿನಗಳ ಹಿಂದೆ ಹೊಟ್ಟೆನೋವು ಹಾಗೂ ಜ್ವರದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಅವರನ್ನು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವಿಚಾರವನ್ನು ನಟನ ಮಗ ಮಿಮೋಹ್ ಚಕ್ರವರ್ತಿ ತಿಳಿಸಿದ್ದರು.
ತಂದೆ ಕಿಡ್ನಿ ಸ್ಟೋನ್ನಿಂದ ಬಳಲುತ್ತಿದ್ದು, ಹೀಗಾಗಿ ಆಸ್ಪತ್ರೆಗೆ ದಾಖಲಿಸಿ, ಚಿಕಿತಸೆ ಕೊಡಿಸಲಾಗುತ್ತಿದೆ ಎಂದು ಮಾಹಿತಿ ನೀಡಿದ್ದರು.
ಇಂದು ತಂದೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದು, ಆರೋಗ್ಯವಾಗಿದ್ದಾರೆಂದು ತಿಳಿಸಿದ್ದಾರೆ..