ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ವಿಧಿವಶ
ಸಂಗೀತ ಲೋಕದಲ್ಲಿ ತಮ್ಮದೇ ಛಾಪು ಮೂಡಿಸಿರುವ ಖ್ಯಾತ ಸಂತೂರ್ ವಾದಕ ಪಂಡಿತ್ ಶಿವಕುಮಾರ್ ಶರ್ಮಾ ಅವರು ವಿಧಿವಶರಾಗಿದ್ದಾರೆ.. 6 ತಿಂಗಳಿನಿಂದ ಕಿಡ್ನಿ ಸಮಸ್ಯೆಯಿಂದ ಬಳಲುತ್ತಿದ್ದ 84 ವರ್ಷದ ಶಿವಕುಮಾರ್ ಅವರು ಡಯಾಲಿಸಿಸ್ ಪಡೆಯುತ್ತಿದ್ದರು. ಇದೀಗ ಹೃದಯಾಘಾತದಿಂದ ಕೊನೆಯುಸಿರೆಳೆದಿದ್ದಾರೆ..
ಜಮ್ಮುವಿನಲ್ಲಿ ಜನಿಸಿದ ಪಂಡಿತ್ ಶಿವಕುಮಾರ್ ಶರ್ಮಾ ಅವರು ಸಂಗೀತ ನಿರ್ದೇಶಕರಾಗಿ ಕೂಡ ಕಾರ್ಯನಿರ್ವಹಿಸಿದ್ದಾರೆ. ಇವರು ತಮ್ಮ 13ನೇ ವಯಸ್ಸಿನಲ್ಲಿಯೇ ಸಂತೂರ್ ನುಡಿಸುವುದನ್ನು ಕಲಿಯಲು ಪ್ರಾರಂಭಿಸಿದರು. 1955ರಲ್ಲಿ ಮೊದಲ ಬಾರಿಗೆ ಮುಂಬೈನಲ್ಲಿ ಸಾರ್ವಜನಿಕವಾಗಿ ಸಂತೂರ್ ಪ್ರದರ್ಶನ ನೀಡುವ ಮೂಲಕ ಜನಮ ಗೆದ್ದಿದ್ದರು..
ಶಿವಕುಮಾರ್ ಶರ್ಮಾ ಅವರು 1956ರ ಝಣಕ್ ಝಣಕ್ ಪಾಯಲ್ ಬಜೆ ಚಿತ್ರದ ಒಂದು ದೃಶ್ಯಕ್ಕೆ ಹಿನ್ನೆಲೆ ಸಂಗೀತ ಸಂಯೋಜಿಸಿದ್ದಾರೆ. ನಾಲ್ಕು ವರ್ಷಗಳ ನಂತರ ಶಿವಕುಮಾರ್ ಶರ್ಮಾ ಮೊದಲ ಬಾರಿಗೆ ಒಬ್ಬರೇ ಆಲ್ಬಂ ರೆಕಾರ್ಡ್ ಮಾಡಿದರು. 1991 ರಲ್ಲಿ ಪ್ರತಿಷ್ಠಿತ ಪದ್ಮಶ್ರೀ ಮತ್ತು 2001 ರಲ್ಲಿ ಪದ್ಮ ವಿಭೂಷಣ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡಿದ್ದರು..