ಸೌತ್ ಸಿನಿಮಾ ಇಂಡಡಸ್ಟ್ರಿಯಲ್ಲಿ ಲೇಡಿ ಪವರ್ ಸ್ಟಾರ್ , ಸಹಜ ಸುಂದರಿ , ರೌಡಿ ಬೇಬಿ ಸಾಯಿ ಪಲ್ಲವಿಗೆ ದೊಡ್ಡ ಫ್ಯಾಂಡಮ್ ಇದೆ… ಸಾಯಿ ಪಲ್ಲವಿಗೆ ಎಷ್ಟು ದೊಡ್ಡ ಅಭಿಮಾನಿಗಳ ಬಳಗವಿದೆ ಅನ್ನೋದಕ್ಕೆ ಒಂದು ಸಣ್ಣ ಝಳಕ್ ಇತ್ತೀಚೆಗೆ ರಷ್ಮಿಕಾ ಮಂದಣ್ಣ ಸಿನಿಮಾ ಆಡವಾಳ್ಳು ಮೀಕು ಜೋಹಾರ್ಲು ಕಾರ್ಯಕ್ರಮದಲ್ಲೇ ಸಿಕ್ಕಿತ್ತು.. ಅಲ್ಲದೇ ಇಂಡಸ್ಟ್ರಿಗೆ ಸಾಯಿ ಪಲ್ಲವಿ ಯಾಕೆ ಲೇಡಿ ಪವರ್ ಸ್ಟಾರ್ ಅನ್ನೋದಕ್ಕೆ ಮತ್ತೊಂದು ಸಾಕ್ಷಿ ಸಿಕ್ಕಿತ್ತು.. ಕಾರ್ಯಕ್ರಮ ರಶ್ಮಿಕಾ ಸಿನಿಮಾದೇ ಆದ್ರೂ ಅಲ್ಲಿದ್ದವರೆಲ್ಲಾ ನಾನ್ ಸ್ಟಾಪ್ ಚಪ್ಪಾಳೆ ಸಿಡಿಸಿದ್ದು ಸಾಯಿ ಪಲ್ಲವಿಗೆ..
ಪ್ರೇಮಂ ಸಿನಿಮಾ ಮೂಲಕ ಇಂಡಸ್ಟ್ರತಿಗೆ ಪಾದಾರ್ಪಣೆ ಮಾಡಿದ ಡ್ಯಾನ್ಸಿಂಗ್ ಕ್ವೀನ್ , ತಮ್ಮ ನ್ಯಾಚುರಲ್ ಅದಾ ಮೂಲಕ ಅಭಿಮಾನಿಗಳನ್ನ ‘ಫಿದಾ’ ಆಗುವಂತೆ ಮಾಡಿ ಯಶಸ್ಸಿನ ಉತ್ತುಂಗದಲ್ಲಿದ್ದಾರೆ..
ಸಾಯಿ ಪಲ್ಲವಿ ಇದೀಗ ಕನ್ನಡ ಸಿನಿಮಾರಂಗಕ್ಕೆ ಪಾದಾರ್ಪಣೆ ಮಾಡ್ತಿದ್ದಾರೆ.. ಗಾರ್ಗಿ ಸಿನಿಮಾ ಮೂಲಕ ಕನ್ನಡ ಸಿನಿಮಾರಂಗಕ್ಕೆ ಎಂಟ್ರಿಕೊಡ್ತಿದ್ದಾರೆ..
ಕನ್ನಡದಲ್ಲಿ ನಟಿಸದೇ ಇದ್ದರೂ ಕನ್ನಡದಲ್ಲಿ ಅಪಾರ ಜನಪ್ರಿಯತೆ ಅಭಿಮಾನಿಗಳನ್ನ ಸಂಪಾದಿಸಿರುವ ನಟಿ ಸಾಯಿ ಪಲ್ಲವಿ ಅಧಿಕೃತವಾಗಿ ಕನ್ನಡ ಚಿತ್ರರಂಗಕ್ಕೆ ಕಾಲಿಟ್ಟಿದ್ದಾರೆ.
ನಿನ್ನೆ ಸಾಯಿಪಲ್ಲವಿ ಹುಟ್ಟುಹಬ್ಬ, ಬರ್ತಡೇ ಪ್ರಯುಕ್ತ “ಗಾರ್ಗಿ” ಚಿತ್ರತಂಡ ಮೇಕಿಂಗ್ ವೀಡಿಯೋ ಬಿಡುಗಡೆ ಮಾಡಿದೆ. ಅಚ್ಚರಿ ಎಂದರೆ ಈ ಚಿತ್ರ ಕನ್ನಡದಲ್ಲೂ ರಿಲೀಸ್ ಆಗುತ್ತಿದ್ದ, ಸ್ವತಃ ಸಾಯಿಪಲ್ಲವಿ ಕನ್ನಡಕ್ಕೆ ಡಬ್ ಮಾಡಿ ಕನ್ನಡ ಸಿನಿ ಪ್ರೇಮಿಗಳ ಹೃದಯ ಕದ್ದಿದ್ದಾರೆ.
“ಈ ಸಿನಿಮಾ ಬಗ್ಗೆ ಹೇಳಬೇಕು ಎಂದು ತಿಂಗಳುಗಳ ಕಾಲ ಕಾದೆ. ಕೊನೆಗೂ ನನ್ನ ಹುಟ್ಟುಹಬ್ಬದ ದಿನ ಈ ವಿಷಯ ಹೇಳಲು ಚಿತ್ರತಂಡ ಅನುಮತಿ ನೀಡಿದೆ. ಗಾರ್ಗಿ ನಿಮ್ಮ ಮುಂದೆ ಇದೆ” ಎಂದು ಸಾಯಿ ಪಲ್ಲವಿ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಾರೆ.
ತೆಲುಗು, ತಮಿಳು, ಕನ್ನಡ ಭಾಷೆಯಲ್ಲಿ ‘ಗಾರ್ಗಿ’ ರಿಲೀಸ್ ಆಗುತ್ತಿದೆ. ಈ ಸಿನಿಮಾ ಕಥೆ ಬರೆದು ನಿರ್ದೇಶನ ಮಾಡಿದ್ದಾರೆ ಗೌತಮ್ ಚಂದ್ರನ್.
ಸಾಯಿ ಪಲ್ಲವಿ ಅವರೇ ಕನ್ನಡ ಕಲಿತಿದ್ದಾರೆ, ಕನ್ನಡ ಪದ ಉಚ್ಛಾರ ಮಾಡುವುದು ಸಾಯಿ ಪಲ್ಲವಿಗೆ ಸುಲಭ ಇರಲಿಲ್ಲ. ಎಡೆಬಿಡದೆ ಪ್ರಯತ್ನ ಹಾಕಿ ಸಾಯಿ ಪಲ್ಲವಿ ಅವರು ಪದೇ ಪದೇ ಉಚ್ಛಾರ ಮಾಡಿ ಕನ್ನಡ ಮಾತನಾಡಿದ್ದಾರೆ. ಸಾಯಿ ಪಲ್ಲವಿ ಅವರು ಹೇಗೆ ಕನ್ನಡ ಕಲಿತರು ಎಂಬ ವಿಡಿಯೋವೊಂದು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗುತ್ತಿದೆ. ಸಿನಿಮಾಕ್ಕಾಗಿ ಕನ್ನಡ ಕಲಿತು ಮಾತನಾಡುವ ಶ್ರಮ ಹಾಕಿದ ಸಾಯಿ ಪಲ್ಲವಿ ಕಂಡು ಅನೇಕರು ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.