ಕೆಎಲ್ ರಾಹುಲ್ – ಆತಿಯಾ ಶೆಟ್ಟಿ ಮದುವೆ ಬಗ್ಗೆ ಸುನಿಲ್ ಶೆಟ್ಟಿ ಮಾತು..!!
ಟೀಮ್ ಇಂಡಿಯಾದ ಆಟಗಾರ , ಐಪಿಎಲ್ ನಲ್ಲಿ ಲಕ್ನೋ ಸೂಪರ್ ಜೇಂಟ್ಸ್ ತಂಡವನ್ನ ಮುನ್ನೆಡುಸುತ್ತಿರುವ ಕನ್ನಡಿಗ KL RAHUL ಕ್ರಿಕೆಟ್ ಹೊರತಾಗಿ ಸುನಿಲ್ ಶೆಟ್ಟಿ ಮಗಳು ಆಥಿಯಾ ಶೆಟ್ಟಿ ಜೊತೆಗಿನ ಪ್ರೇಮ ವಿಚಾರದಲ್ಲಿ ಸುದ್ದಿಯಲ್ಲಿರುತ್ತಾರೆ..
ಕನ್ನಡಿಗ , ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಜೊತೆಗೆ ಕೆ ಎಲ್ ರಾಹುಲ್ ಡೇಟಿಂಗ್ ನಲ್ಲಿರುವ ವಿಚಾರ ಗೊತ್ತೇ ಇದೆ..
ಇದೀಗ ಈ ಜೋಡಿ ಶೀಘ್ರದಲ್ಲೇ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಿದಾಡ್ತಿದೆ.. ಅಲ್ಲದೇ ಈ ಜೋಡಿಯ ಮದುವೆಗೆ ಈಗಾಗಲೇ ಸಿದ್ಧತೆ ಆರಂಭವಾಗಿದೆ ಎಂದು ಹೇಳಲಾಗ್ತಿದೆ..
ಇನ್ನೂ ಮಗಳು ಕೆಎಲ್ ರಾಹುಲ್ ಜೊತೆಗೆ ಮದುವೆಯಾಗುತ್ತಿರೋದಕ್ಕೆ ಬಾಲಿವುಡ್ ನಟ ಸುನಿಲ್ ಶೆಟ್ಟಿ ಒಪ್ಪಿದ್ದಾರೆಂತೆ..
ವರದಿಗಳ ಪ್ರಕಾರ ಈ ವರ್ಷದ ಅಂತ್ಯದೊಳಗೆ ಈ ಜೋಡಿ ದಾಂಪತ್ಯ ಜೀವನಕ್ಕೆ ಕಾಲಿಡಲಿದೆ..
ಈ ಕುರಿತು ಖಾಸಗಿ ವಾಹಿನಿಯೊಂದರ ಸಂದರ್ಶನದಲ್ಲಿ ಮಾತನಾಡಿದ ಸುನೀಲ್ ಶೆಟ್ಟಿ, ನನ್ನ ಆಶೀರ್ವಾದ ಯಾವಾಗಲೂ ಅವರೊಂದಿಗೆ ಇರುತ್ತದೆ ಎಂದು ಶುಭಹಾರೈಸಿದ್ದಾರೆ. ಅಲ್ಲದೇ ಕಾಲ ಬದಲಾಗಿದೆ ಅವರವರ ಇಚ್ಛೆಗೆ ಅನುಗುಣವಾಗಿ ಏನು ಮಾಡಬೇಕೆಂದು ಅವರೇ ನಿರ್ಧರಿಸುತ್ತಾರೆ.
ನನ್ನ ಮಗಳು ಮತ್ತು ಮಗ ಇಬ್ಬರೂ ಜವಾಬ್ದಾರಿಯುತರಾಗಿದ್ದಾರೆ. ಅವರ ಭವಿಷ್ಯದ ನಿರ್ಧಾರ ಅವರೇ ತೆಗೆದುಕೊಳ್ಳಬೇಕೆಂದು ನಾನು ಬಯಸುತ್ತೇನೆ. ನನ್ನ ಆಶೀರ್ವಾದ ಅವರಿಗೆ ಯಾವಾಗಲೂ ಇರುತ್ತದೆ ಎಂದಿದ್ದಾರೆ.
ಅಂದ್ಹಾಗೆ ಸುನೀಲ್ ಶೆಟ್ಟಿ ಅವರು ಮಂಗಳೂರಿನ ಮೂಲ್ಕಿಯವರು. ಕೆ ಎಲ್ ರಾಹುಲ್ ಸಹ ಮಂಗಳೂರಿನವರೇ..