The Kashmir Files ಸಿನಿಮಾ ಇತ್ತೀಚೆಗೆ ದೇಶಾದ್ಯಂತ ಸಂಚಲನವನ್ನೇ ಸೃಷ್ಟಿಸಿದ ಸಿನಿಮಾ ಅಂದ್ರೂ ತಪ್ಪಾಗೋದಿಲ್ಲ.. ಈ ಸಿನಿಮಾ ಬಾಕ್ಸ್ ಆಫೀಸ್ ನಲ್ಲಿ ಧೂಳೆಬ್ಬಿಸಿದೆ.. ದಿ ಕಾಶ್ಮೀರ್ ಫೈಲ್ಸ್ 300 ಕೋಟಿ ರೂ ಗಡಿ ದಾಟಿದೆ..
ಈ ಸಿನಿಮಾಗೆ ಹಾಗೂ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಎಲ್ಲೆಡೆಯಿಂದ ಮೆಚ್ಚುಗೆ ವ್ಯಕ್ತವಾಗ್ತಿದೆ.. ಸಿನಿಮಾಗೆ ಪರ ಅಷ್ಟೇ ಅಲ್ದೇ ವಿರೋಧಿ ಅಲೆಯೂ ಎದ್ದಿದ್ದು , ರಾಜಕೀಯವಾಗಿ ಚರ್ಚಾ ವಿಚಾರವೂ ಆಗಿತ್ತು..
ಮಾರ್ಚ್ 11 ರಂದು ಬಿಡುಗಡೆಯಾದ ಈ ಸಿನಿಮಾಗೆ ದೇಶಾದ್ಯಂತ ಥಿಯೇಟರ್ ಗಳಲ್ಲಿ ಒಳ್ಳೆಯ ರೆಸ್ಪಾನ್ಸ್ ಸಿಕ್ಕಿದೆ.
ಇಡೀ ದೇಶದಲ್ಲಿ ಸಂಚಲನ ಸೃಷ್ಟಿಸಿದ್ದ ಕಾಶ್ಮೀರ್ ಫೈಲ್ಸ್ ಸಿನಿಮಾ ಪ್ರತಿಷ್ಠಿತ ಜೀ5ಗೆ ಒಟಿಟಿಯಲ್ಲಿ ಸ್ಟ್ರೀಮ್ ಆಗಲು ಸಜ್ಜಾಗಿದೆ. ಕಾಶ್ಮೀರ ಪಂಡಿತರ ಮೇಲಾದ ದೌರ್ಜನ್ಯ, ನಿರಾಶ್ರಿತರ ಹತ್ಯೆ ಕುರಿತು ತಯಾರಿಸಿದ್ದ ಈ ಸಿನಿಮಾ ಬಾಕ್ಸಾಫೀಸ್ನ್ನು ಕೊಳ್ಳೆ ಹೊಡೆದಿತ್ತು.
ಪ್ರಧಾನಿ ನರೇಂದ್ರ ಮೋದಿಯಿಂದ ಹಿಡಿದು ರಾಜ್ಯದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸೇರಿದಂತೆ ರಾಜಕೀಯ ನಾಯಕರು, ಸೆಲೆಬ್ರಿಟಿಗಳು, ಜನಸಾಮಾನ್ಯರು ಸಿನಿಮಾ ಕಣ್ತುಂಬಿಕೊಂಡು ಮೆಚ್ಚುಗೆ ವ್ಯಕ್ತಪಡಿಸಿದ್ದರು.
ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ ಅವರಿಗೆ ಎಲ್ಲೆಡೆಯಿಂದ ಪ್ರಶಂಶೆಯ ಸುರಿಮಳೆ ಬಂದಿದೆ.. ಇದೀಗ ದೆಹಲಿ ಫೈಲ್ಸ್ ಸಿನಿಮಾವನ್ನ ಕೈಗೆತ್ತುಕೊಂಡಿದ್ಧಾರೆ. ಆದ್ರೆ ಈ ಸಿನಿಮಾವನ್ನ ಸಿಂಗಾಪುರದಲ್ಲಿ ಬ್ಯಾನ್ ಮಾಡಲಾಗಿದ್ದು ನಿರ್ದೇಶಕರು ಅಸಮಾಧಾನ ಹೊರಹಾಕಿದ್ದಾರೆ..
ಅಂದ್ಹಾಗೆ ದ್ವೇಷಕ್ಕೆ ಪ್ರಚೋದನೆ ನೀಡುತ್ತಿರುವ ಕಾರಣ ಹಾಗೂ ಮುಸಲ್ಮಾನರ ಬಗ್ಗೆ ಒಂದು ಪೂರ್ವಾಗ್ರಹ ಪೀಡಿತ ರೀತಿಯಲ್ಲಿ ತೋರಿಸಿರುವ ಕಾರಣಕ್ಕೆ ಹಾಗೂ ಪ್ರಸ್ತುತ ಕಾಶ್ಮೀರ ವಿವಾದದಲ್ಲಿ ಹಿಂದುಗಳನ್ನು ಬೇರೆ ಮಾದರಿಯಲ್ಲಿ ಚಿತ್ರೀಕರಿಸಿರುವ ಕಾರಣ ‘ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ಸಿಂಗಪುರದಲ್ಲಿ ಪ್ರದರ್ಶಿಸಲು ಅನುಮತಿ ನೀಡಿಲ್ಲ” ಎಂದದು ಸಿಂಗಪುರದ ಸೆನ್ಸಾರ್ ಬೋರ್ಡ್ ಅಧಿಕಾರಿಗಳು ಹೇಳಿದ್ದಾರೆ.
ಸಿನಿಮಾದಲ್ಲಿರುವ ದೃಶ್ಯಗಳು, ದೃಶ್ಯಗಳನ್ನು ತೋರಿಸಿರುವ ರೀತಿ ಸಮುದಾಯಗಳ ನಡುವೆ ದ್ವೇಷ ಭಿತ್ತುವ ಮಾದರಿಯಲ್ಲಿವೆ. ಸಾಮಾಜಿಕ ಸಾಮರಸ್ಯಕ್ಕೆ ಅಡ್ಡಿ ತರುವಂತೆ, ಧಾರ್ಮಿಕ ಸಹಿಷ್ಣುತೆ ಭಾವಕ್ಕೆ ಧಕ್ಕೆ ತರುವಂತೆಯೂ ಇದೆ. ನಮ್ಮ ಬಹು ಸಂಸ್ಕೃತಿ, ಬಹು ಧಾರ್ಮಿಕ ನಂಬುಗೆಯ ದೇಶಕ್ಕೆ ಈ ಸಿನಿಮಾ ಸರಿಯಾದುದದಲ್ಲ ಎಂದು ಅಧಿಕಾರಿಗಳು ಹೇಳಿದ್ದಾರೆ.
ಸಿಂಗಪುರದ ಯಾವುದೇ ಧರ್ಮದ ವ್ಯಕ್ತಿಯ ಧರ್ಮವನ್ನು ಅವಹೇಳನ ಮಾಡುವ, ಕೀಳಾಗಿ ಬಿಂಬಿಸುವ ವಸ್ತುಗಳನ್ನು, ಕಂಟೆಂಟ್ ಅನ್ನು ಸಹಿಸಲಾಗುವುದಿಲ್ಲ. ಹಾಗಾಗಿ ದಿ ಕಾಶ್ಮೀರ್ ಫೈಲ್ಸ್’ ಸಿನಿಮಾವನ್ನು ನಿಷೇಧ ಮಾಡಲಾಗಿದೆ ಎಂದಿದ್ದಾರೆ.
ಈ ಸುದ್ದಿಯನ್ನು ಕಾಂಗ್ರೆಸ್ ಸಂಸದ ಶಶಿ ತರೂರ್ ಟ್ವೀಟ್ ಮಾಡಿದ್ದು, ಸರ್ಕಾರ ಪ್ರಚಾರ ಮಾಡಿದ ಸಿನಿಮಾಕ್ಕೆ ಸಿಂಗಪುರದಲ್ಲಿ ನಿಷೇಧ ಹೇರಲಾಗಿದೆ ಎಂದಿದ್ದಾರೆ.
ಶಶಿ ತರೂರ್ ಅನ್ನು ಉದ್ದೇಶಿಸಿ ಟ್ವೀಟ್ ಮಾಡಿರುವ ದಿ ಕಾಶ್ಮೀರ್ ಫೈಲ್ಸ್ ಸಿನಿಮಾದ ನಿರ್ದೇಶಕ ವಿವೇಕ್ ಅಗ್ನಿಹೋತ್ರಿ, ತರೂರ್ ಅವರನ್ನು ಮೂರ್ಖ, ಸದಾ ತಪ್ಪು ಹುಡುಕುವವ ಅಥವಾ ದೂರು ಹೇಳುವವ ಎಂದು ಕರೆದಿದ್ದಾರೆ. ಫಾಪ್ಡೂಡಲ್ ಎಂದು ಕರೆದಿದ್ದಾರೆ…
The Kashmir Files: 1989-90 ರ ದಶಕದಲ್ಲಿ ಕಾಶ್ಮೀರ ಪಂಡಿತರ ಮೇಲೆ ಆದ ದೌರ್ಜನ್ಯ, ಅತ್ಯಾಚಾರವನ್ನು ಎಳೆ ಎಳೆಯಾಗಿ ಬಿಚ್ಚಿಟ್ಟ ನೈಜ ಘಟನೆಯಾದಾರಿತ ಚಿತ್ರವಾಗಿದೆ. ಈ ಚಿತ್ರವು ಸಾಕಷ್ಟು ಸುದ್ದಿಯಲ್ಲಿದ್ದು, ಚಿತ್ರದ ಕುರಿತು ಪರ-ವಿರೋಧದ ಮಾತು ಕೇಳಿ ಬರುತ್ತಿದೆ.