ನಟಿ ಶಹಾನಾ ಮೃತದೇಹ ಅನುಮಾನಾಸ್ಪದ ರೀತಿಯಲ್ಲಿ ಪತ್ತೆಯಾಗಿದೆ.. ಕನ್ನಡದ ‘ಲಾಕ್ ಡೌನ್’ ಸಿನಿಮಾ ನಟಿ ಶಹಾನಾ ಅನುಮಾನಾಸ್ಪದವಾಗಿ ಸಾವನಪ್ಪಿದ್ದು , ಪತಿಯನ್ನ ಪೊಲೀಸರು ವಶಕ್ಕೆ ಪಡೆದು ವಿಚಾರಣೆಗೊಳಪಡಿಸಿದ್ದಾರೆ.
ಲಾಕ್ ಡೌನ್ ಸಿನಿಮಾದ ಮೂಲಕ ಕನ್ನಡ ಸಿನಿಮಾ ರಂಗಕ್ಕೆ ಪ್ರವೇಶ ಮಾಡಿದ್ದ ಶಹಾನಾ ಕಾಸರಗೋಡು ಮೂಲದವರು. ಶಹಾನಾ ಪರಂಬಿಲ್ ಬಜಾರ್ನಲ್ಲಿರುವ ತಮ್ಮ ನಿವಾಸದ ಕಿಟಕಿ ಗ್ರಿಲ್ ನಲ್ಲಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದು , ಶಹಾನಾ ಪತಿ ಸಾಜದ್ ನನ್ನ ವಶಕ್ಕೆ ಪಡೆಯಲಾಗಿದೆ.
ಕನ್ನಡದಲ್ಲಿ ಶಹಾನಾ ನಟಿಸಿರುವ ಲಾಕ್ ಡೌನ್ ಸಿನಿಮಾ ಇನ್ನೂ ರಿಲೀಸ್ ಆಗಬೇಕಿದೆ..