ಬಾಲಿವುಡ್ ನಟ ಅಕ್ಷಯ್ ಕುಮಾರ್ ಅವರಿಗೆ ಮತ್ತೆ ಕೊರೊನಾ ಸೋಂಕು ದೃಢವಾಗಿದೆ.. ಎರಡನೇ ಬಾರಿಗೆ ನಟನಿಗೆ ಕೋವಿಡ್ ಸೋಂಕು ತಗುಲಿರುವ ವಿಚಾರವನ್ನ ಟ್ವೀಟ್ ಮೂಲಕ ದೃಢಪಡಿಸಿದ್ದಾರೆ..
ಸೋಷಿಯಲ್ ಮೀಡಿಯಾ ಮೂಲಕ ಕೊರೋನಾ ಪಾಸಿಟಿವ್ ಕುರಿತು ವಿಚಾರ ಹಂಚಿಕೊಂಡ ನಟ ಅಕ್ಷಯ್, ಕಾನ್ ಫಿಲ್ಮ್ ಫೆಸ್ಟಿವಲ್ ಮಿಸ್ ಮಾಡಿಕೊಳ್ಳುತ್ತಿರುವುದಾಗಿ ತಿಳಿಸಿದ್ದಾರೆ.
2022ರ ಕಾನ್ ಫಿಲ್ಮ್ ಫೆಸ್ಟಿವಲ್ ನೋಡಲು ಕಾತುರದಿಂದ ಕಾಯುತ್ತಿದ್ದೆ ಆದರೆ ಅಷ್ಟರಲ್ಲಿ ನನಗೆ ಕೊರೋನಾ ಸೋಂಕು ತಗುಲಿರುವುದು ತಿಳಿಯಿತು.
ಹಾಗಾಗಿ ವಿಶ್ರಾಂತಿ ಪಡೆಯುವೆ. ನನ್ನ ಚಿತ್ರತಂಡಕ್ಕೆ ಶುಭವಾಗಲಿ, ಅನುರಾಗ್ ಠಾಕೂರ್ ಮತ್ತು ಇಡೀ ಕಾರ್ಯಕ್ರಮವನ್ನು ಮಿಸ್ ಮಾಡಿಕೊಳ್ತಿದ್ದೀನಿ ಎಂದು ತಿಳಿಸಿದ್ದಾರೆ..
ಅಕ್ಷಯ್ ಕುಮಾರ್ ಸದ್ಯ ಯಶ್ ರಾಜ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗುತ್ತಿರುವ ಪೃಥ್ವಿರಾಜ್ ಸಿನಿಮಾದಲ್ಲಿ ನಟಿಸುತ್ತಿದ್ದಾರೆ.