ಬಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಆತ್ಮಹತ್ಯೆಗೆ ಶರಣು
ಅನೇಕ ಧಾರಾವಾಹಿಗಳಲ್ಲಿ ಕಾಣಿಸಿಕೊಂಡಿರುವ ಬೆಂಗಾಳಿ ಕಿರುತೆರೆ ನಟಿ ಪಲ್ಲವಿ ಡೇ ಆತ್ಮಹತ್ಯೆಗೆ ಶರಣಾಗಿದ್ಧಾರೆ.. ಮೊನ್ ಮನೆ ನಾ ಧಾರವಾಹಿ ಮೂಲಕ ಖ್ಯಾತಿ ಗಳಿಸಿದ್ದ ಪಲ್ಲವಿ ಕೋಲ್ಕತ್ತಾದ ಗರ್ಫಾದ ತಮ್ಮ ನಿವಾಸದಲ್ಲಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ನೇಣು ಬಿಗಿದ ಸ್ಥಿತಿ ಶವ ಪತ್ತೆಯಾಗಿದ್ದು, ಸೀಲಿಂಗ್ ಫ್ಯಾನ್ಗೆ ನೇಣು ಬಿಗಿದು ಪಲ್ಲವಿ ನೇಣು ಹಾಕಿಕೊಂಡಿದ್ದಾರೆ. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದೆ.. ನಟಿಯ ಸಾವಿಗೆ ನಿಖರವಾದ ಕಾರಣ ತಿಳಿದುಬಂದಿಲ್ಲ.. ಬಂಗಾಳದ ಪೊಲೀಸರು ಪ್ರಕರಣ ದಾಖಾಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ.
ಈ ನಟಿಗೆ ಈಗಿನ್ನು ವಯಸ್ಸು 20 ಅಷ್ಟೇ ಆಗಿತ್ತು.. ಇಷ್ಟು ಸಣ್ಣ ವಯಸ್ಸಿನಲ್ಲೇ ಇಹಲೋಕ ತ್ಯಜಿಸಿರುವ ನಟಿಗೆ ಅಭಿಮಾನಿಗಳು , ಕಲಾವಿದರು ಸಂತಾಪ ಸೂಚಿಸಿದ್ದಾರೆ..