ವಿಜಯ್ ದೇವರಕೊಂಡ ಮತ್ತು ಸಮಂತಾ ಅಭಿನಯದ ಬಹುನಿರೀಕ್ಷಿತ ಖುಷಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಯಾಗಿದೆ. ಚಿತ್ರ ಡಿಸೆಂಬರ್ 23 ರಂದು ಬಿಡುಗಡೆಯಾಗಲಿದೆ.
ವಿಜಯ್ ದೇವರಕೊಂಡ ಮತ್ತು ಸಮಂತಾ ಅಭಿನಯದ ಮುಂಬರುವ ಚಿತ್ರಕ್ಕೆ ಖುಷಿ ಎಂದು ಹೆಸರಿಡಲಾಗಿದೆ. ರೊಮ್ಯಾಂಟಿಕ್ ಕಾಮಿಡಿ ಚಿತ್ರವನ್ನು ಶಿವ ನಿರ್ವಾಣ ನಿರ್ದೇಶಿಸಲಿದ್ದಾರೆ.
ಮೇ 16 ರಂದು, ನಿರ್ಮಾಪಕರು ಬಿಡುಗಡೆ ದಿನಾಂಕದ ಜೊತೆಗೆ ಚಿತ್ರದ ಫಸ್ಟ್ ಲುಕ್ ಪೋಸ್ಟರ್ ಅನ್ನು ರಿಲೀಸ್ ಮಾಡಿದ್ದಾರೆ. ಖುಷಿ ಡಿಸೆಂಬರ್ 23 ರಂದು ತಮಿಳು, ತೆಲುಗು, ಮಲಯಾಳಂ ಮತ್ತು ಕನ್ನಡದಲ್ಲಿ ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ. ಸದ್ಯ ಕಾಶ್ಮೀರದಲ್ಲಿ ಚಿತ್ರೀಕರಣ ನಡೆಯುತ್ತಿದೆ.
ಶಿವ ನಿರ್ವಾಣ ನಿರ್ದೇಶನದ ರೊಮ್ಯಾಂಟಿಕ್ ಕಾಮಿ ಸಿನಿಮಾದಲ್ಲಿ ವಿಜಯ್ ದೇವರಕೊಂಡ ಮತ್ತು ಸಮಂತಾ ಮುಖ್ಯ ಭೂಮಿಕೆಯಲ್ಲಿದ್ದಾರೆ. ಜಯರಾಮ್, ಸಚಿನ್ ಖೇಡೇಕರ್, ಮುರಳಿ ಶರ್ಮಾ ಲಕ್ಷ್ಮಿ, ಅಲಿ, ರೋಹಿಣಿ, ವೆನ್ನೆಲ ಕಿಶೋರ್, ರಾಹುಲ್ ರಾಮಕೃಷ್ಣ ಮತ್ತು ಶ್ರೀಕಾಂತ್ ಅಯ್ಯಂಗಾರ್ ಪೋಷಕ ಪಾತ್ರಗಳಲ್ಲಿ ನಟಿಸಿದ್ದಾರೆ. ಛಾಯಾಗ್ರಾಹಕ ಜಿ ಮುರಳಿ, ಸಂಯೋಜಕ ಹೇಶಮ್ ಅಬ್ದುಲ್ ವಹಾಬ್ ಮತ್ತು ಸಂಕಲನಕಾರ ಪ್ರವೀನ್ ಪುಡಿ ತಾಂತ್ರಿಕ ಸಿಬ್ಬಂದಿಯ ಭಾಗವಾಗಿದೆ.